Secular TV
Wednesday, March 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

D.K Shivakumar:ಸಿಎಂ ನಾಯಕತ್ವ ಬದಲಾವಣೆಗೆ ಅವರ ಪಕ್ಷದವರೇ ಪ್ರಯತ್ನ ಮಾಡುತ್ತಿದ್ದಾರೆ:ಡಿ.ಕೆ. ಶಿವಕುಮಾರ್

Secular TVbySecular TV
A A
Reading Time: 1 min read
D.K Shivakumar:ಸಿಎಂ ನಾಯಕತ್ವ ಬದಲಾವಣೆಗೆ ಅವರ ಪಕ್ಷದವರೇ ಪ್ರಯತ್ನ ಮಾಡುತ್ತಿದ್ದಾರೆ:ಡಿ.ಕೆ. ಶಿವಕುಮಾರ್
0
SHARES
Share to WhatsappShare on FacebookShare on Twitter

D.K Shivakumar: (ಜ.24): ಕೆಲ ಸಚಿವರು ಸೇರಿದಂತೆ ಬಿಜೆಪಿ ಮುಖಂಡರು ಡಿ.ಕೆ. ಶಿವಕುಮಾರ್ ಅವರ ಸಂಪರ್ಕದಲ್ಲಿದ್ದಾರೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, ‘ಬಿಜೆಪಿ ಹಾಗೂ ಇತರೆ ಪಕ್ಷಗಳ ನಾಯಕರು ನಮ್ಮ ಜತೆ ಸಂಪರ್ಕದಲ್ಲಿರುವ ವಿಚಾರವನ್ನು ನಾವು ಬಹಿರಂಗವಾಗಿ ಮಾತನಾಡಲು ಸಾಧ್ಯವಿಲ್ಲ ಎಂದರು.

ವಿಧಾನ ಪರಿಷತ್ ಹಾಗೂ ಶಾಸಕರ ವಿಚಾರ ಚರ್ಚೆ ಮಾಡಲು ಆಗುವುದಿಲ್ಲ. ಅವರ ಪಕ್ಷದಲ್ಲಿ ಏನಾಗುತ್ತಿದೆ ಎಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ. ನಮ್ಮ ಜತೆ ಮಾತನಾಡಿರುವವರ ಬಗ್ಗೆ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯನವರ ಜತೆ ಯಾರೆಲ್ಲಾ ಮಾತನಾಡುತ್ತಿದ್ದಾರೆ ಎಂದು ಸಚಿವರುಗಳನ್ನೇ ಕೇಳಿ.

ಈ ಪ್ರಶ್ನೆಯನ್ನು ನನ್ನ ಬಳಿ ಕೇಳುವ ಬದಲು ಅವರನ್ನೇ ಕೇಳಿ. ನನ್ನ ಬಳಿ ಯಾರು ಮಾತನಾಡುತ್ತಾರೆ ಎಂಬ ಮಾಹಿತಿಯನ್ನು ನಾನ್ಯಾಕೆ ಬಿಟ್ಟು ಕೊಡಲಿ? ಇದರಲ್ಲಿ ಗೌಪ್ಯತೆ ಕಾಪಾಡಿಕೊಳ್ಳುವುದು ಮುಖ್ಯ. ಇದು ರಾಜಕಾರಣದ ಒಂದು ಭಾಗ. ಪ್ರತಿಯೊಬ್ಬ ನಾಯಕರು ತಮ್ಮ ರಾಜಕೀಯ ಭವಿಷ್ಯ ರೂಪಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸುತ್ತಾರೆ. ಜನ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಯಾವ ರೀತಿ ಸಂದೇಶ ನೀಡುತ್ತಾರೆ ಎಂಬುದರ ಮೇಲೆ ಅವರು ತೀರ್ಮಾನ ಮಾಡುತ್ತಾರೆ’ ಎಂದರು.

