ಬೆಂಗಳೂರು: ಫೆ.10 Hijab Controversy ಏಕಸದಸ್ಯ ಪೀಠದಿಂದ ವಿಸ್ಕೃತ ಪೀಠಕ್ಕೆ ವರ್ಗಾವಣೆಯಾಗಿರುವ ರಾಜ್ಯದ ಶಾಲಾ-ಕಾಲೇಜುಗಳ ಹಿಜಾಬ್ ಹಾಗೂ ಕೇಸರಿ ಶಾಲುಗಳ ವಿವಾದದ ಪ್ರಕರಣದ ವಿಚಾರಣೆಯನ್ನು ಇಂದು ಹೈಕೋರ್ಟ್ ಕೈಗೆತ್ತಿಕೊಂಡಿತು.
ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಸೋಮವಾರಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.ಹಿಜಾಬು ಹಾಗೂ ಕೇಸರಿ ಶಾಲು ವಿವಾದದಲ್ಲಿ ಹೈಕೋರ್ಟ್ ಮಂಧ್ಯಂತರ ಆದೇಶ ನೀಡಿದೆ. ವಿಚಾರಣೆ ಮುಗಿಯುವರೆಗೂ ಯಾವುದೇ ಧಾರ್ಮಿಕ ಗುರುತುಗಳನ್ನು ಬಳಸಬಾರದು ಎಂದು ಆದೇಶ ಹೊರಡಿಸಲಾಗಿದೆ. ಕೆಲವೇ ದಿನಗಳಲ್ಲಿ ತೀರ್ಪು ನೀಡಲಾಗುವುದು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.

ಶಿಕ್ಷಣ ಸಂಸ್ಥೆಗಳು ತಕ್ಷಣ ಕಾರ್ಯರಂಭ ಮಾಡಬೇಕು. ಅರ್ಜಿಗಳ ವಿಚಾರಣೆ ಮುಗಿಯುವವರೆಗೂ ಯಾರು ಯಾವುದೇ ಧಾರ್ಮಿಕ ಗುರುತುಗಳನ್ನು ಅಂದರೆ ಹಿಜಾಬು ಮತ್ತು ಶಾಲು ಬಳಸುವಂತಿಲ್ಲ ಎಂದು ಹೈಕೋರ್ಟ್ ಸೂಚನೆ ನೀಡಿದೆ.
ಶಿಕ್ಷಣ ಸಂಸ್ಥೆಗಳು ಹಿಜಾಬ್ ಧರಿಸಿ ಶಾಲೆ-ಕಾಲೇಜಿಗೆ ಬಾರದಂತೆ ನಿರ್ಬಂಧಿಸಿರುವ ಕ್ರಮ ಹಾಗೂ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಉಡುಪಿ ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಕೆಲವು ವಿದ್ಯಾರ್ಥಿನಿಯರ ಪೋಷಕರು ಸಲ್ಲಿಸಿದ್ದ ಮೂರು ಅರ್ಜಿಗಳ ವಿಚಾರಣೆ ಇಂದು ರಾಜ್ಯ ಹೈಕೋರ್ಟ್ ನಲ್ಲಿ ನಡೆಯಿತು. ಮುಖ್ಯ ನ್ಯಾಯಾಧೀಶರಾದ ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್ ದೀಕ್ಷಿತ್ ಹಾಗೂ ನ್ಯಾ.ಜೈಬುನ್ನಿಸಾ ಎಂ.ಖಾಜಿ ಒಳಗೊಂಡ ತ್ರಿಸದಸ್ಯ ಪೀಠ ವಿಚಾರಣೆ ಆರಂಭಿಸಿತ್ತು.
ಅರ್ಜಿದಾರರ ಪರ ವಕೀಲರಾದ ಸಂಜಯ್ ಹೆಗ್ಡೆ ಹಾಗೂ ದೇವದತ್ ಕಾಮತ್ ಅವರು ವಾದ ಮಂಡಿಸಿದರು. ಡಿಸೆಂಬರ್ 2021ರಿಂದ ನಡೆದ ಘಟನೆಯನ್ನು ವಿವರಿಸಿದರು. ಅರ್ಜಿದಾರರ ವಿದ್ಯಾರ್ಥಿಗಳೊಂದಿಗೆ ತಾರತಮ್ಯ ಮಾಡಲಾಗುತ್ತಿದೆ. ಶಿರವಸ್ತ್ರ ದರಿಸುವುದು ಧಾರ್ಮಿಕ ಹಾಗೂ ಸಾಂಸ್ಕೃತಿಕ ಆಚರಣೆಯಾಗಿದೆ ಎಂದು ವಿದ್ಯಾರ್ಥಿಗಳ ವಾದವಾಗಿದೆ ಎಂದರು.
ಈ ಬಗ್ಗೆ ಕೋರ್ಟ್ ಪ್ರತಿಕ್ರಿಯಿಸಿ, ಸ್ಕಾರ್ಫ್ ಧರಿಸುವುದು ಮೂಲಭೂತ ಹಕ್ಕುಗಳು ಒಳಗೆ ಬರುತ್ತದೆಯೇ ಎಂಬ ವಿಷಯವನ್ನು ನಾವು ಪರಿಗಣಿಸುತ್ತಿದ್ದೇವೆ ಎಂದು ಕೋರ್ಟ್ ಹೇಳಿತು. ವಾದ ವಿವಾದಗಳನ್ನು ಆಲಿಸಿ ವಿಚಾರಣೆಯನ್ನು ಸೋಮವಾರಕ್ಕೆ ಮೂಂದೂಡಲಾಗಿದೆ ಎಂದು ಹೈ ಕೋರ್ಟ ಆದೇಶ ನೀಡಿದೆ.
ಇದನ್ನೂ ಓದಿ:Live: Karnataka Hijab Row: ಹಿಜಾಬ್ ವಿವಾದ ಕುರಿತು ಹೈ ಕೊರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