ಉತ್ತರ ಕನ್ನಡ: (ಮಾ.3): Sugar Cane: ಆಕಸ್ಮಿಕ ಬೆಂಕಿ ತಗುಲಿ ಕಬ್ಬಿನ ಗದ್ದೆ ಸಂಪೂರ್ಣ ಸುಟ್ಟು ಭಸ್ಮವಾಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ದೊಡ್ಡಕೊಪ್ಪ ಗ್ರಾಮದಲ್ಲಿ ನಡೆದಿದೆ. ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ, ಬೆಳೆ ಹಾನಿಯಾಗಿದೆ. ಗುರುನಾಥ ಕಲಕೇರಿ, ಕೃಷ್ಣಾ ಪಾಟೀಲ್, ಮಾರುತಿ ಬಾವಕರ್ ಎಂಬುವರಿಗೆ ಸೇರಿದ ಗದ್ದೆಯಲ್ಲಿ 35 ಎಕರೆ ಕಬ್ಬು ಬೆಳೆ ಸುಟ್ಟಿದೆ. ಗಾಳಿ ರಭಸಕ್ಕೆ ಒಂದು ಗದ್ದೆಯಿಂದ ಮತ್ತೊಂದು ಗದ್ದೆಗೆ ಬೆಂಕಿ ಹಬ್ಬಿದೆ. ಇದರಿಂದ 70 ಲಕ್ಷ ರೂ. ಮೌಲ್ಯದ ಕಬ್ಬು ನಾಶವಾಗಿದೆ ಎಂದು ಹೇಳಲಾಗುತ್ತಿದೆ.

ಬೆಂಕಿಗೆ ಕಬ್ಬು ಬೆಳೆ ಸಂಪೂರ್ಣ ನಾಶವಾಗಿದ್ದು, ರೈತರು ಪರಿಹಾರಕ್ಕೆ ಆಗ್ರಹಿಸಿದ್ದಾರೆ. ವಿದ್ಯುತ್ ಶಾಟ್೯ ಸರ್ಕ್ಯೂಟ್ನಿಂದ ಬೆಂಕಿ ತಗುಲಿರಬಹುದು ಎಂದು ಹೇಳಲಾಗುತ್ತಿದೆ. ಹಾಗೂ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ದಾರೆ.ತಡರಾತ್ರಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತುಕೊಂಡಿತ್ತು. ಸ್ಥಳೀಯರ ಸಮಯಪ್ರಜ್ಞೆಯಿಂದ ನೂರಾರು ಎಕರೆ ಪ್ರದೇಶದಲ್ಲಿದ್ದ ಕಬ್ಬು ಉಳಿದುಕೊಂಡಿದೆ. ಬೆಂಕಿ ಹೊತ್ತಿಕೊಳ್ಳಲು ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಅಂತಾ ರೈತರು ಆರೋಪ ಮಾಡಿದ್ದಾರೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಈ ಹಿಂದೆಯೂ ಕೂಡ ಕಬ್ಬಿನ ಗದ್ದೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ರೈತರು ಹೇಳಿದ್ದಾರೆ.ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿವಾಪುರ ಗ್ರಾಮದಲ್ಲಿದ್ದ 5 ಎಕರೆಯಲ್ಲಿ ಬೆಳೆದಿದ್ದ ಕಬ್ಬುಗೆ ಬೆಂಕಿ ತಗುಲಿ ಬೆಳೆ ನಾಶವಾಗಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಿದ್ದರು.
ಇದನ್ನು ಓದಿ: Karnataka Budget 2022-23:ಬಜೆಟ್ ಅಧಿವೇಶನ ಹಿನ್ನೆಲೆ – ವಿಧಾನಸೌಧ ಸುತ್ತಮುತ್ತ ನಿಷೇದಾಜ್ಞೆ ಜಾರಿ