SSLC Main Exam Timetable 2022: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ಎಸೆಸೆಲ್ಸಿ ಮುಖ್ಯಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾರ್ಚ್ ಎಪ್ರಿಲ್ 2022ರ ಮುಖ್ಯಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದು, ಶಾಲಾ ಅಭ್ಯರ್ಥಿ ಹಾಗೂ ಪುನರಾವರ್ತಿತ ಶಾಲಾ ಅಭ್ಯರ್ಥಿಗಳಿಗೆ, ಖಾಸಗಿ ಅಭ್ಯರ್ಥಿ ಹಾಗೂ ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳಿಗೆ ಅನ್ವಯವಾಗಲಿದೆ. ಮಾರ್ಚ್ 28 ರಿಂದ ಏಪ್ರಿಲ್ 11ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ.
ಮಾರ್ಚ್ 28ರಂದು ಪ್ರಥಮ ಭಾಷೆ ಕನ್ನಡ, ಮಾರ್ಚ್ 30ರಂದು ದ್ವಿತೀಯ ಭಾಷೆ, ಏಪ್ರಿಲ್ 1 ರಂದು ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಏಪ್ರಿಲ್ 4 ರಂದು ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6ರಂದು ಸಮಾಜ ವಿಜ್ಞಾನ, ಏಪ್ರಿಲ್ 8ರಂದು ತೃತಿಯ ಭಾಷೆ,ಏಪ್ರಿಲ್ 11ರಂದು ವಿಜ್ಞಾನ ರಾಜ್ಯಶಾಸ್ತ್ರ ಕರ್ನಾಟಕ, ಹಿಂದುಸ್ತಾನಿ ಸಂಗೀತ ಪರೀಕ್ಷೆ ನಡೆಯಲಿದೆ.ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರ ವರೆಗೆ ಪರೀಕ್ಷೆ ಬರೆಯಲು ಸಮಯವಿರುತ್ತದೆ. ಪ್ರತಿ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗಿದೆ.
ಇದನ್ನೂ ಓದಿ: Republic Day: 73 ನೇ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ: ಇಂದು ರಾತ್ರಿ 7 ಗಂಟೆಗೆ ರಾಷ್ಟ್ರಪತಿ ಭಾಷಣ

