James: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಭಿನಯಿಸಿರುವ ‘ಜೇಮ್ಸ್’ (James Kannada Movie) ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆ ಆಗಿದೆ. ಗಣರಾಜ್ಯೋತ್ಸವದ ದಿವವಾದ ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ‘ಜೇಮ್ಸ್’ ಚಿತ್ರದ ಸ್ಪೆಷಲ್ ಪೋಸ್ಟರ್ ಬಿಡುಗಡೆಯಾಗಿದೆ.
ಈ ಚಿತ್ರಕ್ಕೆ ಚೇತನ್ ಕುಮಾರ್ (Chethan Kumar) ನಿರ್ದೇಶನ ಮಾಡುತ್ತಿದ್ದಾರೆ. ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಪುನೀತ್ ರಾಜ್‍ಕುಮಾರ್ ಅವರು ತಮ್ಮ ಪಾಲಿನ ಚಿತ್ರೀಕರಣವನ್ನು ಮುಗಿಸಿದ್ದರು. ಅವರ ನಿಧನದ ಬಳಿಕ ಇನ್ನುಳಿದ ದೃಶ್ಯಗಳ ಶೂಟಿಂಗ್ ಅನ್ನು ಪೂರ್ಣಗೊಳಿಸಲಾಯಿತು ಈಗ ಗಣರಾಜ್ಯೋತ್ಸವದ ಪ್ರಯುಕ್ತ ಸಿನಿಮಾದಿಂದ ವಿಶೇಷ ಪೋಸ್ಟರ್ ರಿಲೀಸ್ ಆಗಿದೆ. ಪುನೀತ್ ಇಲ್ಲವಾಗಿದ್ದರೂ ಅವರ ಧ್ವನಿಯನ್ನು ಚಿತ್ರದಲ್ಲಿ ಇಟ್ಟುಕೊಂಡೇ ಹೊಸ ಪ್ರಯತ್ನ ಮಾಡಬೇಕು ಎಂಬ ಆಸೆಯನ್ನು ನಿರ್ದೇಶಕರು ವ್ಯಕ್ತಪಡಿಸಿದ್ದಾರೆ.

ಈ ಸಿನಿಮಾದಲ್ಲಿ ಶಿವರಾಜ್ಕುಮಾರ್ ಮತ್ತು ರಾಘವೇಂದ್ರ ರಾಜ್‍ಕುಮಾರ್ ಕೂಡ ಬಣ್ಣ ಹಚ್ಚಿರುವುದು ವಿಶೇಷ. ‘ಜೇಮ್ಸ್’ನಲ್ಲಿ ಪುನೀತ್ ರಾಜ್‍ಕುಮಾರ್ ಅವರಿಗೆ ಜೋಡಿಯಾಗಿ ಪ್ರಿಯಾ ಆನಂದ್ ಅಭಿನಯಿಸಿದ್ದಾರೆ.
ಅಶ್ವಿನಿ ಪುನೀತ್ ರಾಜ್‍ಕುಮಾರ್ ಪೋಸ್ಟರ್ ನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಪುನೀತ್ ರಾಜ್ ಕುಮಾರ್ ಅವರು ಸೈನಿಕನ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಜೇಮ್ಸ್ ಚಿತ್ರ ಪುನೀತ್ ಅವರ ಜನ್ಮದಿನವಾದ ಮಾರ್ಚ್ 17ರಂದು ತೆರೆಗೆ ಬರುವ ನಿರೀಕ್ಷೆ ಇದೆ. ಇದು ಪುನೀತ್ ಹೀರೋ ಆಗಿ ನಟಿಸಿದ ಕೊನೆಯ ಚಿತ್ರ ಆಗಿದ್ದು
ಇದರ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ.
ವಿಲನ್ ಪಾತ್ರದಲ್ಲಿ ತಮಿಳು ನಟ ಶರತ್ ಕುಮಾರ್ :
ಗಣರಾಜ್ಯೋತ್ಸವದ ಪ್ರಯುಕ್ತ ಸಿನಿಮಾ ತಂಡ ವಿಶೇಷ ಪೋಸ್ಟರ್ ರಿಲೀಸ್ ಮಾಡಿರುವುದು ಅಪ್ಪು ಅಭಿಮಾನಿಗಳಿಗೆ ಖುಷಿ ನೀಡಿದೆ. ‘ರಾಜಕುಮಾರ’ ಚಿತ್ರದಲ್ಲಿ ಪುನೀತ್ ತಂದೆಯಾಗಿ ಅಭಿನಯಿಸಿದ್ದ ಹಿರಿಯ ತಮಿಳು ನಟ ಶರತ್ ಕುಮಾರ್ ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
— Ashwini Puneeth Rajkumar (@ashwinipuneet) January 26, 2022
Wish you all a "Happy Republic Day". @PRKAudio @PriyaAnand #KishorePathikonda @BahaddurChethan @actorsrikanth @realsarathkumar @charanrajmr2701 #BoloBoloJames pic.twitter.com/oFW615ISJD
ಈ ಚಿತ್ರಕ್ಕೆ ಎ. ಹರ್ಷ ಕೊರಿಯೋಗ್ರಫಿ, ಸ್ಟಂಟ್ ಮಾಸ್ಟರ್ ವಿಜಯ್ ಫೈಟಿಂಗ್ ದೃಶ್ಯಾವಳಿ ನಿರ್ದೇಶಿಸಿದ್ದಾರೆ. ಕಿಶೋರ್ ಪತಿಕೊಂಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ, ಶ್ರೀಶ ಛಾಯಾಗ್ರಹಣ, ರವಿಸಂತೆ ಹೈಕ್ಲು ಕಲಾ ನಿರ್ದೇಶನ, ದೀಪು ಎಸ್.ಕುಮಾರ್ ಸಂಕಲನ ಇದೆ.
ಈ ಚಿತ್ರದಲ್ಲಿ ತೆಲುಗು ನಟ ಶ್ರೀಕಾಂತ್, ಆದಿತ್ಯ ಮೆನನ್, ಅನು ಪ್ರಭಾಕರ್, ರಂಗಾಯಣ ರಘು ಮತ್ತು ಮುಕೇಶ್ ರಿಷಿ ಸೇರಿದಂತೆ ದೊಡ್ಡ ತಾರಾಗಣ ನಟಿಸಿದೆ.
ಇದನ್ನೂ ಓದಿ: Jai Bhim: ಜೈ ಭೀಮ್, ಮರಕ್ಕರ್ ಚಿತ್ರಕ್ಕೆ ಸಿಗುತ್ತಾ ಆಸ್ಕರ್ ಅವಾರ್ಡ್ಸ್!