ಮಂಡ್ಯ: (ಜ.8) Student Harassment: ಶಾಲೆಗೆ ಮೊಬೈಲ್ ತಂದಿದ್ದಾರೆ ಎಂಬ ಒಂದೇ ಕಾರಣಕ್ಕಾಗಿ ಮುಖ್ಯಶಿಕ್ಷಕಿ ವಿದ್ಯಾರ್ಥಿನಿಯ ಜೊತೆ ಅಮಾನವೀಯವಾಗಿ ನಡೆದುಕೊಂಡ ಘಟನೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂಗೂರು ಇಂತಹದೊಂದು ಅಮಾನವೀಯ ಘಟನೆಗೆ ಸಾಕ್ಷಿಯಾಗಿದೆ.ಶಾಲೆಗೆ ವಿದ್ಯಾರ್ಥಿನಿ ಮೊಬೈಲ್ ತಂದಿರುವುದಕ್ಕೆ ವಿದ್ಯಾರ್ಥಿನಿಗೆ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ್ದಾರೆ.

ಮಂಡ್ಯ ಜಿಲ್ಲೆಯ ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಘಟನೆ ನಡೆದಿದ್ದು ಮುಖ್ಯಶಿಕ್ಷಕಿ ಅಭಿವೃದ್ಧಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕಳೆದ ಒಂದು ವಾರದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ತರಗತಿಯ ಎಂಟನೇ ತರಗತಿ ವಿದ್ಯಾರ್ಥಿನಿ ಮೊಬೈಲ್ ತಂದಿದ್ದರು ಎನ್ನಲಾಗಿದೆ. ಮೊಬೈಲ್ ಬಂದಿರುವುದನ್ನು ಗಮನಿಸಿದ ಶಿಕ್ಷಕಿ ವಿದ್ಯಾರ್ಥಿನಿಯನ್ನು ಬೇರೆ ಕೊಠಡಿಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿದ್ದಾರೆ.
ಕೇವಲ ಒಂದು ಶಾಲಾ ಬಾಲಕಿ ಮೊಬೈಲ್ನ ತಂದಿದ್ದಾರೆ ಎನ್ನುವ ಕಾರಣಕ್ಕಾಗಿ ವಿದ್ಯಾರ್ಥಿನಿ ಎಂಬುದನ್ನು ಮರೆತು ಇಂತಹ ಶಿಕ್ಷೆ ನೀಡಿರುವುದು ನಿಜಕ್ಕೂ ವಿಷಾದನೀಯವಾಗಿದೆ.
ಸರ್ಕಾರಿ ಶಾಲೆಯಲ್ಲಿ ಇಂತಹದೊಂದು ಶಿಕ್ಷೆ ನೀಡಿರುವುದು ನಿಜಕ್ಕೂ ಬೇಸರದ ಸಂಗತಿ, ಮುಖ್ಯಶಿಕ್ಷಕಿ ಸ್ನೇಹಲತಾ ಅವರ ನಡೆಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತವಾಗಿದೆ ವಿದ್ಯಾರ್ಥಿನಿ ಸೇರಿದಂತೆ ಪೋಷಕರು ದೂರು ನೀಡಲು ಮುಂದಾಗಿದ್ದಾರೆ ಮುಖ್ಯ ಶಿಕ್ಷಕಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.