Basavaraj Horatti: (ಫೆ.1): ಜಾತಿನಿಂದನೆ ಆರೋಪ ಸಂಬಂಧ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ವಿರುದ್ಧದ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಜಾತಿನಿಂದನೆ ಆರೋಪ ಎದುರಿಸುತ್ತಿದ್ದ ಸಭಾಪತಿ ಬಸವರಾಜ್ ಹೊರಟ್ಟಿ ಅವರು ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರ ನೇತೃತ್ವದ ಏಕ ಸದಸ್ಯ ಪೀಠವು ಆದೇಶ ಹೊರಡಿಸಿದೆ.

ಮಧ್ಯಾಂತರ ತಡೆಯಾಜ್ಞೆಗೆ ಕಾರಣ:
ಘಟನೆ ನಡೆದ ಸ್ಥಳದಲ್ಲಿ ಯಾರು ಅರ್ಜಿದಾರರು ಇರಲಿಲ್ಲ ಹಾಗೂ ಎಫ್ಐಆರ್ ನಲ್ಲಿಯೂ ಅವರ ವಿರುದ್ಧ ಯಾವುದೇ ಗಂಭೀರ ವಿಚಾರಣೆಗಳು ಕೂಡ ಇಲ್ಲ ಎಂದು ಸ್ಪಷ್ಟವಾಗಿದೆ. ಅರ್ಜಿದಾರರು ವಿಧಾನಪರಿಷತ್ ಸಭಾಪತಿ ಆಗಿದ್ದು, ಪ್ರಕರಣವನ್ನು ನ್ಯಾಯಾಲಯ ಸೂಕ್ಷ್ಮವಾಗಿ ಪರಿಗಣಿಸಬೇಕಾಗುತ್ತದೆ ಎಂದು ಹೇಳಲಾಗಿದೆ.
ಧಾರವಾಡ ತಾಲೂಕಿನ ಗ್ರಾಮದಲ್ಲಿರುವ ಸರ್ವ ಶಿಕ್ಷಣ ಟ್ರಸ್ಟ್ ಗೆ ಸೇರಿದ ಸಂಸ್ಥೆಯಲ್ಲಿ ಸಭಾಪತಿ ಬಸವರಾಜ್ ಅವರ ನಮ್ಮ ಫಲಕ ತೆಗೆಯಲು ತಿಳಿಸಿದ್ದು ಈ ವಿಚಾರಕ್ಕೆ ಸಂಬಂಧಿಸಿ ಗಲಾಟೆ ಕಾರಣವಾಗಿತ್ತು.
ಪ್ರಕರಣದಲ್ಲಿ ಉಳಿದವರ ವಿರುದ್ಧ ಪೊಲೀಸರು ಮುಂದಿನ ಪ್ರಕ್ರಿಯೆ ನಡೆಸಬಹುದು ಹಾಗೂ ಇದೇ ವೇಳೆ ಪೀಠ ಸ್ಪಷ್ಟಪಡಿಸಿದ್ದು, ಪ್ರಕರಣದ ದೂರುದಾರರಿಗೆ ತುರ್ತು ನೋಟಿಸ್ ಹಾಗೂ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಲಾಗಿದೆ ವಿಚಾರಣೆಯನ್ನು ಮುಂದೂಡಲಾಗಿದೆ.