Advocate K N Jagadish: ವಕೀಲ ಜಗದೀಶ್ ಕೆಎನ್ ಅವರನ್ನು ಬಂಧಿಸಲಾಗಿದೆ. ಶುಕ್ರವಾರ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಕೀಲ ಜಗದೀಶ್ ಅವರನ್ನು ಬಂಧಿಸಲಾಗಿದೆ. ಕಳೆದ ಎರಡು ದಿನಗಳಿಂದ ಗಲಾಟೆಯ ಬಗ್ಗೆ ಭಾರಿ ಚರ್ಚೆ ನಡೆಯುತ್ತಿತ್ತು ಹಾಗೂ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಅವರನ್ನು ಅವ್ಯಾಚ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ಶನಿವಾರ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ದೂರು ನೀಡಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿವೇಕ್ ಸುಬ್ಬಾರೆಡ್ಡಿ ಹಾಕಿದ್ದರು. ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಎಲ್ಲ ಘಟನೆಗಳನ್ನು ಬೆಂಗಳೂರು ವಕೀಲರ ಸಂಘ ಗಂಭೀರವಾಗಿ ಪರಿಗಣಿಸಿದ್ದು, ಕಪ್ಪು ಕೋಟು ಧರಿಸಿ ನ್ಯಾಯಕ್ಕಾಗಿ ಹೋರಾಡುವ ಪ್ರತಿಯೊಬ್ಬ ವಕೀಲರ ಸಂಘದ ಮುಖ್ಯ ಉದ್ದೇಶ. ನಾನು ಚುನಾವಣೆಗೂ ಮುಂಚೆ ಕೊಟ್ಟ ಭರವಸೆಯಂತೆ ವಕೀಲರ ಹಿತರಕ್ಷಣೆಗೆ ಸದಾ ಸಿದ್ಧನಾಗಿದ್ದೇನೆ. ಈ ಹಿನ್ನೆಲೆ ವಕೀಲರ ಬಗ್ಗೆ ಹಗುರವಾಗಿ ಮಾತನಾಡುವುದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ವಕೀಲರನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ ಕೆಎಂಎಫ್ ಜಗದೀಶ್ ಅವರ ವಿರುದ್ಧ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಅವರು ಸಲ್ಲಿಸಲಾಯಿತು ಎಂದು ಬರೆದುಕೊಂಡಿದ್ದಾರೆ.
ಜಗದೀಶ ಅವರ ಪುತ್ರನ ಜೊತೆ ಮ್ಯಾಜಿಸ್ಟ್ರೇಟ್ ಕೋರ್ಟಿಗೆ ದಾಖಲೆಗಳನ್ನು ಸಲ್ಲಿಸಲು ಹೋಗುತ್ತಿದ್ದ ಸಂದರ್ಭದಲ್ಲಿ ಮಗನ ಮೇಲೆ ಹಲ್ಲೆ ನಡೆದಿತ್ತು. 20 ಜನರು ಕೋರ್ಟ್ ಆವರಣದಲ್ಲೇ ಹಲ್ಲೆ ಮಾಡಿದ್ದಾರೆ ಎಂದು ವಕೀಲ ಜಗದೀಶ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತು ಜಗದೀಶ್ ಅವರು ವಿಡಿಯೋವೊಂದನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.
ಇದನ್ನೂ ಓದಿ:Crime: ಮಗನೊಂದಿಗೆ ಸೇರಿ ಪತಿಯನ್ನೇ ಕೊಂದು 7ನೇ ಮಹಡಿಯಿಂದ ಶವ ಎಸೆದ ಖತರ್ನಾಕ್ ಮಹಿಳೆ