ಬೆಂಗಳೂರು: (ಜ.17) Coronavirus ಕೋವಿಡ್ ಪರಿಸ್ಥಿತಿ ನಿರ್ವಹಣೆಯ ಕುರಿತು ವಿಶೇಷ ಕಾರ್ಯಪಡೆ ರಚಿಸಿದ್ದಾರೆ. ಕಾರ್ಯಪಡೆಯಲ್ಲಿ ಸದಸ್ಯರಾಗಿರುವ ಎಲ್ಲರೂ ಕೆಲಸ ಮಾಡುತ್ತಿದ್ದೇವೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಪಾಸಿಟಿವ್ ಬಂದಿರುವವರಿಗೆ ಗಾಬರಿ ಪಡುವುದು ಬೇಡ ಅಂತ ಅವರಿಗೆ ಸೂಕ್ತ ಚಿಕಿತ್ಸೆ ಮಾಡಲಾಗುವುದು. ಮೆಡಿಕಲ್ ಕಿಟ್ಟ್ ವ್ಯವಸ್ಥೆ ಮಾಡಿಸಲಾಗುವುದು. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮಾರ್ಗದರ್ಶನ ಗಳಲ್ಲಿ ಇಂದಿಗೂ ಪರೀಕ್ಷೆಗಳನ್ನು ಮುಂದುವರಿಸುತ್ತಿದ್ದೇವೆ ಎಂದು ವಿವರಿಸಿದ್ದಾರೆ.

ವೀಕೆಂಡ್ ಕರ್ಫ್ಯೂ ಬೇಡ:
ಹೋಟೆಲ್ ಉದ್ಯಮಿಗಳು ವೀಕೆಂಡ್ ಕರ್ಫ್ಯೂ ಬೇಡ ಎಂದು ವಿರೋಧಿಸುತ್ತಿದ್ದಾರೆ. ಮುಂದಿನ ಶುಕ್ರವಾರದ ಸಭೆಯಲ್ಲಿ ಇದರ ಕುರಿತು ತೀರ್ಮಾನ ಮಾಡಲಾಗುತ್ತದೆ ಹಾಗೂ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಲಾಗುವುದು. ಪಾಸಿಟಿವ್ ಬಂದವರ ಮನೆಯಲ್ಲಿ ಚಿಕಿತ್ಸೆ ಪಡೆದವರ ಮೇಲೆ ನಿಗಾ ಇರಿಸುವಂತೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದ್ದಾರೆ.
ಹೋಮ್ ಇಸೋಲೇಷನ್ ನಂದಿ ಇರುವವರಿಗೆ ಧೈರ್ಯ ತುಂಬಿ ಬೇಗ ಗುಣಮುಖರಾಗುವಂತೆ ಧೈರ್ಯ ತುಂಬಬೇಕು. ಅವರಿಗೆ ಮೆಡಿಕಲ್ ಸೀಟುಗಳನ್ನು ತಲುಪಿಸುವ ವ್ಯವಸ್ಥೆ ಮಾಡಬೇಕಾಗಿದೆ ಆದಷ್ಟು ಬೇಗ ಕಿಟ್ ನೀಡುತ್ತಿವೆ ಎಂದು ಹೇಳಿದ್ದಾರೆ.
ಕೊರೊನಾ ಸೋಂಕು ಪರಿಹಾರಕ್ಕಾಗಿ ಸ್ವಯಂಸೇವಕರನ್ನು ನೇಮಕ ಮಾಡಲು ಸೂಚನೆ ನೀಡಲಾಗಿದೆ ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಿದ್ದಾರೆ ಎಂದು ಸುಧಾಕರ್ ಅವರು ತಿಳಿಸಿದ್ದಾರೆ.
ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಉತ್ತಮ ಪರಿಸ್ಥಿತಿಯಲ್ಲಿ ಇದೆ. ಸೋಂಕಿನ ಪ್ರಮಾಣ, ಸಾವಿನ ಪ್ರಮಾಣ ಕಡಿಮೆ ಇದೆ ಎಂದು ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ
ಇದನ್ನೂ ಓದಿ:Section 144: ರಾಜಧಾನಿಯಲ್ಲಿ 144 ಸೆಕ್ಷನ್ ವಿಸ್ತರಣೆ: ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