ನವದೆಹಲಿ: (ಜ.9) Coronavirus:ದೇಶದಲ್ಲಿ ಕೋರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಸಭೆಯನ್ನು ಕರೆದಿದ್ದಾರೆ.
ದೇಶದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು 6ಲಕ್ಷ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 4.30ಕ್ಕೆ ಸಭೆ ನಿಗದಿಯಾಗಿದೆ. ಇಂದು ಒಂದುವರೆ ಲಕ್ಷಕ್ಕಿಂತಲೂ ಹೆಚ್ಚು ಸೋಂಕಿನ ಪ್ರಕರಣಗಳು ದಾಖಲಾಗಿದೆ ಇದರ ಜೊತೆ ಒಮಿಕ್ರಾನ್ ಪ್ರಕರಣಗಳ ಸಂಖ್ಯೆಯೂ ದಾಖಲಾಗುತ್ತದೆ.

ಕೊರೊನಾ ನಿರ್ವಹಣೆಯಲ್ಲಿ ಕಲಬುರಾಗಿ ಸರ್ಕಾರಗಳು ವಿಫಲವಾಗಿರುವ ಅಂಶಗಳು ಕಂಡು ಬಂದಿರುವುದರಿಂದ ಈ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಸ್ಪಷ್ಟ ಸಂದೇಶ ನೀಡಲು ಪ್ರಧಾನಿಯವರು ಸಭೆ ಕರೆದಿದ್ದಾರೆ ಎನ್ನಲಾಗಿದೆ.
ಈ ನಡುವೆ ಆರ್ಥಿಕ ಚಟುವಟಿಕೆಗಳನ್ನು ತೆಗೆದುಕೊಳ್ಳುವುದರ ಬದಲಾಗಿ ಮೈಕ್ರೋ ಕಂಟೋನ್ಮೆಂಟ್ ವಲಯಗಳನ್ನು ನಿರ್ಮಿಸಿಕೊಂಡು ಸೋಂಕು ಹರಡದಂತೆ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ
ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ನೈಟ ಕರ್ಫ್ಯು ವಿಧಿಸಿದೆ. ಸಂಜೆ 4.30 ಕ್ಕೆ ಸಭೆಯಲ್ಲಿ ಹೆಚ್ಚಿನ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.