ಬೆಂಗಳೂರು: (ಫೆ.25) Actor Chetan: ಸಾಮಾಜಿಕ ಹೋರಾಟಗಾರ, ನಟ ಚೇತನ್ ಅವರಿಗೆ 32 ನೇ ಎಸಿಎಂಎಂ ನ್ಯಾಯಾಲಯದಿಂದ ಚೇತನ್‌ಗೆ ಜಾಮೀನು ಸಿಕ್ಕಿದೆ. ಕೆಲ ಷರತ್ತುಗಳನ್ನು ಹಾಕಿ ಜಾಮೀನು ನೀಡಲಾಗಿದೆ.
ನ್ಯಾಯಾಂಗ ನಿಂದನೆ (contempt of court) ಆರೋಪಕ್ಕೆ ಗುರಿಯಾಗಿಸಿಕೊಂಡು ನಟ ಚೇತನ್ ಅವರನ್ನು ಬೆಂಗಳೂರಿನ ಹೆಚ್ಚುವರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ನಟ ಚೇತನ್ (Actor Chetan) ಅವರ ಜಾಮೀನು ಮನವಿಯ ವಿಚಾರಣೆ ನಡೆಸಿದ 40ನೇ ಹೆಚ್ಚುವರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ (magistrate) ನ್ಯಾಯಾಲಯದ ನ್ಯಾಯಾಧೀಶರಾದ ಪದ್ಮಾಕರ್ ವನಕುದ್ರೆ (Padmakar vanakudre) ಅವರು ಆದೇಶಕ್ಕಾಗಿ ಪ್ರಕರಣವನ್ನು ಫೆಬ್ರವರಿ 25ಕ್ಕೆ ಮುಂದೂಡಿದ್ದರು. ಈದೀಗ ನಟ ಚೇತನ್ ಅವರಿಗೆ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಲಾಗಿದೆ.
ನಟ ಚೇತನ್ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಬಾಲಕೃಷ್ಣನ್ (Balakrishnan) ಅವರು ʻಚೇತನ್ ಮಾಡಿರುವ ಟ್ವೀಟ್‌ನಲ್ಲಿ ಮಾನಹಾನಿ, ಬೆದರಿಕೆ, ಅವಾಚ್ಯ ಅಥವಾ ಅಶ್ಲೀಲ ಅಂಶಗಳು ಇಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯದ ಅಡಿ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಚೇತನ್ ಅವರು ಸಮಾಜದಲ್ಲಿ ಜವಾಬ್ದಾರಿಯುತ ವ್ಯಕ್ತಿಯಾಗಿದ್ದು, ತನಿಖೆಗೆ ಸಹಕರಿಸುವುದಿಲ್ಲ ಎನ್ನಲಾಗದು. ಹೀಗಾಗಿ, ಅವರಿಗೆ ಜಾಮೀನು ಮಂಜೂರು ಮಾಡಬೇಕುʼ ಎಂದು ವಾದಿಸಿದ್ದರು.
ಇದನ್ನು ಓದಿ: Actor Chetan: ಫೆ.25ಕ್ಕೆ ವಿಚಾರಣೆ ಮುಂದೂಡಿಕೆ; ನಟ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ!