Seetharam: (ಜೂ.1): ರಾಷ್ಟ್ರ ರಾಜಕಾರಣದಲ್ಲಿ ಇತ್ತೀಚೆಗೆ ಹಲವು ಅಚ್ಚರಿಯ ಘಟನೆಗಳು ನಡೆಯುತ್ತಿವೆ. ಅದರಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಮೇಲಿಂದ ಮೇಲೆ ಆಘಾತ ಎದುರಾಗುತ್ತಿದೆ.
ಹೌದು, ರಾಜಸ್ಥಾನದಲ್ಲಿ ನಡೆದ ಸಮಾವೇಶದ ಬಳಿಕ ಕಾಂಗ್ರೆಸ್ ಲೆಜೆಂಡ್ಸ್ ಪಕ್ಷ ತೊರೆಯುವ ಮನಸ್ಸು ಮಾಡ್ತಿದ್ದಾರೆ. 70+ ಆದವರಿಗೆ ಟಿಕೆಟ್ ಸಿಗೋದು ಡೌಟ್ ಅನ್ನೋ ರಿಸನ್ ಇದಕ್ಕೆ ಕಾರಣ ಎನ್ನಲಾಗ್ತಿದೆ.
ಇದಕ್ಕೆ ಸಾಕ್ಷಿ ಎಂಬಂತಹ ಘಟನೆಗಳು ಸಹ ನಡೆಯುತ್ತಿವೆ. ಸದ್ಯ, ಕರ್ನಾಟಕದಲ್ಲಿ ವಿಧಾನ ಪರಿಷತ್ ಟಿಕೆಟ್ ಕೈತಪ್ಪಿದ್ದಕ್ಕೆ ಎಂ.ಆರ್.ಸೀತಾರಾಮ್ ಅವರು ಶೀಘ್ರವೇ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಟಾಕ್ ಕೇಳಿಬರುತ್ತಿದೆ.
ಎಸ್, ಮೂಲಗಳ ಪ್ರಕಾರ, ಮುಂದಿನ 10 ದಿನಗಳ ಒಳಗೆ ಎಂ.ಆರ್.ಸೀತಾರಾಮ್ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ. ಅವರು, ಬಳಿಕ ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಎಂ.ಆರ್.ಸೀತಾರಾಮ್ ಅವರು, 1999, 2004ರಲ್ಲಿ 2 ಬಾರಿ ಮಲ್ಲೇಶ್ವರಂ ಕ್ಷೇತ್ರದ ಶಾಸಕರಾಗಿದ್ದರು. ಅಲ್ಲದೆ ಇವರು, 2016ರಲ್ಲಿ ಪರಿಷತ್ ಸದಸ್ಯರಾಗಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಂತ್ರಿ ಆಗಿದ್ದರು.