Senior Actor Rajesh: (ಫೆ.19): ಕನ್ನಡ ಚಿತ್ರರಂಗದ ಹಿರಿಯ ನಟ, ‘ಕಲಾ ತಪಸ್ವಿ’ ರಾಜೇಶ್ ಶನಿವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಇಂದು ಮುಂಜಾನೆ 2.30ಕ್ಕೆ ರಾಜೇಶ್ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. 89 ವರ್ಷದ ಹಿರಿಯ ನಟ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ.
ಇಂದು ಸಂಜೆ 6 ಗಂಟೆವರೆಗೂ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ರಾಜೇಶ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಟ ರಾಜೇಶ್(Kannada senior actor Rajesh) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ಹಿರಿಯ ನಟ ರಾಜೇಶ್ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಮತ್ತು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.
1932ರ ಏ.15ರಂದು ಬೆಂಗಳೂರಿನಲ್ಲಿ ಜನಿಸಿದ ರಾಜೇಶ್ ಅವರು ಚಿಕ್ಕ ವಯಸ್ಸಿನಲ್ಲೇ ಅಭಿನಯದ ಬಗ್ಗೆಆಸಕ್ತಿ ಹೊಂದಿದ್ದರು. ಶಾಲಾ-ಕಾಲೇಜು ದಿನಗಳಲ್ಲಿ ಮನೆಯವರಿಗೆ ಗೊತ್ತಿಲ್ಲದಂತೆಯೇ ಅವರು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಅವರ ಮೂಲ ಹೆಸರು ಮುನಿ ಚೌಡಪ್ಪ.ನಾಟಕಗಳಲ್ಲಿ ಅಭಿನಯಿಸುವಾಗ ವಿದ್ಯಾಸಾಗರ್ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದರು. ಚಿತ್ರರಂಗದಲ್ಲಿ ‘ತಲಾತಪಸ್ವಿ’ ರಾಜೇಶ್ ಎಂದೇ ಅವರು ಫೇಮಸ್ ಆದರು. 1960ರಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು.
ರಾಜೇಶ್ ಅವರ ಪುತ್ರಿ ಆಶಾ ರಾಣಿ ಕೂಡ ಚಿತ್ರರಂಗದಲ್ಲಿ ಯಶಸ್ಸು ಕಂಡವರು. ಆಶಾ ರಾಣಿ ಅವರನ್ನು ನಟ ಅರ್ಜುನ್ ಸರ್ಜಾ 1988ರಲ್ಲಿ ಮದುವೆ ಆದರು.ಸೊಸೆ ತಂದ ಸೌಭಾಗ್ಯ, ದೇವರ ದುಡ್ಡ, ಕಲಿಯುಗ, ದೇವರ ಗುಡಿ, ವೀರ ಸಂಕಲ್ಪ, ಗಂಗೆ ಗೌರಿ ಸೇರಿದಂತೆ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ರಾಜೇಶ್ ಬಣ್ಣ ಹಚ್ಚಿದ್ದರು. ಫೆ.25ರಂದು ಬಿಡುಗಡೆ ಆಗಲಿರುವ ‘ಓಲ್ಡ್ ಮಾಂಕ್’ ಸಿನಿಮಾದಲ್ಲಿ ಅವರೊಂದು ಅತಿಥಿ ಪಾತ್ರ ಮಾಡಿದ್ದರು.
ಇದನ್ನೂ ಓದಿ:Sneharshi:ನಾಯಕ ಕಿರಣ್ ನಾರಾಯಣ್ ಲುಕ್ ಗೆ ಅಪಾರ ಮೆಚ್ಚುಗೆ