ಬೆಂಗಳೂರು: (ಜ.8) Mekedatu ಮೇಕೆದಾಟು ಯೋಜನೆ ಆರಂಭಿಸುವ ಕುರಿತಂತೆ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.
ನಾಳೆಯಿಂದ ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ ಈ ಪಾದಯಾತ್ರೆಯ ರಾಜ್ಯ ಸರ್ಕಾರದಿಂದ ಪರೋಕ್ಷವಾಗಿ ಗ್ರೀನ್ ಸಿಗ್ನಲ್ ಸಿಕ್ಕಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಕರೆ ಮಾಡಿ ನಾಳೆಯಿಂದ ನೀವು ಪಾದಯಾತ್ರೆ ಆರಂಭಿಸುತ್ತಿದ್ದೇವೆ ನೀವು ಪಾದಯಾತ್ರೆಯನ್ನು ಆರಂಭಿಸಬಹುದು ಆದರೆ ಕೊರೋನಾ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ತಿಳಿಸಿದ್ದಾರೆ.
ಸರ್ಕಾರದ ಪಾದಯಾತ್ರೆಗೆ ಅಡ್ಡಿಪಡಿಸುವುದಿಲ್ಲ. ಕರೋನಾ ನಿಬಂಧನೆಗಳನ್ನು ಉಲ್ಲಂಘನೆ ನೋಡಬಾರದು ಉಲ್ಲಂಘನೆ ಮಾಡಿ ಪಾದಯಾತ್ರೆ ಮಾಡಿದರು ಕ್ರಮ ಕೈಗೊಳ್ಳಲಾಗುವುದು ಎಂದು ಪಿಯು ರವಿಕುಮಾರ್ ಅವರು ತಿಳಿಸಿದ್ದಾರೆ.