ಬೆಂಗಳೂರು: (ಫೆ.19) : Crimeರಾಜ್ಯದೆಲ್ಲಡೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಲೆಯಿದೆ. ಡೆತ್ನೋಟ್ ಬರೆದಿಟ್ಟು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಬೆಂಗಳೂರಿನ ಶೆಟ್ಟಿಹಳ್ಳಿ ಬಳಿ ನಡೆದಿದೆ.
9ನೇ ತರಗತಿ ವಿದ್ಯಾರ್ಥಿನಿ ಕೆ.ಎಸ್. ರಮ್ಯಾ ಮೂರ್ತಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಟಿ.ದಾಸರಹಳ್ಳಿಯ ಸೌಂದರ್ಯ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.
ಶಾಲಾ ಆಡಳಿತ ಮಂಡಳಿ ವಿರುದ್ಧ ಮನೊಂದು ಡೆತ್ ನೋಟ್‌ನಲ್ಲಿ Dear school, marks is not everything. I HATE YOU PRINCIPAL ಎಂದು ಇಂಗ್ಲಿಷ್ನಲ್ಲೇ ಡೆತ್ನೋಟ್ ಬರೆದಿದ್ದಾಳೆ. ರಮ್ಯಾ ಬರೆದಿರುವ ಡೆತ್ನೋಟ್ ನಲ್ಲಿ ಕೆಲ ವಿದ್ಯಾರ್ಥಿಗಳ ಹೆಸರನ್ನೂ ಬರೆದಿದ್ದಾಳೆ.
ಈ ಹಿಂದೆ ಶಾಲಾ ಆಡಳಿತ ಮಂಡಳಿ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ರಮ್ಯಾರ ತಾಯಿ ದೂರು ನೀಡಿದ್ದಾರೆ. ವಿಚಾರವಾಗಿ ವಿದ್ಯಾರ್ಥಿನಿಗೆ ಶಾಲೆಯಲ್ಲಿ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಯಶವಂತಪುರ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುರಿಗಾಯಿ ಮಹಿಳೆಯ ಮೇಲೆ ಕಾಮುಕರ ಅಟ್ಟಹಾಸ
ಧಾರವಾಡ(ಫೆ.19): Crime: ಕುರಿಗಾಯಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
35 ವಯಸ್ಸಿನ ಮಹಿಳೆ ಕಟ್ಟಿಗೆ ತರಲು ಬಂದ ವೇಳೆ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. ಅತ್ಯಾಚಾರ ಮಾಡಿದ್ದಲ್ಲದೇ ಕೊಲೆಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮೂಲದ ಕುರಿಗಾಯಿ ಮಹಿಳೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ಪರಿಶೀಲನೆ ನೀಡಿದ್ದಾರೆ.
9ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ
ಕೋಲಾರ: (ಫೆ.19): Crime 9ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ಪೈಶಾಚಿಕ ಕೃತ್ಯ ಎಸಗಿದ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯನ್ನ ಪುಸಲಾಯಿಸಿ ಸಾಮೂಹಿಕ ಅತ್ಯಾಚಾರ ಮಾಡಿಲಾಗಿದೆ.
ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ವಿದ್ಯಾರ್ಥಿನಿ ಹೇಳಿಕೆ ಪಡೆದಿದ್ದಾರೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.