Weather Updates: (ಫೆ.11): ರಾಜ್ಯದಲ್ಲಿ ಮಳೆಗಾಲ ಮುಗಿದು ಹಲವೆಡೆ ಶಕೆ ಆರಂಭವಾಗಿದೆ ಇನ್ನು ಕೆಲವು ಕಡೆ ಚಳಿ ಕೂಡ ಶುರುವಾಗಿದೆ. ಪ್ರತಿದಿನವೂ ಶಕೆ ಮತ್ತು ಚಳಿ ವಾತಾವರಣ ಬದಲಾಗುತ್ತಲೇ ಇದೆ ಹಾಗೂ ಮುಂದಿನ ದಿನಗಳಲ್ಲಿ ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಯಾಗುವ ಸಾಧ್ಯತೆಗಳು ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಲಘುವಾಗಿ ಮಳೆಯಾಗುವ ನಿರೀಕ್ಷೆಯಿದೆ. ಹಾಗೇ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಇನ್ನೆರಡು ದಿನ ಅಸ್ಸಾಂ ಮತ್ತು ಮೇಘಾಲಯದಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳ ಕಾಲ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಬಲವಾದ ಗಾಳಿ ಕಂಡುಬರುತ್ತದೆ.
ಮುಂದಿನ ಎರಡು ದಿನಗಳಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನದಲ್ಲಿ ಮಳೆಯಾಗಲಿದೆ. ಫೆಬ್ರವರಿ 13 ಮತ್ತು 15ರ ನಡುವೆ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.