ಮೇಕೆದಾಟು ಯೋಜನೆ ಜಾರಿ ಮಾಡಿದರೆ ಭವ್ಯ ಸ್ವಾಗತ:

‘ನಾವೇ ಮೇಕೆದಾಟು ಯೋಜನೆ ಮಾಡುತ್ತೇವೆ, ಕಾಂಗ್ರೆಸ್ ನವರಿಗೆ ಅವಕಾಶ ನೀಡುವುದಿಲ್ಲ ಎಂಬ ಸಚಿವ ಸೋಮಣ್ಣ ಅವರ ಹೇಳಿಕೆ ಬಗ್ಗೆ ಪ್ರಸ್ತಾಪ ಮಾಡಿದಾಗ, ‘ಅವರನ್ನು ನಾನು ಅಭಿನಂದಿಸುತ್ತೇನೆ. ಈ ವಿಚಾರದಲ್ಲಿ ತಡ ಮಾಡುವುದು ಬೇಡ. ಹೇಗಿದ್ದರೂ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಇದೆ. ಜತೆಗೆ ಬಿಜೆಪಿಯ 25 ಸಂಸದರಿದ್ದಾರೆ‌. ಒಂದೇ ದಿನದಲ್ಲಿ ಅನುಮತಿ ಪಡೆಯುವ ಸಾಮರ್ಥ್ಯವಿರುವ ಬಲಿಷ್ಠ ಸರ್ಕಾರವಿದೆ. ಅವರು ಈ ಕೆಲಸ ಮಾಡಲಿ, ನಾವು ಹೃತ್ಪೂರ್ವಕವಾಗಿ ಅವರನ್ನು ಅಭಿನಂದಿಸುತ್ತೇವೆ. ಯೋಜನೆಯ ಗುದ್ದಲಿ ಪೂಜೆಗೆ ನಾವು ಕೂಡ ಹೋಗುತ್ತೇವೆ. ಆ ಕಾರ್ಯಕ್ರಮಕ್ಕೆ ಸೋಮಣ್ಣ ಅವರನ್ನು ನಾನೇ ಭವ್ಯವಾಗಿ ಸ್ವಾಗತ ಮಾಡುತ್ತೇನೆ’ ಎಂದರು.

ಸಿಎಂ ಪೂರ್ಣವಧಿ ಬಗ್ಗೆ ನಮ್ಮದೇನೂ ತಕರಾರಿಲ್ಲ

CM Bommai

ಬೊಮ್ಮಯಿ ಅವರು ಮುಖ್ಯಮಂತ್ರಿಯಾಗಿ ಆರು ತಿಂಗಳಾಗುತ್ತಿರುವ ಬಗ್ಗೆ ಮಾತನಾಡಿ, ‘ಅವರು ಸಂಭ್ರಮಾಚರಣೆ ಮಾಡುವುದಾದರೆ ಮಾಡಿಕೊಳ್ಳಲಿ. ಮೊದಲು ಮೇಕೆದಾಟು ಯೋಜನೆ ಜಾರಿಗೊಳಿಸಲಿ. ಅವರು 2023 ಮೇ 15 ರವರೆಗೂ ಅಧಿಕಾರದಲ್ಲಿರಲಿ. ಪೂರ್ಣವಧಿವರೆಗೂ ಸಿಎಂ ಆಗಿರಲಿ. ಅದಕ್ಕೆ ನಮ್ಮ ಯಾವುದೇ ತಕರಾರಿಲ್ಲ. ನಾವು ಬಿಜೆಪಿ ನಾಯಕರಂತೆ ಮಾತನಾಡುವುದಿಲ್ಲ. ನಾಯಕತ್ವ ಬದಲಾವಣೆಗೆ ಅವರ ಪಕ್ಷದವರು ಪ್ರಯತ್ನಿಸುತ್ತಿರಬಹುದು. ಆದರೆ ಸರ್ಕಾರ ಅಲುಗಾಡಿಸಲು ನಾವು ಪ್ರಯತ್ನಿಸುತ್ತಿಲ್ಲ, ಅದರ ಅಗತ್ಯವೂ ನಮಗಿಲ್ಲ’ ಎಂದು ಪ್ರತಿಕ್ರಿಯಿಸಿದರು.

ಅವೈಜ್ಞಾನಿಕ ನಡೆ ಯಾರದು?

ಕಾಂಗ್ರೆಸ್ ನಿಂದ ಕೊರೋನಾ ನಿಯಮಗಳ ಉಲ್ಲಂಘನೆ ಆಗಿದೆ ಎಂಬ ಸಚಿವ ಸುಧಾಕರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಕೋವಿಡ್ ಸಮಯದಲ್ಲಿ ಸ್ವಿಮ್ಮಿಂಗ್ ಫೂಲ್ ಬಳಸದಂತೆ ನಿರ್ಬಂಧ ಹೇರಿದ್ದರೂ ಈಜಾಡಿದ್ದವರು ಯಾರು? ಎಲ್ಲ ಅಪಾರ್ಟ್ಮೆಂಟ್ ಗಳಿಗೆ ನಿರ್ಬಂಧ ಹಾಕಿ ನಮ್ಮ ಮನೆಯಲ್ಲಿ ನಾವು ಮಕ್ಕಳ ಜತೆ ಈಜಾಡಬಹುದಾ? ಎಂದು ಪ್ರಶ್ನಿಸಿದರು.

