ಉಡುಪಿ:( ಜ.31): Hijab: ಮುಸ್ಲಿಂ ವಿದ್ಯಾರ್ಥಿನಿಯರು ಶಾಲೆಗೆ ಹಿಜಾಬ್ ಧರಿಸುವ ಕುರಿತು ಎಲ್ಲೆಡೆ ಚರ್ಚೆಯಾಗುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಕಾಲೇಜಿಗೆ ವಿದ್ಯಾರ್ಥಿನಿಯರು ಶಿರವಸ್ತ್ರ ಧರಿಸುವ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯೊಬ್ಬರು ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ.

ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದು ಆಕೆಯ ಮೂಲಭೂತ ಹಕ್ಕು ಎಂದು ಭಾರತ ಸಂವಿಧಾನದ 14 ಹಾಗೂ 25 ನೇ ವಿಧಿಯ ಅನ್ವಯ ಘೋಷಿಸುವಂತೆ ಉಡುಪಿ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ರೇಶಮ್ ಫಾರೂಕ್ ಅವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಇನ್ನು ವಿದ್ಯಾರ್ಥಿನಿಯ ಪರ ವಕೀಲರಾದ ಶತಬೀಷ್ ಶಿವಣ್ಣ, ಆರ್ನಾವ್ ಬಾಗನವಾಡಿ ಮತ್ತು ಅಭಿಷೇಕ ಜನಾರ್ಧನ್ ಅವರು ರಿಟ್ ಅರ್ಜಿ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳು ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗಲು ಮತ್ತು ಕಾಲೇಜು ಆಡಳಿತದ ಯಾವುದೇ ಹಸ್ತಕ್ಷೇಪ ಇಲ್ಲದೆ ಕೋರಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ವಕೀಲರಾದ ಶತಬೀಷ್ ಶಿವಣ್ಣ ಅವರು, ಹಿಜಾಬ್ ಧರಿಸಿ, ತರಗತಿಗಳಿಗೆ ವಿದ್ಯಾರ್ಥಿನಿಯರು ಹಾಜರಾಗಲು ಅನುಮತಿ ನೀಡುವಂತೆ ನಿರ್ದೇಶನ ನೀಡುವಂತೆ ನ್ಯಾಯಾಲಯವನ್ನು ಕೋರುತ್ತಿದ್ದೇವೆ ಏನೆಂದು ಹೇಳಿದ್ದಾರೆ.
ವಿದ್ಯಾರ್ಥಿಗಳಿಗೆ ಮಧ್ಯಂತರ ಪರಿಹಾರ ನೀಡುವಂತೆ ಕೋರುತ್ತೇವೆ. ಈ ಮಧ್ಯೆ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿ ತರಗತಿಗಳಿಗೆ ಹಾಜರಾಗಲು ಕಾಲೇಜಿಗೆ ನಿರ್ದೇಶನ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ ಎಂದು ಹೇಳಿದ್ದಾರೆ.