ಬೆಂಗಳೂರು: (ಜ.18) Covid Positive: ರಾಜಧಾನಿ ಬೆಂಗಳೂರಿನ ಬಿಎಂಟಿಸಿ ಮತ್ತು ನಮ್ಮ ಮೆಟ್ರೋ ಸಿಬ್ಬಂದಿಗಳಲ್ಲಿ ಕೋವಿಡ್ ಸೋಂಕು ತಗುಲಿದೆ. ಕಳೆದವಾರ ಹೆಚ್ಚಿನ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗಿತ್ತು. ಈ ಎರಡು ನಿಗಮಗಳಲ್ಲಿ ಒಟ್ಟು 250 ಸಿಬ್ಬಂದಿಗಳಿಗೆ ಸೋಂಕು ದೃಡಪಟ್ಟಿದೆ.

ಬಿಎಂಟಿಸಿಯ 163 ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ತಗುಲಿದೆ ಎಂದು ಬಿಎಂಟಿಸಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ನಮ್ಮ ಮೆಟ್ರೋ ನಿಗಮದ 82 ಸಿಬ್ಬಂದಿಗಳಿಗೆ ಸೋಂಕು ತಗುಲಿದೆ. ಕೇಂದ್ರ ಕಛೇರಿಯ ಏಳು ಸಿಬ್ಬಂದಿಗೆ ಪಾಸಿಟಿವ್ ಬಂದಿತ್ತು, ಹೆಚ್ಚುವರಿ 380 ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆ ಮಾಡಿಸಲಾಗಿತ್ತು. ಈ ಪೈಕಿ 87 ಜನರಿಗೆ ಕೋವಿಡ್ ಪಾಸಿಟಿವ್ ರಿಪೋರ್ಟ್ ಬಂದಿದೆ.
ಸಿಬ್ಬಂದಿಗಳಲ್ಲಿ ಪಾಸಿಟಿವ್ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಅರ್ಧದಷ್ಟು ಸಿಬ್ಬಂದಿಗಳು ಮಾತ್ರ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಿಗಮದಲ್ಲಿ ಮುನ್ನೆಚ್ಚರಿಕೆ ಕ್ರಮ:
ಮೆಟ್ರೋ ಹಾಗೂ ಸಾರಿಗೆ ಸಂಸ್ಥೆಗಳಲ್ಲಿ ಸೋಂಕು ಹೆಚ್ಚಾಗಿ ತಾಗಲಿರುವುದರಿಂದ ಸಂಸ್ಥೆಯ ಡ್ರೈವರ್, ನಿರ್ವಾಹಕ, ಮೆಕ್ಯಾನಿಕ್ ಸೆಕ್ಯೂರಿಟಿ ಗಾರ್ಡ್ ಹಾಗೂ ಅಧಿಕಾರಿಗಳು ಸೇರಿದಂತೆ ಎಲ್ಲಾ ಕಡೆಯೂ ಪಾಸಿಟಿವ್ ಬಂದ ಸಿಬ್ಬಂದಿಗಳನ್ನು ಮನೆಯಲ್ಲಿ ಇರಲು ಸೂಚನೆ ನೀಡಲಾಗಿದೆ. ಎಲ್ಲಾ ಬಸ್ಸು ನಿಲ್ದಾಣಗಳಲ್ಲಿ ಸ್ಯಾನಿಟೈಸ್ ಮಾಡಲು ಆದೇಶ ನೀಡಲಾಗಿದೆ.
ಇದನ್ನೂ ಓದಿ:Coronavirus : ಶಾಲೆಯಲ್ಲಿ 5ಕ್ಕಿಂತ ಹೆಚ್ಚು ಪಾಸಿಟಿವ್ ಬಂದರೆ ತಾತ್ಕಾಲಿಕ ಶಾಲೆ ಬಂದ್: ಡಿಸಿ ಆದೇಶ