Hijab:( ಫೆ.8) ನಾಳೆಯಿಂದ 3 ದಿನ ಹೈ ಸ್ಕೂಲ್, ಪ.ಪೂರ್ವ, ಪದವಿ ಎಂಜಿನಿಯರ್ ಕಾಲೇಜುಗಳಿಗೆ ರಜೆ ನೀಡಲಾಗುವುದು ಅಂತ ಸಚಿವ ಅಶ್ವತ್ ನಾರಾಯಣ್ ತಿಳಿಸಿದ್ದಾರೆ. ಈ ಬಗ್ಗೆ ಅವರು ಸುದ್ದಿಗಾರರ ಜೊತೆಗೆ ಮಾತನಾಡುತ್ತ ಮಾಹಿತಿ ನೀಡಿದರು. ನಾಳೆಯಿಂದ 3 ದಿನ ಹೈ ಸ್ಕೂಲ್, ಪ.ಪೂರ್ವ, ಪದವಿ ಎಂಜಿನಿಯರ್ ಕಾಲೇಜುಗಳಿಗೆ ರಜೆ ನೀಡಲಾಗುವುದು ಎಂದು ಹೇಳಿದರು.

ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಸದ್ಯ ಈ ವಿವಾದವು ನ್ಯಾಯಾಪೀಠದ ಮುಂದೆ ಇದ್ದು, ನ್ಯಾಯಾಲಯದ ತೀರ್ಪು ಕಾಯುವಂತೆ ಅವರು ಮನವಿ ಮಾಡಿದರು.
ಇದೇ ವೇಳೇ ತಮ್ಮ ಸಚಿವ ಸಂಪುಟದ ಸಹೋದ್ಯೋಗಳಿಗೆ ನೀಡುತ್ತಿರುವ ಹೇಳಿಕೆಗೂ ಕೂಡ ಅವರು ವಿರೋಧ ವ್ಯಕ್ತಪಡಿಸಿದರು. ಇನ್ನೂ ಗಲಾಟೆಯಾಗಿರುವ ಪ್ರದೇಶದಲ್ಲಿ ರಜೆ ನೀಡುವಂತೆ ಸೂಚನೆ ನೀಡಿರುವೆ. ಇಂದು ಸಂಜೆ ಬೆಂಗಳೂರಿಗೆ ತೆರಳಿದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಾಗುವುದು ಅಂತ ತಿಳಿಸಿದರು. ಇನ್ನೂ ಯಾರು ಕೂಡ ಪ್ರಚೋದನೆ ಮಾಡುವ ಕೆಲಸ ಮಾಡಬಾರದು, ಈಗಾಗಲೇ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ, ಹೈಕೋರ್ಟ್‌ನಿಂದ ಅಂತಿಮ ಆದೇಶ ಬರುವ ತನಕ ತಾಳ್ಮೆಯಿಂದ ಇರುವಂತೆ ಅವರು ಹೇಳಿದರು.