ನವದೆಹಲಿ: (ಜ.10) PM Modi Security Failure: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಂಜಾಬ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಉಂಟಾದ ಭದ್ರತಾ ವೈಫಲ್ಯದ ಕುರಿತು ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು.
ಭದ್ರತಾ ವೈಫಲ್ಯದ ಕುರಿತು ತನಿಖೆ ನಡೆಸುವಂತೆ ಕೋರಿ ಲಾಯರ್ಸ್ ವಾಯ್ಸ್ ಸಂಘಟನೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನ್ಯಾಯಮೂರ್ತಿಗಳಾದ ಸೂರ್ಯಕಾಂತ ಹಾಗೂ ಹಿಮಾ ಕೊಹ್ಲಿ ಅವರ ನೇತೃತ್ವದಲ್ಲಿ ವಿಚಾರಣೆ ನಡೆಯಿತು.

ಪಂಜಾಬ್ ಸರ್ಕಾರದ ಪರ ವಕಾಲತ್ತು ವಹಿಸಿದ ಅಡ್ವೊಕೇಟೆ ಜನರಲ್ ಡಿ. ಎಸ್ ಪಟ್ವಾಲಿಯ ಅವರು, ಪ್ರಧಾನಿ ಅವರ ಪ್ರಯಾಣದ ವಿವರಗಳನ್ನು ಹೈಕೋರ್ಟ್ ರಿಜಿಸ್ಟರ್ ಜನರಲ್ ಅವರು ಅಧಿಕೃತವಾಗಿ ಪರಿಗಣಿಸಿದ್ದಾರೆ ಎಂದು ತಿಳಿಸಿದ್ದಾರೆ. ಯಾವುದೇ ವಿಚಾರಣೆ ನಡೆಸದೆ ರಾಜ್ಯದ ಪೊಲೀಸ್ ಹಾಗೂ ಅಧಿಕಾರಿಗಳಿಗೆ ಏಳು ಶೋಕಾಸ್ ನೋಟಿಸ್ ಗಳನ್ನು ನೀಡಲಾಗಿದೆ.
ತನಿಖೆ ಸ್ಥಗಿತಗೊಂಡಿರುವ ಆಗ ಶೋಕಾಸ್ ನೋಟಿಸ್ ಎಲ್ಲಿಂದ ಬಂತು ಕೇಂದ್ರ ಸರ್ಕಾರದಿಂದ ದೊರೆಯುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪ್ರತಿಭಟನಾ ಪ್ರದೇಶದಿಂದ 100 ಮೀಟರ್ ದೂರದಲ್ಲಿರುವ ಸ್ಥಳಕ್ಕೆ ಪ್ರಧಾನಿ ಬೆಂಗಾವಲುಪಡೆ ತಲುಪಿತ್ತು, Blue Book ಪ್ರಕಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದ್ದು ಕಡಿಮೆ ಅನಾನುಕೂಲತೆ ಇರುವ ರೀತಿಯಲ್ಲಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ನಿರ್ದೇಶನ ನೀಡಬೇಕು.

ಮೇಲ್ಸೇತುವೆ ಬಳಿ ಜನಸಂದಣಿ ಇದೆ ಎಂಬ ಬಗ್ಗೆ ಬೆಂಗಾವಲು ಪಡೆಗೆ ಯಾವುದೇ ಸೂಚನೆ ದೊರೆತಿರಲಿಲ್ಲ ಸಂಪೂರ್ಣ ಗುಪ್ತಚರ ವೈಫಲ್ಯ ಎಂದು ಹೇಳಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರ ಸಮಿತಿ ಪರಿಶೀಲಿಸಬೇಕಿದೆ ಎಂದು ಹೇಳಿದ್ದಾರೆ.
ಈ ನಡುವೆ ಕೇಂದ್ರ ಸತ್ಯ ಶೋಧನೆ ನಡೆಸುವ ಅಗತ್ಯವಿದೆ ಎಂದು ನ್ಯಾಯಾಲಯ ಪ್ರಶ್ನಿಸಿದೆ. ಶೋಕಾಸ್ ನೋಟಿಸ್ ನೀಡಿ ಈ ಮೂಲಕ ಹೇಗೆ ಮುಂದುವರಿಯಬೇಕು ಎಂಬ ಬಗ್ಗೆ ನಿರ್ಧಾರ ಕೈಗೊಂಡಿದ್ದೀರಿ ಹಾಗಿದ್ದಾಗ ನ್ಯಾಯಾಲಯ ವಿಚಾರಣೆ ನಡೆಸಬೇಕು ಎಂದು ಪ್ರಶ್ನೆ ಮಾಡಿದೆ.
ನ್ಯಾ. ಕೊಹ್ಲಿ:“ನಮ್ಮ ಆದೇಶಕ್ಕಿಂತ ಮೊದಲು ಕೇಂದ್ರ ಸರ್ಕಾರ ಶೋಕಾಸ್ ನೋಟಿಸ್ ನೀಡಿದೆ. 24 ಗಂಟೆಗಳಲ್ಲಿ ಉತ್ತರಿಸುವಂತೆ ಅಧಿಕಾರಿಗಳಿಗೆ ಸೂಚಿಸುವುದನ್ನು ಕೇಂದ್ರ ಸರ್ಕಾರದಿಂದ ನಿರೀಕ್ಷಿಸಲಾಗದು ಎಂದರು.
ಸಿಜೆಐ ರಮಣ:“ನೀವು ರಾಜ್ಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲು ಬಯಸಿದರೆ, ಈ ನ್ಯಾಯಾಲಯಕ್ಕೆ ಏನು ಉಳಿದಿದೆ?” ಎಂದು ಪ್ರಶ್ನಿಸಿದರು.
ನಂತರ ನ್ಯಾಯಮೂರ್ತಿಗಳು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸಲು ನಿರ್ಧರಿಸಿದರು. ಪಂಜಾಬ್ ಪೊಲೀಸ್ ಇಲಾಖೆಯ ಗುಪ್ತಚರ ದಳ, ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾ ನಿರ್ದೇಶಕರು, ಸಮಿತಿಯ ಉಳಿದ ಸದಸ್ಯರಾಗಿರುತ್ತಾರೆ ಎಂದು ನ್ಯಾಯಾಲಯ ಸೂಚಿಸಿದೆ. ಘಟನೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಗಳನ್ನು ಸಧ್ಯಕ್ಕೆ ಸ್ಥಗಿತಗೊಳಿಸಿ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
Covid Pills: ಕೋವಿಡ್‌ಗೆ ಬಂತು ಕಡಿಮೆ ಬೆಲೆಯ ಮಾತ್ರೆ: ₹1,400ರಲ್ಲಿ ಪೂರ್ತಿ ಔಷಧ ಲಭ್ಯ