ನವದೆಹಲಿ: (ಫೆ.10): Hijab v/s Saffron Shawl: ಹಿಜಾಬ್ ವಿವಾದದಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಹಿಜಾಬ್ ವಿವಾದ ಕುರಿತಂತೆ ಖ್ಯಾತ ವಕೀಲ ಕಪಿಲ್ ಸಿಬಲ್ ಅವರು ಸುಪ್ರಿಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಒಂಭತ್ತು ನ್ಯಾಯದೀಶರ ಸಾಂವಿಧಾನಿಕ ಪೀಠದಲ್ಲಿ ವಿಚಾರಣೆಯಾಗಬೇಕು ಎಂದು ಮನವಿ ಮಾಡಿದ್ದಾರೆ.

ವಾದ ಮಂಡಿಸಿದ ವಕೀಲ ಕಪಿಲ್ ಸಿಬಲ್ ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದವನ್ನು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಸಬೇಕು. ಹಿಜಾಬ್ ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಒಂಬತ್ತು ನ್ಯಾಯಾಧೀಶರ ಸಾಂವಿಧಾನಿಕ ಪೀಠದಲ್ಲಿ ವಿಚಾರಣೆ ನಡೆಸಬೇಕು. ಇನ್ನೇರಡು ತಿಂಗಳಲ್ಲಿ ಪರೀಕ್ಷೆ ಇದೆ, ಆದರೆ ವಿವಾದ ಕಾಡ್ಚಿನಂತೆ ಎಲ್ಲ ಜಿಲ್ಲೆಗಳಿಗೆ ಹಬ್ಬುತ್ತಿದೆ. ಹೀಗಾಗಿ, ಕೋರ್ಟ್ ಈ ವಿಚಾರವನ್ನು ಮೊದಲು ವಿಚಾರಣೆ ಅರ್ಜಿಗಳ ಪಟ್ಟಿಯಲ್ಲಿ ಸೇರಿಸಿ, ಯಾವುದೇ ಮಧ್ಯಂತರ ಆದೇಶ ನೀಡುವುದು ನಿಮ್ಮಗೆ ಬಿಟ್ಟಿದ್ದು. ರಾಜ್ಯದಲ್ಲಿ ಶಾಲೆ ಕಾಲೇಜು ಬಂದ್ ಆಗಿವೆ, ವಿದ್ಯಾರ್ಥಿನಿಯರು ಮೇಲೆ ಕಲ್ಲು ಎಸೆಯಲಾಗುತ್ತಿದೆ ಇದು ಇಡೀ ದೇಶಕ್ಕೆ ವ್ಯಾಪಿಸುತ್ತಿದೆ ಎಂದು ವಾದದಲ್ಲಿ ಕಳವಳ ವ್ಯಕ್ತಪಡಿಸಿದರು.
ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್. ವಿ ರಮಣ ಅವರನ್ನೊಳಗೊಂಡಂತೆ ನ್ಯಾಯಪೀಠವು, ಪ್ರಕರಣದ ಬಗ್ಗೆ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ. ನಾವು ವಿಚಾರಣಾ ಪಟ್ಟಿಯನ್ನು ಮಾಡಿದರೆ ಹೈ ಕೋರ್ಟ್ ವಿಚಾರಣೆ ನಡೆಸುವುದಿಲ್ಲ. ಈ ಬಗ್ಗೆ ನಾವು ಮುಂದೆ ಪರಿಶೀಲನೆ ಮಾಡುತ್ತೇವೆ. ಮೊದಲು ಹೈಕೋರ್ಟ್ ವಿಚಾರಣೆ ಮುಗಿಸಲಿ ಎಂದು ತಿಳಿಸಿದೆ.
ಇಂದು ಮಧ್ಯಾಹ್ನ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡಂತ ತ್ರಿ ಸದಸ್ಯ ನ್ಯಾಯಪೀಠದಲ್ಲಿ ಮಧ್ಯಾಹ್ನ 2.30ಕ್ಕೆ ಹಿಜಾಬ್ ಅನುಮತಿ ಕೋರಿದಂತೆ ಅರ್ಜಿಯ ವಿಚಾರಣೆ ನಡೆಯಲಿದೆ. ಹಾಗಾಗಿ ಎಲ್ಲರ ಚಿತ್ತ, ಹೈಕೋರ್ಟ್ ನತ್ತ ನೆಟ್ಟಿದೆ.