Latha Mangeshkar: (ಫೆ.6): ಜನಪ್ರಿಯ ಹಿನ್ನೆಲೆ ಗಾಯಕಿ ಲತಾಮಂಗೇಶ್ಕರ್ ಇಂದು ರಾಗಿದ್ದಾರೆ. ಕೊರೋನಾ ಸೋಂಕಿಗೆ ಇವರಿಗೆ ನ್ಯೂಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಕೊರೋನಾದಿಂದ ಚೇತರಿಸಿಕೊಂಡಿದ್ದಾರೆ ಲತಾ ಮಂಗೇಶ್ಕರ್ ಅವರು ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದು ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು.

ಭಾರತದ ನೈಟಿಂಗೆಲ್ ಎಂದೇ ಖ್ಯಾತಿ ಪಡೆದಿದ್ದ ಲತಾ ಮಂಗೇಶ್ಕರ್ ಅವರು ಸೆ.28, 1929 ರಂದು ಜನಿಸಿದರು. 36 ಕ್ಕೂ ಅಧಿಕ ಭಾಷೆಗಳಲ್ಲಿ ಗಾನ ಸುರಿಮಳೆಯನ್ನೇ ಸುರಿಸಿದವರು ಲತಾಮಂಗೇಶ್ಕರ್.
ಲತಾ ಮಂಗೇಶ್ಕರ್ ಭಾರತ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು. 1989 ರಲ್ಲಿ ಚಿತ್ರರಂಗದಲ್ಲಿ ಸೇವೆ ಮಾಡಿದ ಸಲುವಾಗಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪಡೆದಿದ್ದರು. ಅಲ್ಲದೆ ಪದ್ಮವಿಭೂಷಣ ಪದ್ಮಭೂಷಣ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಲತಾ ಮಂಗೇಶ್ಕರ್ ಅವರ ನಿಧನದಿಂದ ಚಿತ್ರರಂಗ ಮೌನರಾಗ ಹಾಡಿದೆ.