James: (ಫೆ.11): ಪುನೀತ್ ರಾಜ್ಕುಮಾರ್ ನಾಯಕನಾಗಿ ಕಾಣಿಸಿಕೊಂಡಿರುವ ಕೊನೆಯ ಚಿತ್ರ ‘ಜೇಮ್ಸ್’ ಚಿತ್ರ ಇಂದು ಬಿಡುಗಡೆಗೊಂಡಿದೆ . ಜೇಮ್ಸ್ ಚಿತ್ರ ಮಾರ್ಚ್ 17ರಂದು ತೆರೆಗೆ ಬರಲಿದೆ.. ಮೊಟ್ಟ ಮೊದಲ ಬಾರಿಗೆ ಸೈನಿಕ ಪಾತ್ರದಲ್ಲಿ ಪುನೀತ್ ರಾಜ್ಕುಮಾರ್ ಮಿಂಚಿದ್ದಾರೆ. ಜೇಮ್ಸ್’ ಚಿತ್ರವನ್ನು ವೀಕ್ಷಿಸಲು ಸಿನಿ ಪ್ರೇಮಿಗಳು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ.

ಈಗಾಗಲೇ ಚಿತ್ರದ ಪೋಸ್ಟರ್ಗಳು ಸಖತ್ ನಿರೀಕ್ಷೆ ಹುಟ್ಟಿಸಿವೆ. ಸಿನಿಮಾದಲ್ಲಿ ಶಿವಣ್ಣ, ರಾಘಣ್ಣನಟಿಸಿದ್ದಾರೆ. ಚಿತ್ರವನ್ನು ಅಪ್ಪು ಹುಟ್ಟುಹಬ್ಬದ ದಿನ ಬಿಡುಗಡೆ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಬಿಡುಗಡೆಯಾಗಿರುವ ಟೀಸರ್ ಸಿನಿಮಾದ ಮೇಲಿರುವ ನಿರೀಕ್ಷೆ ಹೆಚ್ಚಿಸಿದೆ.1 ನಿಮಿಷ 27 ಸೆಕೆಂಡ್ಗಳ ಟೀಸರ್ನಲ್ಲಿ ‘ಜೇಮ್ಸ್’ನ ಒಂದು ಸಣ್ಣ ಪರಿಚಯವಿದೆ. ಪಕ್ಕಾ ಆಕ್ಷನ್ ಪ್ಯಾಕ್ ಸಿನಿಮಾ ಇದಾಗಿರಲಿದೆ.

ಜೇಮ್ಸ್ ಟೀಸರ್ ಆಕ್ಷನ್ ನಿಂದ ಕೂಡಿದೆ. ಶಿವಣ್ಣ ಅವರು ಅಪ್ಪು ಪಾತ್ರಕ್ಕೆ ಧ್ವನಿ ನೀಡಿದ್ದಾರೆ. ಚಿತ್ರದ ಟೀಸರ್ ಪಿಆರ್‌ಕೆ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತ್ರವಲ್ಲದೇ ಕರ್ನಾಟದಲ್ಲಿರುವ ಎಲ್ಲಾ ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಗಳಲ್ಲಿ ಪ್ರದರ್ಶನವಾಗುತ್ತಿದೆ.ಅಪ್ಪುಗೆ ಶಿವಣ್ಣ ಕಂಠದಾನ ಮಾಡಿದ್ದು, ಒಂದು ಪವರ್ಫುಲ್ ಡೈಲಾಗ್ ಕೂಡ ಟೀಸರ್ನಲ್ಲಿದೆ. ‘ಭಾವನೆಗಳು ಬ್ಯುಸಿನೆಸ್ಗಿಂತ ದೊಡ್ಡದು- ಜೇಮ್ಸ್’ ಎಂಬ ಬರಹವನ್ನು ಟೀಸರ್ನಲ್ಲಿ ತೋರಿಸಲಾಗಿದೆ. ಕೆಲವೇ ದಿನಗಳ ಹಿಂದೆ ಶಿವರಾಜ್ಕುಮಾರ್ ಹಾಗೂ ರಾಘವೇಂದ್ರ ರಾಜ್ಕುಮಾರ್ ಅವರು ಈ ಚಿತ್ರದಲ್ಲಿ ನಟಿಸಿದ್ದು,ಕಂಠದಾನ ಕೂಡ ಮಾಡಿದ್ದಾರೆ.

ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅವರು ಸೈನಿಕ ಆಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಪೋಸ್ಟರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಜೇಮ್ಸ್’ನಲ್ಲಿ ನಾಯಕಿಯಾಗಿ ತಮಿಳು ನಟಿ ಪ್ರಿಯಾ ಆನಂದ್ ನಟಿಸಿದ್ದಾರೆ. ‘ರಾಜಕುಮಾರ’ ಚಿತ್ರದಲ್ಲಿ ಪುನೀತ್ ತಂದೆಯಾಗಿ ಅಭಿನಯಿಸಿದ್ದ ಹಿರಿಯ ತಮಿಳು ನಟ ಶರತ್ ಕುಮಾರ್ ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಜೇಮ್ಸ್ ಟೀಸರ್ ಕುರಿತು ಅಶ್ವಿನಿ ಪುನೀತ್ ರಾಜ್ಕುಮಾರ್ ಟ್ವೀಟ್ ಮಾಡಿದ್ದಾರೆ.
ಈ ಚಿತ್ರಕ್ಕೆ ಎ. ಹರ್ಷ ಕೊರಿಯೋಗ್ರಫಿ, ಸ್ಟಂಟ್ ಮಾಸ್ಟರ್ ವಿಜಯ್ ಫೈಟಿಂಗ್ ದೃಶ್ಯಾವಳಿ ನಿರ್ದೇಶಿಸಿದ್ದಾರೆ. ಕಿಶೋರ್ ಪತಿಕೊಂಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ, ಶ್ರೀಶ ಛಾಯಾಗ್ರಹಣ, ರವಿಸಂತೆ ಹೈಕ್ಲು ಕಲಾ ನಿರ್ದೇಶನ, ದೀಪು ಎಸ್.ಕುಮಾರ್ ಸಂಕಲನ ಇದೆ.
ಈ ಚಿತ್ರದಲ್ಲಿ ತೆಲುಗು ನಟ ಶ್ರೀಕಾಂತ್, ಆದಿತ್ಯ ಮೆನನ್, ಅನು ಪ್ರಭಾಕರ್, ರಂಗಾಯಣ ರಘು ಮತ್ತು ಮುಕೇಶ್ ರಿಷಿ ಸೇರಿದಂತೆ ದೊಡ್ಡ ತಾರಾಗಣ ನಟಿಸಿದೆ.
ಇದನ್ನು ಓದಿ:Puneeth Rajkumar:ಲಾಲಿ ಲಾಲಿ ಮಲಗು ರಾಜಕುಮಾರ… ಅಪ್ಪುಗೆ ಗೀತ ನಮನ ಸಲ್ಲಿಸಿದ ಟಿವಿ ವಿಕ್ರಮ ತಂಡ