ಮೈಸೂರು: (ಫೆ.11): Siddaramaiha ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಎಂಟು(Eight) ವರ್ಷ (Years)ಗಳಲ್ಲಿ 94 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಇದೇನಾ ಅಚ್ಚೇದಿನ್ ಎಂದರೆ? ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶವನ್ನು ದಿವಾಳಿಗೆ ತಂದು ನಿಲ್ಲಿಸಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.
ಇಂದು ಮೈಸೂರಿನ ಟಿ.ಕೆ.ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಅವರು ಪ್ರಧಾನಿಯಾದ(Prime Minister) ಮೇಲೆ ಕೇಂದ್ರ ಸರ್ಕಾರದ ಸಾಲ ಮಿತಿಮೀರಿ ಹೋಗಿದೆ.
ಸ್ವಾತಂತ್ರ್ಯ ಬಂದ ನಂತರದಿಂದ ಡಾ.ಮನಮೋಹನ್ ಸಿಂಗ್ (Manmohan Singh)ಅವರ ಕೊನೆಯ ಅವಧಿಯವರೆಗೆ ಇದ್ದ ಒಟ್ಟು ಸಾಲ 52ಲಕ್ಷ ಕೋಟಿ, ಈ ವರ್ಷದ ಮಾರ್ಚ್ ವೇಳೆಗೆ ದೇಶದ ಒಟ್ಟು ಸಾಲ 135 ಲಕ್ಷ ಕೋಟಿ, ಮುಂದಿನ ವರ್ಷ ಮತ್ತೆ 11 ಲಕ್ಷ ಕೋಟಿ ಸಾಲ ಮಾಡುವುದಾಗಿ ಕೇಂದ್ರ ಬಜೆಟ್‌ನಲ್ಲಿ ತಿಳಿಸಿದ್ದಾರೆ.
ದೇಶವನ್ನು ಸಾಲದ ಕೂಪಕ್ಕೆ ತಳ್ಳುತ್ತಿರುವ ಸರ್ಕಾರವಾಗಿದೆ ಎಂದು ಟೀಕಿಸಿದರು. ೨೦೧೯ರ ಚುನಾವಣೆಯಲ್ಲಿ ಹಲವಾರು ಘೋಷಣೆಗಳನ್ನು ಮಾಡಿದ್ದರು.
ಸಬ್ ಕಾ ವಿನಾಶ್ ಸರ್ಕಾರ :ಸಿದ್ದರಾಮಯ್ಯ
ಹುಸಿ ಭರವಸೆಗಳನ್ನು ನೀಡಿ ಜನರಿಗೆ ನಂಬಿಸಿದರು. ಆದರೆ, ಈ ಸರ್ಕಾರ ಸಬ್ ಕಾ ಸಾಥ್ ಸಬ್ ಕಾವಿಕಾಸ್ ಅಲ್ಲ ಇದು, ಸಬ್ ಕಾ ವಿನಾಶ್ ಸರ್ಕಾರ ಎಂದು ಹೇಳಿದರು. ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಬರಬೇಕಿದ್ದ ತೆರಿಗೆ ಪಾಲು ಕಡಿಮೆಯಾಗಿದೆ. ಇದು ಮೊದಲ ಅನ್ಯಾಯ. ಮೊದಲೆಲ್ಲ ಕೇಂದ್ರ ಸರ್ಕಾರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದ ಪಾಲು ಶೇ.75-80ಹಾಗೂ ರಾಜ್ಯದ ಪಾಲು ಶೇ.೨೫ – ೨೦ ಇತ್ತು. ಆದರೆ ಈಗ ಕೇಂದ್ರ ಮತ್ತು ರಾಜ್ಯದ ಪಾಲನ್ನು ಶೇ.50-50೦ ಮಾಡಿದ್ದಾರೆ. ಇದರಿಂದ ಕೇಂದ್ರದ ಯೋಜನೆಗಳಿಗೆ ರಾಜ್ಯ ಹೆಚ್ಚುವರಿ ಹೊರೆ ಹೊರಬೇಕಾಗಿದೆ ಎಂದು ಹೇಳಿದರು.
ಈ ವರ್ಷದ ಜೂನ್ ತಿಂಗಳಿಗೆ ರಾಜ್ಯಗಳಿಗೆ ನೀಡುತ್ತಿದ್ದ ಜಿಎಸ್‌ಟಿ ಪರಿಹಾರ ನಿಂತು ಹೋಗುತ್ತದೆ. ಇದರಿಂದ ಕನಿಷ್ಠ ೨೦ ಸಾವಿರ ಕೋಟಿ ರೂಪಾಯಿ ನಮ್ಮ ರಾಜ್ಯಕ್ಕೆ (State)ನಷ್ಟವಾಗುತ್ತದೆ. ಹಾಗಾಗಿ ಈ ಪರಿಹಾರವನ್ನು ಇನ್ನೈದು ವರ್ಷಗಳ ಕಾಲ ಮುಂದುವರೆಸಿ ಎಂದು ನಾನು ಮನವಿ ಮಾಡಿದ್ದೆ, ಈ ಬಗ್ಗೆ ಬೇರೆ ಯಾರೂ ಮಾತನಾಡದ್ದರಿಂದ ಮೋದಿ ಅವರು ಸುಮ್ಮನಿದ್ದಾರೆ ಎಂದು ಹೇಳಿದರು. ರಾಜ್ಯದಿಂದ ಬಿಜೆಪಿಯ ೨೫ ಜನ ಸಂಸದರನ್ನು (MP’s)ಜನ ಆರಿಸಿ ಕಳಿಸಿದ್ದಾರೆ, ಇವರ್ಯಾರಿಗೂ ನರೇಂದ್ರ ಮೋದಿ(Narendra Modi) ಎದುರು ಮಾತನಾಡುವ ಧೈರ್ಯ ಇಲ್ಲ. ಕರ್ನಾಟಕಕ್ಕೆ(Karnataka) ಅನ್ಯಾಯವಾಗುತ್ತಿದ್ದರೂ ಮೋದಿ ಎದುರು ನಿಂತು ಮಾತನಾಡುವ ಧೈರ್ಯ ಇಲ್ಲ. ಮೋದಿ ಎದುರು ಮಂಡಿಯೂರಿದ್ದಾರೆಎಂದರು.