ಮನೆಯಲ್ಲಿ ಗಂಡ, ಹೆಂಡತಿ, ಮಕ್ಕಳು, ಅಕ್ಕಪಕ್ಕದಲ್ಲಿ ಕೂತು ಸಿನಿಮಾ ನೋಡಬಹುದು, ಆದರೆ ಚಿತ್ರಮಂದಿರದಲ್ಲಿ ಒಂದು ಕುರ್ಚಿ ಬಿಟ್ಟು ಮತ್ತೊಂದು ಕುರ್ಚಿಯಲ್ಲಿ ಕೂರಬೇಕಂತೆ? ವಿಮಾನ, ಮೆಟ್ರೋ, ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕೂತು ಸಂಚಾರ ಮಾಡಬಹುದು, ಆದರೆ ಹೊಟೇಲ್ ನಲ್ಲಿ ಮಾತ್ರ 50-50 ಅಂತರ ಕಾಯ್ದುಕೊಳ್ಳಬೇಕಂತೆ. ಇದು ಬ್ರಹ್ಮವಿದ್ಯೆನಾ?

ಇದು ವೈಜ್ಞಾನಿಕ ನಿರ್ಧಾರವೇ? ಈ ದೇಶಕ್ಕೆ ವಿದ್ಯಾವಂತರು, ಬುದ್ಧಿವಂತರು ಇಲ್ಲದಿದ್ದರೂ ನಡೆಯುತ್ತದೆ. ಆದರೆ, ಪ್ರಜ್ಞಾವಂತರು ಇರಬೇಕು. ನೈಟ್ ಕರ್ಫ್ಯೂನಿಂದ ಆಗುವ ಅನುಕೂಲವೇನು? ಹಗಲು ವೇಳೆ ಜತೆಯಲ್ಲಿ ಓಡಾಡಬಹುದಂತೆ, ರಾತ್ರಿ 9 ಗಂಟೆ ಮೇಲೆ ಜನ ಒಡಾಡುವಂತಿಲ್ಲ. ಕೆಲವರಿಗೆ ರಾತ್ರಿ 9 ಗಂಟೆ ಮೇಲೆ ವ್ಯಾಪಾರ ಆರಂಭವಾಗುತ್ತದೆ’ ಎಂದೂ ಹೇಳಿದರು.

224 ಕ್ಷೇತ್ರ ನಮ್ಮ ಗುರಿ:

ರಾಮನಗರ, ಚನ್ನಪಟ್ಟಣ ಕ್ಷೇತ್ರ ನಿಮಗೆ ಪ್ರತಿಷ್ಠೆಯೇ ಎಂಬ ಪ್ರಶ್ನೆಗೆ, ‘ನಮಗೆ ಕೇವಲ ರಾಮನಗರ ಹಾಗೂ ಚನ್ನಪಟ್ಟಣ ಮಾತ್ರವಲ್ಲ, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಬೇಕು. ಎಲ್ಲ ಕ್ಷೇತ್ರಗಳು ನಮಗೆ ಪ್ರತಿಷ್ಠೆಯಾಗಿವೆ. ಸುರೇಶ್ ಅವರನ್ನು ಜನ ಲೋಕಸಭೆಗೆ ಆರಿಸಿ ಕಳುಹಿಸಿದ್ದಾರೆ. ಪಕ್ಷ ಈ ಬಗ್ಗೆ ತೀರ್ಮಾನ ಮಾಡಲಿದೆ. ತೀರ್ಮಾನ ಸುರೇಶ್ ಹಾಗೂ ಶಿವಕುಮಾರ್ ಅವರ ಕೈಯಲ್ಲಿಲ್ಲ, ಪಕ್ಷದ ಕೈಯಲ್ಲಿದೆ’ ಎಂದರು.

