ಬೆಂಗಳೂರು: (ಮಾ.4) Karnataka Budget 2022: ಇಂದು ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು 12:30 ವಿಧಾನಸಭೆಯಲ್ಲಿ ತಮ್ಮ ಮೊದಲ ಬಜೆಟ್ ಅನ್ನು ಮಂಡಿಸಲಿದ್ದಾರೆ.
ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಬಜೆಟ್ ಮಂಡನೆಯಾಗುತ್ತಿರುವುದು ಬಹಳ ಕುತೂಹಲಕಾರಿಯಾಗಿದೆ. ಈ ಬಾರಿಯ ಬಜೆಟ್ ಜನಪರ, ಅಭಿವೃದ್ಧಿಯ ಬಜೆಟ್ ಆಗಲಿದೆಯಾ ಎಂಬುದನ್ನು ನೋಡಬೇಕಾಗಿದೆ.
ಬಜೆಟ್ನಲ್ಲಿ ರಾಜ್ಯದ ಅಭಿವೃದ್ಧಿಗೆ ಮುಖ್ಯಮಂತ್ರಿಯವರು ಮುನ್ನುಡಿ ಬರೆಯಲಿದ್ದಾರ? ಅಥವಾ ಬಜೆಟ್ ಜನಪರ ಅಥವಾ ಜನರಿಗೆ ಮತ್ತಷ್ಟು ಹೊರೆಯಾಗಲಿದಿಯಾ ಎಂಬ ಕುತೂಹಲವೂ ಇದೆ.
ರೈತ ಸಮುದಾಯದ ಅಭಿವೃದ್ಧಿ, ಆರೋಗ್ಯ ಶಿಕ್ಷಣ ನೀರಾವರಿ ಲೋಕೋಪಯೋಗಿ ಸಮಾಜಕಲ್ಯಾಣ ಕೈಗಾರಿಕೆ ವಸತಿ ಗ್ರಾಮೀಣ ಅಭಿವೃದ್ಧಿಗೆ ಬಜೆಟ್ನಲ್ಲಿ ಒತ್ತು ನೀಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.
ಕಳೆದ ಬಾರಿ ಬಜೆಟ್ ಗಾತ್ರ 4.56 ಲಕ್ಷ-ಕೋಟಿ ಇತ್ತು ಈ ಬಾರಿಯ ಬಜೆಟ್ ಕಳೆದ ಬಜೆಟ್ ಗಿಂತಲೂ ಹೆಚ್ಚಾಗಲಿದೆ ಅಂದರೆ 9.60 ಲಕ್ಷ ಕೋಟಿ ದಾಟುವ ಅಂದಾಜಿಸಲಾಗಿದೆ.
ಬಜೆಟ್ಗೆ ಪೂರ್ವಭಾವಿಯಾಗಿ ಫೆ.25ರವರೆಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಾಜದ ವಿವಿಧ ವರ್ಗಗಳ ಪ್ರತಿನಿಧಿಗಳೊಂದಿಗೆ ಸಿಎಂ ಬೊಮ್ಮಾಯಿ ಸಮಾಲೋಚನೆ ನಡೆಸಿದ್ದಾರೆ. ಈಗಾಗಲೇ ಕಂದಾಯ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಉನ್ನತ ಶಿಕ್ಷಣ, ಲೋಕೋಪಯೋಗಿ ಇಲಾಖೆ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇಂಧನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ., ಬೆಂಗಳೂರು ಮುಂಬೈ ಚೆನ್ನೈ ಕೈಗಾರಿಕಾ ಕಾರಿಡಾರ್ ಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸುವ ಸಾಧ್ಯತೆಗಳಿವೆ.
ಮುಖ್ಯಮಂತ್ರಿಗಳು ಎಂದು ಘೋಷಿಸುವ ಯೋಜನೆಗಳು ಜನರಿಗೆ ಮತ್ತಷ್ಟು ಹತ್ತಿರವಾಗಲಿದಿಯಾ? ದುಂದುವೆಚ್ಚಗಳಿಗೆ ಕಡಿವಾಣ ಹಾಕುವ ಜನಪರ ಹಾಗೂ ಅಭಿವೃದ್ಧಿಗೆ ಆದ್ಯತೆ ನೀಡುವ ಬಜೆಟ್ ಆಗಲಿದಿಯೆ ಎಂಬುದನ್ನ ಕಾದುನೋಡಬೇಕಿದೆ.
ಇದನ್ನೂ ಓದಿ: Mekedatu Padayathre 2.0:ಬಿಜೆಪಿ ಸರ್ಕಾರ ಹೇಡಿಗಳ ಸರ್ಕಾರ : ಸಿದ್ದರಾಮಯ್ಯ