Pro Chandrashekhar Patil: (ಜ.10) ಕನ್ನಡ ಸಾಹಿತ್ಯ ಹಿರಿಯ ಸಾಹಿತಿ ಪ್ರೊ ಚಂದ್ರಶೇಖರ ಪಾಟೀಲ ಅವರ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ , ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಶಿ ಸೇರಿದಂತೆ ಹಲವರು ಚಂಪಾ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಖ್ಯಾತ ಸಾಹಿತಿ ಪ್ರೊ.ಚಂಪಾ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ
ಚಂಪಾ ಎಂದೇ ಖ್ಯಾತರಾಗಿದ್ದ ಖ್ಯಾತ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
‘ಚಂದ್ರಶೇಖರ ಪಾಟೀಲರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ನಾಡಿನ ಭಾಷೆ, ಸಾಹಿತ್ಯ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು ಚಂಪಾ.

ಅವರು ಕ್ರಾಂತಿಕಾರಿ ಸಾಹಿತಿ ಮಾತ್ರವಲ್ಲದೇ, ವಿಮರ್ಶಕರು, ನಾಟಕಕಾರರು ಹಾಗೂ ಕವಿಗಳಾಗಿದ್ದರು. ರಾಜ್ಯದ ನಾಡು, ನುಡಿಗೆ ಅವರ ಸೇವೆ ಅವಿಸ್ಮರಣೀಯ. ಅವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ.
ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಅಭಿಮಾನಿ ಬಳಗ ಭಗವಂತ ನೀಡಲಿ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಚಂಪಾ ಎಂದೇ ಪ್ರಸಿದ್ಧರಾಗಿದ್ದ ಕವಿ, ನಾಟಕಕಾರ, ಕನ್ನಡ ಪರ ಹೋರಾಟಗಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ ಆಗಿದ್ದ ಶ್ರೀ ಚಂದ್ರಶೇಖರ ಪಾಟೀಲ ಅವರ ನಿಧನದ ಸುದ್ದಿ ತಿಳಿದು ಆಘಾತವಾಯಿತು. ಅವರ ಕುಟುಂಬದವರ ನೋವಿನಲ್ಲಿ ನಾನೂ ಕೂಡ ಭಾಗಿ. pic.twitter.com/Y18buqMXtc
— DK Shivakumar (@DKShivakumar) January 10, 2022
ಸಾಹಿತಿ ಚಂಪಾ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
ಕನ್ನಡ ಸಾಹಿತ್ಯ ಹಿರಿಯ ಸಾಹಿತಿ ಪ್ರೊ ಚಂದ್ರಶೇಖರ ಪಾಟೀಲ ಅವರ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೇರಿದಂತೆ ಹಲವರು ಚಂಪಾ ಅವರ ನಿಧನಕ್ಕೆ
ಕಂಬನಿ ಮಿಡಿದಿದ್ದಾರೆ.
ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ (ಚಂಪಾ) ಅವರು ನಿಧನರಾದ ವಿಷಯದಿಂದ ತುಂಭಾ ದುಃಖಿತನಾಗಿದ್ದೇನೆ.
— Basavaraj S Bommai (@BSBommai) January 10, 2022
ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನವರಾದ ಚಂಪಾ ಅವರು ಒಬ್ಬ ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ.
1/3 pic.twitter.com/MahFYOn3Aq
ಸಾಹಿತಿ ಚಂಪಾ ನಿಧನಕ್ಕೆ ಡಾ.ಮಹೇಶ್ ಜೋಶಿ ಸಂತಾಪ
ಸಾಹಿತಿ ಚಂಪಾ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಶಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಮನು ಬಳಿಗಾರ್ ಸಂತಾಪ ಸೂಚಿಸಿದ್ದಾರೆ. ಚಂಪಾ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ ಎಂದು ಡಾ.ಮಹೇಶ್ ಜೋಶಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಚಂಪಾ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ
ಅನ್ಯಾಯ, ಅಸಮಾನತೆ, ಸರ್ವಾಧಿಕಾರದ ವಿರುದ್ದ ಸಿಡಿಯುತ್ತಲೇ ಇದ್ದ ಹುಟ್ಟು ಬಂಡಾಯಗಾರ, ವೈಚಾರಿಕ ಗುರು ಮತ್ತು ನನ್ನ ದೀರ್ಘಕಾಲದ ಸ್ನೇಹಿತರಾಗಿದ್ದ ಪ್ರೊ.ಚಂದ್ರಶೇಖರ ಪಾಟೀಲ್ ನಿಧನದಿಂದ ದು:ಖಿತನಾಗಿದ್ದೇನೆ.
— Siddaramaiah (@siddaramaiah) January 10, 2022
ಇವರ ಕುಟುಂಬ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.
ಭಾವಪೂರ್ಣ ಶ್ರದ್ಧಾಂಜಲಿ.
🙏 pic.twitter.com/Og7mxLyWkW
ಸಾಹಿತಿ ಚಂಪಾ ನಿಧನಕ್ಕೆ ಹೆಚ್.ಡಿ ಕುಮಾರಸ್ವಾಮಿ ಸಂತಾಪ
ಕನ್ನಡಪರ ಹೋರಾಟಗಾರ, ಕವಿ, ನಾಟಕಕಾರ, ಸಂಘಟನಕಾರ, ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ. 1/2 pic.twitter.com/VRDbCvGdJE
— H D Kumaraswamy (@hd_kumaraswamy) January 10, 2022
Pro.Chandrashekhar Patil:ಹಿರಿಯ ಕನ್ನಡ ಸೇನಾನಿ ಪ್ರೋ. ಚಂದ್ರಶೇಖರ ಪಾಟೀಲ್ (ಚಂಪಾ)ವಿಧಿವಶ!