ಸದಸ್ಯತ್ವ ನೋಂದಣಿ:

ಸದಸ್ಯತ್ವ ನೋಂದಣಿಯನ್ನು ಆನ್ಲೈನ್ ಮೂಲಕ ಮಾಡಲು ತೀರ್ಮಾನಿಸಿದ್ದು, 26ರ ಒಳಗಾಗಿ ಮುಖ್ಯ ನೋಂದಣಿದಾರರನ್ನು ನೇಮಕ ಮಾಡಬೇಕಾಗಿದೆ. ಪ್ರತಿ ಜಿಲ್ಲಾ ಪಂಚಾಯ್ತಿ ಹಾಗೂ ಮುನ್ಸಿಪಾಲಿಟಿ ವ್ಯಾಪ್ತಿಗೆ ಇಬ್ಬರ ನೇಮಕಕ್ಕೆ ಚರ್ಚಿಸುತ್ತಿದ್ದೇವೆ. ಸದಸ್ಯತ್ವ ನೋಂದಣಿ ವಿಚಾರವಾಗಿ ಜನರ ಬಳಿ ಫೋಟೋ ಕೇಳುವಾಗ ಗಂಡಸರು ಹೆಣ್ಣು ಮಕ್ಕಳ ಫೋಟೋ, ಹೆಂಗಸರು ಗಂಡು ಮಕ್ಕಳ ಫೋಟೋ ಕೇಳಲು ಆಗುವುದಿಲ್ಲ.

ಹೀಗಾಗಿ ಇಂತಹ ವಿಚಾರಗಳನ್ನೆಲ್ಲಾ ಚರ್ಚಿಸಿ ಆನ್ಲೈನ್ ಮೂಲಕ ಸದಸ್ಯತ್ವ ನೋಂದಣಿ ಮಾಡಲು ತೀರ್ಮಾನಿಸಲಾಗಿದೆ. ಯಾವುದೇ ಕಾರಣಕ್ಕೂ ಸದಸ್ಯತ್ವ ನೋಂದಣಿ ದಿನಾಂಕ ವಿಸ್ತರಣೆಯಾಗುವುದಿಲ್ಲ. ಪ್ರತಿಯೊಂದು ಚುನಾವಣೆ ಬ್ಲಾಕ್ ಅಧ್ಯಕ್ಷರಿಂದ ಹಿಡಿದು ಜಿಲ್ಲಾ ಕಾಂಗ್ರೆಸ್, ಪ್ರದೇಶ ಕಾಂಗ್ರೆಸ್, ಎಐಸಿಸಿ ಮಟ್ಟದ ಚುನಾವಣೆಗಳು ನಡೆಯಲಿದ್ದು, ಅಲ್ಲಿ ಸದಸ್ಯರಿಗೆ ಮತದಾನ ಮಾಡುವ ಹಕ್ಕಿದೆ. ಪಕ್ಷವನ್ನು ಕಾರ್ಯಕರ್ತರ ಪಕ್ಷವಾಗಿ (ಕೇಡರ್ ಬೇಸ್) ಮಾಡುವ ಬಗ್ಗೆ ನಾನು ಪ್ರತಿಜ್ಞಾ ಕಾರ್ಯಕ್ರಮದಲ್ಲೇ ಹೇಳಿದ್ದೇನೆ’ ಎಂದರು.

ಇದನ್ನೂ ಓದಿ:District Incharge Ministers:ಕೋವಿಡ್ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ! ಯಾವ ಯಾವ ಜಿಲ್ಲೆಗೆ, ಯಾರಿಗೆ ಸ್ಥಾನ? ಇಲ್ಲಿದೆ ಫುಲ್ ಡೀಟೇಲ್ಸ್

RECOMMENDED

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Next Post
Smart City Meeting: ಸ್ಮಾರ್ಟ್ ಸಿಟಿ ಯೋಜನೆಯಡಿ ಇನ್ನೂ 4 ಜಿಲ್ಲೆಗಳನ್ನು ಸೇರಿಸಲು ಕೇಂದ್ರ ಸರ್ಕಾರಕ್ಕೆ ಪತ್ರ

Smart City Meeting: ಸ್ಮಾರ್ಟ್ ಸಿಟಿ ಯೋಜನೆಯಡಿ ಇನ್ನೂ 4 ಜಿಲ್ಲೆಗಳನ್ನು ಸೇರಿಸಲು ಕೇಂದ್ರ ಸರ್ಕಾರಕ್ಕೆ ಪತ್ರ

Elephant Statue: ಈ ಗ್ರಾಮದಲ್ಲಿ ವರ್ಷಗಳ ಕಾಲ ಮಲಗಿತ್ತು 40 ಟನ್‍ ತೂಕದ ಕಲ್ಲಿನ  ಆನೆ!

Elephant Statue: ಈ ಗ್ರಾಮದಲ್ಲಿ ವರ್ಷಗಳ ಕಾಲ ಮಲಗಿತ್ತು 40 ಟನ್‍ ತೂಕದ ಕಲ್ಲಿನ ಆನೆ!

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist