ಬೆಂಗಳೂರು: (ಫೆ. 25) : Bangalore Crime: ಕಾಮಾಕ್ಷಿಪಾಳ್ಯದಲ್ಲಿ ವ್ಯಕ್ತಿಯೊಬ್ಬನ ತಲೆ ಮೇಲೆ ಸಿಮೆಂಟ್ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕಾಮಾಕ್ಷಿ ಪಾಳ್ಯ ಶ್ರೀನಿವಾಸ ಬಾರ್ ಪಕ್ಕದಲ್ಲಿ ಶವ ಪತ್ತೆಯಾಗಿದೆ.
ಸ್ಥಳೀಯರ ಮಾಹಿತಿ ಪ್ರಕಾರ ಇಂದು ಬೆಳಗ್ಗೆ ನಸುಕಿನ ಜಾವದಲ್ಲಿ ಈ ಘಟನೆ ನಡೆದಿದೆ.
ಇನ್ನೂ ಮೃತಪಟ್ಟವನನ್ನು 40 ವರ್ಷದ ಸತೀಶ್ ಎಂದು ಗುರುತಿಸಲಾಗಿದೆ. ಘಟನೆ ನಿಖರ ಕಾರಣ ಕೂಡ ತಿಳಿದುಬಂದಿಲ್ಲ.
ಕಾಮಾಕ್ಷಿ ಪಾಳ್ಯ ಶ್ರೀನಿವಾಸ ಬಾರ್ ಪಕ್ಕದಲ್ಲಿ ಶವ ಪತ್ತೆ ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತನ ಜೇಬಿನಲ್ಲಿ ಆಧಾರ್ ಕಾರ್ಡ್ ಸಿಕ್ಕಿದೆ. ಮೃತಪಟ್ಟವನು ಸತೀಶ್ ಎಂದು ಗುರುತಿಸಲಾಗಿದ್ದು ಕಾಮಾಕ್ಷಿಪಾಳ್ಯದಲ್ಲಿ ಮನೆಯಿರುವ ವಿಳಾಸ ಪತ್ತೆಯಾಗಿದೆ. ಆಧಾರ್ ಕಾರ್ಡ್ ನಲ್ಲಿರುವ ವಿಳಾಸಕ್ಕೆ ಹೋಗಿ ನೋಡಿದಾಗ ಮೃತ ವ್ಯಕ್ತಿ ಅಲ್ಲಿ ವಾಸವಾಗಿರಲಿಲ್ಲ ಎಂದು ಗೊತ್ತಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಾರಕಾಸ್ತ್ರಗಳೊಂದಿಗೆ ದರೋಡೆಗೆ ತಯಾರಿ – ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು.
ಬೆಂಗಳೂರು: (ಫೆ. 25) : Crime: ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾರಕಾಸ್ತ್ರ ತೋರಿಸಿ ದರೋಡೆಗೆ ಸಿದ್ದತೆ ನಡೆಸಿದ್ದ ಯಲಹಂಕ ಪೊಲೀಸ್ ಠಾಣೆಯ ಮೂವರು ರೌಡಿಶೀಟರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಯಲಹಂಕ, ಡಿ.ಜೆ.ಹಳ್ಳಿ ಠಾಣೆಗಳ ರೌಡಿಶೀಟರ್ ಗಳಾದ ವಾಸೀಂ, ನಜೀಮ್ ಹಾಗೂ ಮೋಹಿಸಿನ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತ ಆರೋಪಿಗಳಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.



ಆರೋಪಿಗಳು ಬುಧವಾರ ಸಂಜೆ ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂಪುರದಿಂದ ಕನಕನಗರದ ಕಡೆ ಹೋಗುವ ರಸ್ತೆಯ ರೈಲ್ವೆ ಹಳಿಯ ಹತ್ತಿರ ಮಾರಕಾಸ್ತ್ರಗಳನ್ನು ಹಿಡಿದು ಹೊಂಚು ಹಾಕಿ ಕುಳಿತಿದ್ದರು. ಈ ಮಾರ್ಗದಲ್ಲಿ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ದರೋಡೆಗೆ ಸಿದ್ದತೆ ನಡೆಸಿದ್ದರು.
ಈ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಹಿಂದೆ ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳು
ರೌಡಿಶೀಟರ್ ವಾಸೀಂ ವಿರುದ್ಧ 2014 ರಲ್ಲಿ ಯಲಹಂಕ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಮತ್ತು ಇನ್ನೊಬ್ಬ ರೌಡಿಶೀಟರ್ ನಜೀಮ್ ವಿರುದ್ಧ ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದವು.
ಇದನ್ನು ಓದಿ:Actor Chetan: ಫೆ.25ಕ್ಕೆ ವಿಚಾರಣೆ ಮುಂದೂಡಿಕೆ; ನಟ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ!