ಬೆಂಗಳೂರು: (ಫೆ.21): Shivamogga Murder: ಭಜರಂಗದಳ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಖಂಡಿಸಿರುವ ಶ್ರೀರಾಮಸೇನೆ ಸಂಘಟನೆ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ಭೇಟಿ ಮಾಡಿದ್ದಾರೆ. ನಾಲ್ಕು ಅಂಶಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಮನವಿ ಪತ್ರ ನೀಡಿದೆ.

ಈ ಬಗ್ಗೆ ಮಾತನಾಡಿರುವ ಶ್ರೀರಾಮಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನನ್ನ ಕೊಲೆ ಮಾಡಿರುವುದು ಹೇಯ ಕೃತ್ಯವಾಗಿದೆ. ಇನ್ನೊಂದು ತಿಂಗಳೊಳಗಾಗಿ ಎಲ್ಲಾ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಎಸ್ ಡಿಪಿಐ, ಪಿಎಫ್ಐ ಹಾಗೂ ಸಿಎಫ್ ಐ ಸಂಘಟನೆಗಳಿಂದ ಎರಡು ವರ್ಷಗಳಿಂದ ಮೃತ ಹರ್ಷನಿಗೆ ಜೀವ ಬೆದರಿಕೆವಿದ್ದರೂ ಸರ್ಕಾರ ರಕ್ಷಣೆ ನೀಡದಿರುವುದು ನಾಚಿಗೇಡು ಸಂಗತಿಯಾಗಿದೆ.
ಈ ಹಿಂದೆ ವಿರೋಧ ಪಕ್ಷದಲ್ಲಿದ್ದ ಬಿಜೆಪಿಯು ರಾಜ್ಯದಲ್ಲಿ ಎಸ್ ಡಿಪಿಐ ಹಾಗೂ ಪಿಎಫ್ಐ ಸಂಘಟನೆ ನಿಷೇಧಿಸುವಂತೆ ಒತ್ತಾಯಿಸಿತ್ತು. ಈಗ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಇಂತಹ ಸಂಘಟನೆಗಳನ್ನ ನಿಷೇಧಿಸಬೇಕು. ಮೃತ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕು ಹಾಗೂ ಹಿಂದೂ ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ:Crime: ರಾಮಮಂದಿರ ಆಟದ ಮೈದಾನದಲ್ಲಿ ಅನುಮಾನಸ್ಪಾದ ಶವ ಪತ್ತೆ