Dakshina / Uttara Kannada: (ಜು.5): ರಾಜ್ಯದ್ಯಂತ ಮಳೆಯ ಅಬ್ಬರ ಜೋರಾಗಿದೆ. (Dakshina Kannada) ದಕ್ಷಿಣ ಕನ್ನಡ ಜಿಲ್ಲೆ ಹಾಗೂ (Uttara Kannada) ಉತ್ತರ ಕನ್ನಡ, ಚಿಕ್ಕಮಗಳೂರು (Chikkamagaluru)ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು (Holiday Declared) ಶಾಲಾ ಮಕ್ಕಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ: ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ (Weather Forecast) ಹವಾಮಾನ ಇಲಾಖೆ ಮುನ್ಸೂಚನೆಯನ್ನು ಗಮನದಲ್ಲಿರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಮತ್ತು ಕಾಲೇಜುಗಳಿಗೆ ಇಂದು ರಜೆ ಘೋಷಣೆ (Schools & Collages) ಮಾಡಿದ್ದಾರೆ.ಮಕ್ಕಳ ಸುರಕ್ಷತೆಯಿಂದ ಇಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಪ್ರಾಥಮಿಕ ಶಾಲೆ ಪದವಿ ಪೂರ್ವಾ ಹಾಗೂ ಪದವಿ ಡಿಪ್ಲೋಮಾ ಐಐಟಿ ಕಾಲೇಜುಗಳಿಗೆ (DC) ಜಿಲ್ಲಾಧಿಕಾರಿ. ಕೆ.ವಿ ರಾಜೇಂದ್ರ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಕರಾವಳಿಯಲ್ಲಿ ಭಾರಿ ಮಳೆ?
ಕರಾವಳಿಯಲ್ಲಿ ಮಂಗಳವಾರ ರಾತ್ರಿ 11.30ರ ತನಕ ಗಂಟೆಗೆ 40-50 ಕಿ.ಮೀ. ವೇಗದಲ್ಲಿ (Wind Flow)ಬಿರುಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದೆ. ಸಮುದ್ರದಲ್ಲಿ 3.5 ಮೀ.ನಿಂದ 4.4 ಮೀ. ಎತ್ತರದ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ (Fishers) ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ ದಟ್ಟವಾದ ಮೋಡ ಕವಿದ ವಾತಾವರಣ ಉಂಟಾಗಿದೆ.
ಕಾರವಾರ: ಕಾರವಾರದಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಮನೆಯ ಮೇಲೆ ಮರ ಉರುಳಿ ಆರು (Karavar) ಜನರು ಗಾಯಗೊಂಡಿದ್ದಾರೆ. ನದಿಗಳು ಉಕ್ಕಿ ಹರಿಯುತ್ತಿದ್ದು ಅಂಕೋಲಾ ಮತ್ತು ಸಿದ್ದಾಪುರ ತಾಲೂಕಿನಲ್ಲಿ ಕೆಲವು ಗ್ರಾಮಗಳಲ್ಲಿ (Bridges) ಸೇತುವೆ ಮುಳುಗಿದ ಕಾರಣ ಸಂಪರ್ಕವನ್ನು ಕಳೆದುಕೊಂಡಿದೆ.ಗಂಗಾವಳಿ (Gangavali) ನದಿ ಉಕ್ಕಿ ಹರಿಯುತ್ತಿದ್ದು ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ.
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ (Chikkamagaluru) ಭಾರಿ ಮಳೆ ಸುರಿಯುತ್ತಿದ್ದು, ಕೆಲವು ತಾಲೂಕಿನ ಶಾಲೆಗಳಿಗೆ ರಜೆ ಸಾರಲಾಗಿದೆ.(Shringeri, Kalasa) ಶೃಂಗೇರಿ, ಕಳಸ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ (Mudigere)ತಾಲೂಕಿನ ಬಾಳೂರು ಹೋಬಳಿ ವ್ಯಾಪ್ತಿಯ ಶಾಲೆಗಳಿಗೂ ರಜೆ ಘೋಷಿಸಲಾಗಿದೆ. 1ರಿಂದ 10ನೇ ತರಗತಿವರೆಗೂ ರಜೆ ಘೋಷಣೆ. ಜುಲೈ 5 ಹಾಗೂ ಜುಲೈ 6ರಂದು ರಜೆ ಘೋಷಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ (DC) ಹೊರಡಿಸಿದ್ದಾರೆ.ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಳ್ಳ ಕೊಳ್ಳಗಳು. ಮುಂಜಾಗ್ರತ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ: Pourakarmika Protest: ನಾಲ್ಕನೇ ದಿನಕ್ಕೆ ಕಾಲಿಟ್ಟ ಪೌರ ಕಾರ್ಮಿಕರ ಮುಷ್ಕರ