Russia Ukraine War: (ಮಾ.4): ರಷ್ಯಾ ಉಕ್ರೇನ್ ಕದನದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ಪ್ರಯತ್ನಗಳು ನೆಡೆಯುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ರಷ್ಯಾದ ದಾಳಿಗೆ ಕರ್ನಾಟಕ ಮೂಲದ ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದ. ಈ ಘಟನೆಯ ಬೆನ್ನಲ್ಲೇ ಇಂದು ಮತ್ತೋರ್ವ ವಿದ್ಯಾರ್ಥಿಗೆ ಗುಂಡು ತಗುಲಿದೆ. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ರಾಜ್ಯ ಸಚಿವರಾಗಿರುವ ಜನರಲ್ (ನಿವೃತ್ತ) ವಿಕೆ ಸಿಂಗ್ ಮಾಹಿತಿ ನೀಡಿದ್ದಾರೆ.

ಕೀವ್‌ನಿಂದ ಬರುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಗುಂಡು ತಗುಲಿದ್ದು, ಆತ ಮಾರ್ಗ ಮಧ್ಯದಲ್ಲಿ ವಾಪಸ್ಸಾಗಿದ್ದಾರೆ ಎಂದು ವಿಕೆ ಸಿಂಗ್ ಹೇಳಿದ್ದಾರೆ.
ರಷ್ಯಾದ ದಾಳಿಯಿಂದ ಯುರೋಪ್ನಲ್ಲೇ ಅತ್ಯಂತ ದೊಡ್ಡದಾದ ಪರಮಾಣು ವಿದ್ಯುತ್ ಸ್ಥಾವರಕ್ಕೆ ಬೆಂಕಿ ತಗುಲಿದೆ ಎಂದು ಉಕ್ರೇನ್ ಹೇಳಿದ್ದು, ವಿಡಿಯೋ ಬಿಡುಗಡೆ ಮಾಡಲಾಗಿದೆ. ಒಂದು ವೇಳೆ ಸ್ಥಾವರ ಸ್ಫೋಟಗೊಂಡರೆ ಚೆರ್ನೋಬಿಲ್ ದುರಂತಕ್ಕಿಂತಲೂ ಹತ್ತು ಪಟ್ಟು ಹೆಚ್ಚುಅನುಹಾತವಾಗಲಿದೆ ಎಂದು ಉಕ್ರೇನ್ ಆತಂಕ ಹೊರಹಾಕಿದೆ.
‘ಶತ್ರುಗಳ ನಿರಂತರ ಶೆಲ್ ದಾಳಿಯ ಪರಿಣಾಮವಾಗಿ, ಜಪೋರಿಝಿಯಾ ಪರಮಾಣು ವಿದ್ಯುತ್ ಸ್ಥಾವರಕ್ಕೆ ಬೆಂಕಿ ತಗುಲಿದೆ’ ಎಂದು ಓರ್ಲೋವ್ ತನ್ನ ಟೆಲಿಗ್ರಾಮ್ ಚಾನೆಲ್ನಲ್ಲಿ ಹೇಳಿದ್ದು, ಇದು ವಿಶ್ವದ ಭದ್ರತೆಗೆ ದೊಡ್ಡ ಆತಂಕವಾಗಿದೆ ಎಂದಿದ್ದಾರೆ
I received info today that a student coming from Kyiv got shot and was taken back midway. We're trying for maximum evacuation in minimum loss: MoS Civil Aviation Gen (Retd) VK Singh, in Poland#RussiaUkraine pic.twitter.com/cggVEsqfEj
— ANI (@ANI) March 4, 2022
ಇದನ್ನೂ ಓದಿ:Sonu Sood: ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ನೆರವಿಗೆ ಸೋನು ಸೂದ್!