Hijab Controversy (ಫೆ.12) : ರಾಜ್ಯದಲ್ಲಿ ಹಿಜಾಬ್ ಕುರಿತು ಎಲ್ಲಡೆ ಸಂಘರ್ಷಗಳು ಸೃಷ್ಟಿಯಾಗಿದೆ.ಅಲ್ಲದೆ ರಾಜಧಾನಿ ಬೆಂಗಳೂರಿನ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸದಂತೆ ಕಿರುಕುಳ ನೀಡಿರುವ ಘಟನೆ ಎಲ್ಲೆಡೆ ಸದ್ದು ಮಾಡುತ್ತಿರುವ ಬೆನ್ನಲ್ಲೆ, ಕರ್ನಾಟಕ ಸರ್ಕಾರ ಫೆಬ್ರವರಿ 15ರವರೆಗೆ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.
ನಗರದ ಚಂದ್ರಾಲೇಔಟ್ ವಿದ್ಯಾ ಸಾಗರ್ ಶಾಲೆಯ 7ನೇ ತರಗತಿ ಮಕ್ಕಳಿಗೆ ಶಿಕ್ಷಕರಿಂದ ಹಿಜಾಬ್ ವಿಚಾರವಾಗಿ ಕಿರುಕುಳ ನೀಡಲಾಗಿದೆ . ಹಿಜಾಬ್ ಧರಿಸಿ ಬಂದ ಮಕ್ಕಳಿಗೆ ಹಿಜಾಬ್ ತೆಗೆಯುವಂತೆ ಶಿಕ್ಷಕರಿಂದ ಒತ್ತಾಯಿಸಲಾಗಿದೆ.
ಇನ್ನೂ ದಾವಣಗೆರೆ ಜಿಲ್ಲೆಯ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಹೆಚ್ಚಾದ ಹಿನ್ನೆಲೆ ಜಿಲ್ಲೆಯಾದ್ಯಂತ 144 ನಿಷೇಧಾಜ್ಞೆ ಜಾರಿಗೆ ಆದೇಶ. ಫೆ.14ರ ಬೆಳಗ್ಗೆ 6ರಿಂದ ಫೆ.15ರ ಬೆಳಗ್ಗೆ 6ರವರೆಗೆ ದಾವಣಗೆರೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಆದೇಶ ಹೊರಡಿಸಿದ್ದಾರೆ.
