ಬೆಂಗಳೂರು: (ಜ.10) Corona Positive: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಇಂದು ಕೋವಿಡ್ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಮುಖ್ಯಮಂತ್ರಿ ಅವರು ಅಧಿಕೃತವಾಗಿ ಟ್ವೀಟ್ ಮಾಡಿದ್ದು, ನನಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ ಆರೋಗ್ಯವಾಗಿದ್ದೇನೆ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸೂಚಿಸಿದ್ದಾರೆ.
ಸೌಮ್ಯ ರೋಗಲಕ್ಷಣಗಳು ಇದೆ ನಾನು ಆರೋಗ್ಯವಾಗಿದ್ದೇನೆ. ಹಾಗೂ ನಾನು ಹೊಂ ಕ್ವಾರಂಟೈನ್ ನಲ್ಲಿ ಇದ್ದೇನೆ.
ನನ್ನ ಸಂಪರ್ಕದಲ್ಲಿ ಬಂದಿರುವ ಪ್ರತಿಯೊಬ್ಬರೂ ಪರೀಕ್ಷಿಕೊಳ್ಳಿ ತಮ್ಮನ್ನು ತಾವು ಪ್ರತ್ಯೇಕವಾಗಿ ಇರಲು ವಿನಂತಿಸುತ್ತೇನೆ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಹಿರಿಯ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ ಅವರ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿದ್ದರು ಹಾಗೂ ಇಂದಿನಿಂದ ಬೂಸ್ಟರ್ ಡೋಸ್ ಲಸಿಕೆ ಆರಂಭವಾಗಿದ್ದು ಅಲ್ಲಿಯೂ ಕೂಡ ಬೊಮ್ಮಾಯಿಯವರು ಭಾಗಿಯಾಗಿದ್ದರು ಎನ್ನಲಾಗಿದೆ.
I have tested positive for COVID -19 today with mild symptoms. My health is fine, I am under home quarantine. I request everyone who have recently come in my contact to isolate themselves and get tested.
— Basavaraj S Bommai (@BSBommai) January 10, 2022