ಬೆಂಗಳೂರು: (ಮಾ.1): D K Shivakumar: ನಮ್ಮ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಅಲ್ಲಿಗೆ ತೆರಳಿದ್ದಾರೆ. ನಮ್ಮಲ್ಲಿ ಸಾಕಷ್ಟು ಮೆಡಿಕಲ್ ಕಾಲೇಜುಗಳಿದ್ದರೂ ಬೇಡಿಕೆ ಹೆಚ್ಚಾಗಿರುವುದರಿಂದ ಸಾಕಷ್ಟು ನಮ್ಮ ವಿದ್ಯಾರ್ಥಿಗಳು ಉಕ್ರೇನ್ ಗೆ ತೆರಳಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದು ಹೇಳಿದರು.
ವಿಶ್ವದ ಇತರೆ ದೇಶಗಳು ತಮ್ಮ ವಿದ್ಯಾರ್ಥಿಗಳನ್ನು ವಾಪಸ್ ಕರೆಸಿಕೊಂಡಿದ್ದರೆ, ನಮ್ಮ ದೇಶದ ಸರ್ಕಾರ ಇನ್ನೂ ಮೀನಾಮೇಷ ಎಣಿಸುತ್ತಿದೆ. ಕೇಂದ್ರ ಸರಕಾರ ನಿನ್ನೆಯಷ್ಟೇ ನಾಲ್ವರು ಸಚಿವರನ್ನು ವಿದ್ಯಾರ್ಥಿಗಳ ರಕ್ಷಣಾ ಕಾರ್ಯಕ್ಕೆ ನಿಯೋಜಿಸಿದೆ. ಕೇಂದ್ರ ಸರ್ಕಾರಕ್ಕೆ ಎಷ್ಟು ಬೇಜವಾಬ್ದಾರಿ ಇದೆ ಎಂಬುದನ್ನು ಇದು ತೋರುತ್ತದೆ.
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನಮ್ಮ ವಿದ್ಯಾರ್ಥಿಗಳ ರಕ್ಷಣೆ ವಿಚಾರದಲ್ಲಿ ವಿಫಲವಾಗಿವೆ. ಇನ್ನಾದರೂ ತುರ್ತು ಕ್ರಮ ಕೈಗೊಂಡು ಭಾರತೀಯರನ್ನು ತಾಯ್ನಾಡಿಗೆ ವಾಪಸ್ ಕರೆಸಿಕೊಳ್ಳಬೇಕು. ಪ್ರಧಾನಿಗಳು ತಾವು ವಿಶ್ವಗುರು ಎಂದು ಬಿಂಬಿಸಿಕೊಳ್ಳುತ್ತಾರೆ. ಇದೇನಾ ವಿಶ್ವಗುರುವಿನ ಲಕ್ಷಣ? ಈ ವಿಚಾರವನ್ನು ನಿಮಗೆ ಬಿಡುತ್ತೇನೆ.
ವಿದ್ಯಾರ್ಥಿಗಳ ಪೋಷಕರ ದುಃಖ, ದುಮ್ಮಾನವನ್ನು ನೀವು ನೋಡುತ್ತಿದ್ದೀರಿ. ಕೇವಲ ಬಾಯಿ ಮಾತಲ್ಲಿ ರಕ್ಷಣೆ ಮಾಡುತ್ತೇವೆ ಎಂದರೆ ಸಾಲದು, ಅದನ್ನು ಕಾರ್ಯರೂಪಕ್ಕೆ ತರಬೇಕು. ನಮ್ಮ ವಿದೇಶಾಂಗ ನೀತಿ ಸಂಪೂರ್ಣ ವಿಫಲವಾಗಿದ್ದು, ಭಾರತೀಯರು ಆತ್ಮವಿಶ್ವಾಸ ಕಳೆದುಕೊಂಡಿದ್ದಾರೆ. ಸರ್ಕಾರ ಈ ಕೂಡಲೇ ಯುದ್ಧದಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಿಸಬೇಕು.’
ಇದನ್ನೂ ಓದಿ: CM Bommai: ಇನ್ನಷ್ಟು ಕಾಂಗ್ರೆಸ್- ಜೆಡಿಎಸ್ ಮುಖಂಡರು ಶೀಘ್ರವೇ ಬಿಜೆಪಿಗೆ: ಬಸವರಾಜ ಬೊಮ್ಮಾಯಿ