Latha Mangeshkar: (ಜ.17) ಖ್ಯಾತ ಗಾಯಕಿ ಲತಾಮಂಗೇಶ್ಕರ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋವಿಡ್ ಸೋಂಕಿಗೆ ಒಳಗಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲತಾ ಮಂಗೇಶ್ಕರ್ ಅವರ ವಯಸ್ಸು 92 ಆಗಿದ್ದು ಸಹಜವಾಗಿಯೇ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಮುಂಬೈನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು ಹಲವುದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಲತಾ ಅವರ ಆರೋಗ್ಯ ಚೇತರಿಸಿದೆ:
ಈ ನಡುವೆ ಕೆಲವರು ಲತಾ ಮಂಗೇಶ್ಕರ್ ಅವರ ಆರೋಗ್ಯ ಹದಗೆಡುತ್ತದೆ ಎಂದು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಲತಾಮಂಗೇಶ್ಕರ್ ಅವರ ಆರೋಗ್ಯದ ಕುರಿತು ಬೇಡವಾದ ಸುದ್ದಿಗಳನ್ನು ಹಾಕಲಾಗುತ್ತಿದೆ. ಲತಾ ಮಂಗೇಶ್ಕರ್ ಅವರ ಆರೋಗ್ಯದ ಕುರಿತು ಕುಟುಂಬದವರು ಹಾಗೂ ವೈದ್ಯರು ಮಾಹಿತಿ ನೀಡಿದ್ದಾರೆ. ದಯವಿಟ್ಟು ಯಾರೂ ಕೂಡ ಲತಾ ಮಂಗೇಶ್ಕರ್ ಅವರ ಆರೋಗ್ಯದ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡಬೇಡಿ ಎಂದು ಅವರ ಪರ ವಕ್ತಾರರು ತಿಳಿಸಿದ್ದಾರೆ.
ಲತಾ ಮಂಗೇಶ್ಕರ್ ಅವರಿಗೆ ಕೋವಿಡ್ ಜೊತೆಗೆ ನಿಮೋನಿಯಾ ಕೂಡ ಆಗುವುದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ತಂಡ ನಿರಂತರವಾಗಿ ಲತಾ ಮಂಗೇಶ್ಕರ್ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ. ನಿಜಕ್ಕೂ ಲತಾ ಮಂಗೇಶ್ಕರ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಹಾಗೂ ಅವರ ಆರೋಗ್ಯ ಸ್ಥಿರವಾಗಿದೆ ಆದಷ್ಟು ಬೇಗ ಗುಣಮುಖರಾಗಿ ಮನೆಗೆ ಬರಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಹಾಗೂ ಲತಾ ಮಂಗೇಶ್ಕರ್ ಅವರ ಆರೋಗ್ಯಕ್ಕಾಗಿ ವಿಶೇಷ ಪೂಜೆಯನ್ನು ಕುಟುಂಬದವರು ನಡೆಸುತ್ತಿದ್ದಾರೆ.
ಲತಾ ಮಂಗೇಶ್ಕರ್ ಆರೋಗ್ಯದ ಕುರಿತು ಮಹಾರಾಷ್ಟ್ರ ಆರೋಗ್ಯ ಸಚಿವ ರಾಕೇಶ ಟೋಪಿ ಅವರು ಹೇಳಿಕೆ ನೀಡಿದ್ದು, ಲತಾ ಮಂಗೇಶ್ಕರ್ ಅವರ ಆರೋಗ್ಯ ಸುಧಾರಿಸುತ್ತಿದೆ ಆಸ್ಪತ್ರೆಯ ಆಡಳಿತ ವರ್ಗದವರ ಜೊತೆ ನಾನು ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Narayana Guru:ಹಿಂದೂ ಧರ್ಮದ ಬಗ್ಗೆ ಮಾತಾಡುವ ನೈತಿಕತೆ ಇದಿಯೇ? : ವಿಪಕ್ಷನಾಯಕ ಸಿದ್ದರಾಮಯ್ಯ