ಕೋಲಾರ; (ಫೆ.16): Jesus Statue:ಕೋಲಾರ ಜಿಲ್ಲೆಯ ಮುಳುಬಾಗಿಲಿನಲಿದ್ಧ 20 ಅಡಿ ಎತ್ತರದ ಏಸುಕ್ರಿಸ್ತನ ಪ್ರತಿಮೆ ಹಾಗೂ ಪ್ರಾರ್ಥನಾ (prayer hall) ಮಂದಿರವನ್ನು ಏಕಾಏಕಿ ಧ್ವಂಸಗೊಳಿಸಲಾಗಿದೆ.
(Government) ಸರ್ಕಾರಿ ಜಾಗದಲ್ಲಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕೋರ್ಟ್ (Court) ಪ್ರತಿಮೆ ಹಾಗೂ ಪ್ರಾರ್ಥನಾ ಮಂದಿರವನ್ನು ತೆರವುಗೊಳಿಸುವಂತೆ ಸೂಚನೆ ನೀಡಲಾಗಿತ್ತು. ಹಾಗಾಗಿ ಇಲ್ಲಿನ ತಹಸೀಲ್ದಾರ್ ನ್ಯಾಯಾಲಯ ಆದೇಶದಂತೆ ಪ್ರತಿಮೆ ಹಾಗೂ ಪ್ರಾರ್ಥಾನಾ ಮಂದಿರವನ್ನು ಧ್ವಂಸಗೊಳಿಸಿದ್ದಾರೆ ಎಂದು ಇಮ್ರಾನ್ ಖಾನ್ (Imran khan) ಟ್ವೀಟ್ ಮಾಡಿದ್ದಾರೆ.
ಗಾಂಧಿ ಪ್ರತಿಮೆಯೂ ಧ್ವಂಸ!
ಪಾಟ್ನ:(ಫೆ.16) Gandhi Statue: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರು ಚಂಪಾರಣ್ ಸತ್ಯಾಗ್ರಹ ಆರಂಭಿಸಿದ ಸ್ಥಳದ ಬಳಿ ಸ್ಥಾಪಿಸಲಾಗಿದ್ದ ಅವರ ಪ್ರತಿಮೆಯನ್ನು ಕೆಲವು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ ಎಂದು ಆಡಳಿತ ತಿಳಿಸಿದೆ.
ಮಾದಕ ವ್ಯಸನಿಗಳೆಂದು ಹೇಳಲಾದ ಕೆಲವು ದುಷ್ಕರ್ಮಿಗಳು ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಕೆಲವು ಪ್ರತ್ಯಕ್ಷದರ್ಶಿಗಳು ಹೇಳಿದರು. ಆರೋಪಿಗಳನ್ನು ಬಂಧಿಸಲು ಪೊಲೀಸ್ ತಂಡವನ್ನು ರಚಿಸಲಾಗಿದೆ. ಇಲ್ಲಿ ಒಬ್ಬ ಗೃಹರಕ್ಷಕನನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಕುಮಾರ್ ಆಶಿಶ್ ತಿಳಿಸಿದ್ದಾರೆ.

ಪವರ್ ಗ್ರಿಡ್ ಕಾರ್ಪೊರೇಷನ್ ಸ್ಥಾಪಿಸಿದ್ದ ಪ್ರತಿಮೆ:
ಸಿಎಸ್ ಆರ್ ಚಟುವಟಿಕೆಯಡಿ ಪವರ್ ಗ್ರಿಡ್ ಕಾರ್ಪೊರೇಷನ್ ಪ್ರತಿಮೆಯನ್ನು ಸ್ಥಾಪಿಸಿದೆ. ಈ ಸ್ಥಳವನ್ನು ಔಪಚಾರಿಕವಾಗಿ ಸರ್ಕಾರಕ್ಕೆ ಹಸ್ತಾಂತರಿಸಿಲ್ಲ, ಅವರು ಇಲ್ಲಿ ಸರಿಯಾದ ಭದ್ರತಾ ವ್ಯವಸ್ಥೆಯನ್ನು ಏಕೆ ಮಾಡಲಿಲ್ಲ ಎಂದು ಎಂದು ಪೂರ್ವ ಚಂಪಾರಣ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಪಿಲ್ ಅಶೋಕ್ ಪ್ರಶ್ನಿಸಿದರು.
“ಪೊಲೀಸರು ತನಿಖೆ ಕೈಗೊಂಡಿದ್ದಾರೆ ಮತ್ತು ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾಗಿರುವವರು ಕಾನೂನು ಪ್ರಕಾರ ಕ್ರಮ ಎದುರಿಸಬೇಕಾಗುತ್ತದೆ ಎಂದು ಕಪಿಲ್ ಅಶೋಕ್ ಹೇಳಿದರು.
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ತನ್ನ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ಉದ್ಯಾನವನದ ನಿರ್ವಹಣಾ ಕಾರ್ಯವನ್ನು ನಡೆಸುತ್ತಿದೆ. ಸೂಕ್ತ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲು ನಾವು ಅವರಿಗೆ ಸಲಹೆ ನೀಡುತ್ತೇವೆ. ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆಯನ್ನು ಖಚಿತಪಡಿಸಿಕೊಳ್ಳಲಾಗುವುದು. ಪ್ರತಿಮೆಯ ಮರು ಪ್ರತಿಷ್ಠಾಪನೆಯನ್ನು ಜಿಲ್ಲಾಡಳಿತ ಮಾಡಲಿದೆ ಎಂದು ಹೇಳಿದರು.
ಇದನ್ನೂ ಓದಿ:Crime:18 ಲಕ್ಷ ಮೌಲ್ಯದ ನಿಷೇಧಿತ ಯಾಬಾ ಮಾತ್ರೆಗಳು ಪೊಲೀಸ್ ವಶ