ಮಂಗಳೂರು: (ಫೆ.23):Uroos Festival: ಜಾಯಿಂಟ್ ವ್ಹೀಲ್ ತುಂಡಾಗಿ ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಉಳ್ಳಾಲದಲ್ಲಿ (Ullal) ನಡೆಯುತ್ತಿರುವ ಪಂಚ ವಾರ್ಷಿಕ ಉರೂಸ್ ಕಾರ್ಯಕ್ರಮದಲ್ಲಿ ಉರೂಸ್ ಪ್ರಯುಕ್ತ ದರ್ಗಾ ಸಂದರ್ಶನಕ್ಕೆಂದು ಬಂದಿದ್ದ ಕೇರಳ ಮೂಲದ ಕುಟುಂಬದ ನಾಲ್ವರು ಮಕ್ಕಳು ಸಂತೆಯಲ್ಲಿದ್ದ ಜಯಿಂಟ್ ವ್ಹೀಲ್ ನಲ್ಲಿ ಆಟವಾಡುತ್ತಿದ್ದರು. ವ್ಹೀಲ್ ಜಾಯಿಂಟ್ ತಪ್ಪಿದ ಪರಿಣಾಮ ನಾಲ್ವರು ಮಕ್ಕಳು ಕೆಳಕ್ಕೆ ಬಿದ್ದು ಗಾಯಗೊಂಡಿದ್ದಾರೆ.
ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಜನ ಜಮಾಯಿಸಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೋವಿಡ್ ಕಾರಣದಿಂದಾಗಿ ನಡೆದಿರಲಿಲ್ಲ. ಈ ಬಾರಿ ಹೆಚ್ಚು ಜನ ಸೇರಿದ್ದರು. ಅಂತಹ ಸಂದರ್ಭದಲ್ಲಿ ಈ ಅವಘಢ ನಡೆದಿದೆ ಎಂದು ಅಖಿಲ ಕರ್ನಾಟಕ ಸೂಫಿ ಸಂತರ ಸಂಘದ ಅಧ್ಯಕ್ಷ ಸೂಫಿ ವಲೀಬಾ ತಿಳಿಸಿದ್ದಾರೆ.
ಗಾಯಾಳು ಮಕ್ಕಳನ್ನು ಸ್ಥಳೀಯ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ. ಸ್ಥಳಕ್ಕಾಗಮಿಸಿದ ಉಳ್ಳಾಲ ಠಾಣಾ ಪೋಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.