Hijab V/s Saffron Shawl: ಕರಾವಳಿಯಲ್ಲಿ ಹಿಜಾಬ್ ಕುರಿತು ವಿವಾದ ಎಬ್ಬಿತ್ತು ಇದೀಗ ಕರಾವಳಿ ಮಾತ್ರವಲ್ಲದೆ ಕರ್ನಾಟಕದ ಮೂಲೆ-ಮೂಲೆಗಳಲ್ಲಿ ಹಿಜಾಬ್ ವಿವಾದ ಹರಡಿದೆ.
ಎಲ್ಲೆಲ್ಲಿ ಹಿಜಾಬ್ ವಿವಾದ?
ಕರಾವಳಿ ಉಡುಪಿ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಬೀದರ್ ತುಮಕೂರು, ಮೈಸೂರು, ದಾವಣಗೆರೆ, ಗದಗ , ವಿಜಯಪುರ, ಬಾಗಲಕೋಟೆ, ಮಲೆನಾಡು, ಉತ್ತರ ಕರ್ನಾಟಕದಲ್ಲಿ ಹಿಜಾಬ್ ವಿವಿಧ ಹಬ್ಬಿದೆ.

ತುಮಕೂರು:
ತುಮಕೂರು ಜಿಲ್ಲೆಯ ತಿಪಟೂರು ಕಾಲೇಜಿನಲ್ಲಿ ಇಂದು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಕ್ಕೆ ಪೊಲೀಸರು ತಡೆಯೊಡ್ಡಿದ ಘಟನೆ ನಡೆದಿದೆ. ಈ ಮಧ್ಯೆ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಾ ತರಗತಿಗೆ ಪ್ರವೇಶ ಮಾಡಿದ್ದಾರೆ.
ಕೇಸರಿ ಶಾಲು ಧರಿಸಿ ಬಂದಿದ್ದಕ್ಕೆ ಪ್ರಾಂಶುಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಪೊಲೀಸರಿಂದ ಎಚ್ಚರಿಕೆ ನೀಡಿದ್ದಾರೆ.
ಉಡುಪಿ:
ಉಡುಪಿ ಜಿಲ್ಲೆಯ ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುರ್ಖಾ ಧರಿಸಿ ಬಂದಿದ್ದ 22 ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿದ್ದಾರೆ.
ಶಿವಮೊಗ್ಗ:
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬಾಳೆಬೈಲು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೇಸರಿ ಸಾಲು ಧರಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನ ಒಳಗೆ ಬಿಡದೇ ವಿರೋಧ ವ್ಯಕ್ತವಾದ ಘಟನೆ ನಡೆದಿದೆ.
ಗದಗ,ಚಿಕ್ಕಮಗಳೂರು:
ಚಿಕ್ಕಮಗಳೂರಿನ ಕಾಲೇಜುವೊಂದರಲ್ಲಿ ತರಗತಿಯಲ್ಲಿ ಹಿಜಾಬ್ ಧರಿಸಿ ಕೂರಲು ಅವಕಾಶಕ್ಕೆ ಆಗ್ರಹ ಕೇಳಿಬಂದಿದೆ. ಗದಗ ಜಿಲ್ಲೆಯ ಕಾಲೇಜಿನ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದಾರೆ. ಇದಕ್ಕೆ ವಿರೋಧವಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಾರೆ.
ಕೇಸರಿ ಶಾಲು, ರಾಜಕೀಯ: ಮಾಜಿ ಸಿದ್ದರಾಮಯ್ಯ
ಹಿಜಾಬ್ ಕುರಿತು ಮಾಜಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ,ಹಿಜಾಬ್ ವಿಚಾರ ಹೈಕೋರ್ಟ್ನಲ್ಲಿದ್ದೆ, ನಾಳೆ ತೀರ್ಪು ಬರುತ್ತೆ. ಹೈಕೋರ್ಟ್ ಏನು ತೀರ್ಪು ನೀಡುತ್ತೋ ಕಾದುನೋಡೋಣ. ಹೆಣ್ಣುಮಕ್ಕಳು ಬಹಳ ವರ್ಷಗಳಿಂದ ಹಿಜಾಬ್ ಧರಿಸುತ್ತಿದ್ದಾರೆ. ಹಿಜಾಬ್ ಮುಸ್ಲಿಂ ಸಮುದಾಯದ ಭಾಗವಿದೆ. ಇವರು ಕೇಸರಿ ಶಾಲು ಹಾಕಿ ಕಳುಹಿಸುವುದು ರಾಜಕೀಯ. ವೋಟ್ಗಾಗಿ ಬಿಜೆಪಿ ರಾಜಕೀಯ ಮಾಡುತ್ತಿದೆ ಹೇಳಿಕೆ ಎಂದು ನೀಡಿದ್ದಾರೆ.
ಇದನ್ನೂ ಓದಿ:Dr.B.R Ambedkar Photo: ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್ ಫೋಟೋ ಇರಿಸಲು ಆದೇಶ