ಬೆಂಗಳೂರು:( ಜ.10) ಹಿರಿಯ ಕನ್ನಡ ಸಾಹಿತಿ ಚಂದ್ರಶೇಖರ ಪಾಟೀಲ(83) ಇಂದು ವಿಧಿವಶರಾಗಿದ್ದಾರೆ. ಚಂದ್ರಶೇಖರ ಪಾಟೀಲ ಅವರು ಕನ್ನಡ ನಾಡು ನುಡಿ ಸಂಸ್ಕೃತಿ ಬಗ್ಗೆ ಅಪಾರ ಕಾಳಜಿ ಹಾಗೂ ರಕ್ಷಣೆಗಾಗಿ ಹೋರಾಡಿದವರು.
ಚಂಪಾ ಎಂದೇ ಪರಿಚಿತರಾಗಿದ್ದ ಪ್ರೊ. ಚಂದ್ರಶೇಖರ್ ಪಾಟೀಲ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ ಬೆಂಗಳೂರಿನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು, ಲೇಖಕರು ಪ್ರಾಧ್ಯಾಪಕರು ಪತ್ರಕರ್ತರು ಹಾಗೂ ಸಂಘಟಕರು ಆಗಿದ್ದ ಪ್ರೊ. ಚಂದ್ರಶೇಖರ್ ಪಾಟೀಲ್ ಅವರಿಗೆ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿರುವ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಹಾಗೂ ಚಿಕಿತ್ಸೆಗೂ ಸ್ಪಂದಿಸುತ್ತಿದ್ದರು. ಈ ಬಗ್ಗೆ ಕುಟುಂಬದವರು ಕೂಡ ಸಂಪಾದಕ ಆರೋಗ್ಯದಲ್ಲಿ ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ಹೇಳಿದ್ದರು. ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ
ಕನ್ನಡ ವಿಚಾರ ಬಂದಾಗ ಮುಂದೆ ನಿಂತು ಹೋರಾಟ ಮಾಡುತ್ತಿದ್ದ ಕನ್ನಡ ಸೇನಾನಿಯಾಗಿದ್ದರು. ಹಾವೇರಿ ಜಿಲ್ಲೆಯವರಾದ ಚಂಪಾ ಅವರು ಕನ್ನಡಪರ ಹೋರಾಟಗಳಲ್ಲಿ ಭಾಗವಹಿಸಿದ್ದರು 2017ರಲ್ಲಿ ಮೈಸೂರಿನಲ್ಲಿ ನಡೆದ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಚಂಪಾ ಅವರ ನಾಡು-ನುಡಿಗೆ ಸಲ್ಲಿಸಿದ ಸೇವೆಗಳಿಗಾಗಿ ಸಾಕಷ್ಟು ಪ್ರಶಸ್ತಿಗಳು ಗೌರವಗಳನ್ನು ಅರಸಿಕೊಂಡು ಬಂದಿತ್ತು.
ಹಲವು ಯುವ ಬರಹಗಾರರಿಗೆ ಸ್ಪೂರ್ತಿಯಂತೆ ಬೆನ್ನೆಲುಬಾಗಿ ಇದ್ದರು, ಅವರ ನಿಧನದಿಂದ ಸಾಹಿತ್ಯ ಲೋಕದ ಇನ್ನೊಂದು ಕೊಂಡಿ ಕಳಚಿದಂತಾಗಿದೆ.