ನವದೆಹಲಿ: (ಜ.10) PM Meeting: ದೇಶದ ವಿವಿಧ ರಾಜ್ಯಗಳ ಕೋವಿಡ್ ಸ್ಥಿತಿಗತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದರು.

ಸಭೆಯಲ್ಲಿ ನೆಡೆಸಿದ ಚರ್ಚೆಗಳು:
- ಜಿಲ್ಲಾಮಟ್ಟದ ಆರೋಗ್ಯ ಮೂಲಸೌಕರ್ಯವನ್ನು ಖಚಿತಪಡಿಸಿಕೊಳ್ಳಬೇಕಾದ ಅಗತ್ಯ ಕ್ರಮವನ್ನು ಪ್ರಧಾನಿ ಮೋದಿ ಸಭೆಯಲ್ಲಿ ಚರ್ಚಿಸಿದ್ದಾರೆ.
- 15ರಿಂದ 18 ವರ್ಷದವರೆಗೆ ಮಕ್ಕಳಿಗೆ ಲಸಿಕೆಯನ್ನು ವೇಗವಾಗಿ ಹೆಚ್ಚಿಸುವಂತೆ ಸಭೆಯಲ್ಲಿ ಒತ್ತಾಯಿಸಿದ್ದಾರೆ.
- ಪ್ರಕರಣಗಳು ವರದಿಯಾಗುತ್ತಿರುವ ಪ್ರದೇಶಗಳಲ್ಲಿ ಕಠಿಣ ನಿರ್ಬಂಧಗಳು ಹಾಗೂ ಕಣ್ಗಾವಲು ವ್ಯವಸ್ಥೆ ಮುಂದುವರಿಸಬೇಕು ಎಂದು ಹೇಳಿದ್ದಾರೆ.
- ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗುತ್ತಿಲ್ಲ ರಾಜ್ಯಗಳಿಗೆ ಅಗತ್ಯವಾದ ತಾಂತ್ರಿಕ ಬೆಂಬಲವನ್ನು ಒದಗಿಸುವುದಾಗಿ ತಿಳಿಸಿದ್ದಾರೆ.
- ರಾಜ್ಯದ ಕೋವಿಡ್ ಸ್ಥಿತಿಗತಿ ಹಾಗೂ ಸಾರ್ವಜನಿಕರ ಆರೋಗ್ಯಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಕುರಿತು ಚರ್ಚಿಸಲು ಶೀಘ್ರದಲ್ಲೇ ಜಿಲ್ಲಾಧಿಕಾರಿಗಳೊಂದಿಗೆ ಸಭೆ ಕರೆಯಲಾಗುವುದು ಎಂದು ಹೇಳಿದ್ದಾರೆ.
- ಸಾರ್ವಜನಿಕರಿಗೆ ಯಾವುದೇ ಆರೋಗ್ಯ ಸೇವೆಗಳಲ್ಲಿ ತೊಂದರೆಯಾಗಬಾರದು
- ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಸಮಾವೇಶ, ರೋಡ್ಶೋ ಮತ್ತು ಸಭೆಗಳನ್ನು ಜನವರಿ 15ರವರೆಗೆ ನಡೆಸಬಾರದು
- ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 8 ಗಂಟೆಯವರೆಗೆ ರಾಜಕೀಯ ಚಟುವಟಿಕೆಗಳನ್ನು ನಡೆಸಬಾರದು.ಈ ಸಭೆಯಲ್ಲಿ ಪಿಎಂಒ (PMO) ಅಧಿಕಾರಿಗಳನ್ನ ಹೊರತುಪಡಿಸಿ, ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಸಂಪುಟ ಕಾರ್ಯದರ್ಶಿ ರಾಜೀವ್ ಗಾಬಾ, ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಐಸಿಎಂಆರ್ ಡಿಜಿ ಮತ್ತು ಇತರ ಅಧಿಕಾರಿಗಳು ಹಾಜರಿದ್ದರು.
Coronavirus:ಕರ್ನಾಟಕಕ್ಕೆ ಕೊರೊನಾ ಗಂಡಾಂತರ! ರಾಜ್ಯದಲ್ಲಿ ಒಂದು ಲಕ್ಷ ಕೇಸ್