ದಕ್ಷಿಣ ಕನ್ನಡ:(ಜ.20) New Guidelines: ಶಿಕ್ಷಣ ಸಂಸ್ಥೆಗಳಲ್ಲಿ ನೂತನ ಮಾರ್ಗಸೂಚಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಅವರು ಪ್ರಕಟಿಸಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಕ್ಲಸ್ಟರ್ ಗಳು ಪತ್ತೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಿಷೇಧಿಸಲು ಆದೇಶವನ್ನು ಹೊರಡಿಸಿದ್ದಾರೆ.

ನೂತನ ಮಾರ್ಗಸೂಚಿಯಲ್ಲಿ ಏನಿದೆ?
- ಮೆಡಿಕಲ್, ಪ್ಯಾರಾಮೆಡಿಕಲ್ ವೈದ್ಯಕೀಯ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಕೋವಿಡ್ ಲಕ್ಷಣಗಳು ಇರುವ ಬಗ್ಗೆ ಪ್ರತಿದಿನ ಸ್ಕ್ರೀನಿಂಗ್ ಮಾಡಿಸಬೇಕು.
- ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಮಾರ್ಗಸೂಚಿಯ ಪ್ರಕಾರ ಚಿಕಿತ್ಸೆಗೆ ಒಳಪಡಿಸಬೇಕು.
- ಮುಂದಿನ ಆದೇಶದವರೆಗೆ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡಾಕೂಟ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.
- ಶಿಕ್ಷಣ ಸಂಸ್ಥೆಗಳಲ್ಲಿ ಸಮ್ಮೇಳನಗಳು , ಕಾರ್ಯಗಾರ ಹಮ್ಮಿಕೊಂಡಿದ್ದಾರೆ ಸಾಧ್ಯವಿದ್ದರೆ ಅದನ್ನು ಮುಂದೂಡುವುದು ಅಥವಾ ಬದಲಾಗಿ ವರ್ಚುವಲ್ ಮೂಲಕ ನೀಡಲಾಗಿದೆ.
- ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ಯಾವುದೇ ಇತರ ಕಾರ್ಯಕ್ರಮಗಳನ್ನು ನಡೆಸಬೇಕಾದ ಜಿಲ್ಲಾಡಳಿತದ ಪೂರ್ವಾನುಮತಿ ಕಡ್ಡಾಯವಾಗಿ ಪಡೆಯಬೇಕು.
- ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ವೃತ್ತಿಪರರು, ಕ್ಷೇತ್ರದಲ್ಲಿನ ವೃತ್ತಿಪರರಿಗೆ ಸಮ್ಮೇಳನಗಳು ಸೆಮಿನಾರು ಸೇರಿದಂತೆ ಇತರ ಕಾರ್ಯಕ್ರಮಗಳನ್ನು ಆನ್ಲೈನ ಮೂಲಕವೇ ಸಂದೇಶವನ್ನು ಕಳುಹಿಸಬೇಕು.
- ಎಲ್ಲ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಕ್ಯಾಂಪಸ್ ಒಳಗೆ ಕೋವಿಡ್ ಸಮುಚಿತ ವರ್ತನೆಗಳನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಕಾಳಜಿ ವಹಿಸಬೇಕು.
- ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಪಾಲಕರೊಂದಿಗೆ ಚರ್ಚಿಸಿ ಆನ್ಲೈನ್ ಅಥವಾ ಆಫ್ಲೈನ್ ಕ್ಲಾಸ್ ಗಳ ನಡೆಸುವ ಬಗ್ಗೆ ಕ್ರಮ ಕೈಗೊಳ್ಳಬೇಕು.
- ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ 5 ಕೋವಿಡ್ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಯನ್ನು ಒಂದುವಾರದ ಮಟ್ಟಿಗೆ ಕಡ್ಡಾಯವಾಗಿ ಮುಚ್ಚಬೇಕು. ಮತ್ತು ಆ ಶಿಕ್ಷಣ ಸಂಸ್ಥೆಯನ್ನು ಸ್ಯಾನಿಟೈಸ್ ಮಾಡಿ ಶುಚಿಗೊಳಿಸಬೇಕು.
- ಎಲ್ಲ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಲಸಿಕೆ ಪಡೆದುಕೊಳ್ಳಬೇಕು.
- ಶಿಕ್ಷಣ ಸಂಸ್ಥೆಗಳಿಗೆ ಯಾವುದೇ ಸಮಸ್ಯೆ ಅಥವಾ ಮಾಹಿತಿ ಬೇಕಾದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹೆಲ್ಪ್ ಲೈನ್ ಸಂಪರ್ಕ ಮಾಡಬಹುದು.
- ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ವೈರಾಣು ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ. ಆದೇಶವನ್ನು ಉಲ್ಲಂಘಿಸಿ ದಲ್ಲಿ ಅಂಥವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.