Monsoon Rain: (ಜು.7):ರಾಜ್ಯಾದ್ಯಂತ ಕಳೆದ ಒಂದು ವಾರದಿಂದ ಕರಾವಳಿ (Costal Karnataka) ಜಿಲ್ಲೆಗಳು ಮಳೆಯಿಂದ ತತ್ತರಿಸಿದೆ. ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸೂಚನೆ ಇದೆ ಎಂದು ಹವಾಮಾನ ಇಲಾಖೆ (IMD)ಸೂಚನೆ ನೀಡಿದೆ.ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ,ಉಡುಪಿಗೆ ರೆಡ್ ಅಲರ್ಟ್ (Red Alert)ಘೋಷಣೆ ಮಾಡಿದೆ.
ಇನ್ನು ಉಳಿದ ನಾಲ್ಕು ಜಿಲ್ಲೆಗಳಾದ (Belagavi, Chikkamagaluru, Shivmoga ,Coorg) ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು (Malnad) ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ (Orange Alert)ಮಾಡಲಾಗಿದೆ.ಧಾರಾಕಾರ ಮಳೆಗೆ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಹಾಗೂ ಶಾಲಾ ಕಾಲೇಜುಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಭಾರಿ ಮಳೆಗೆ ಚಿಕ್ಕಮಗಳೂರು ಜಿಲ್ಲೆಯ (Chikkamagaluru) ಮೂಡುಗೆರೆ, ಕಳಸ, ಹೊರನಾಡು ,ಚಾರ್ಮಾಡಿ ಘಾಟು, ಕೊಪ್ಪ ,ಶೃಂಗೇರಿ ,ಬಾಳೆಹೊನ್ನೂರು, ನರಸಿಂಹರಾಜಪುರ ಸುತ್ತಮುತ್ತಮಳೆಯಾಗುತ್ತಿದೆ. ನಿರಂತರ ಮಳೆಯಿಂದ ತುಂಗ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟಕ್ಕೆ ಸುಸ್ತಾಗಿರುವ ಜನರು ಯಾದಗಿರಿಯಲ್ಲಿ ಮಳೆಗಾಗಿ ಪ್ರಾರ್ಥನೆ ನಡೆಸಿದ್ದಾರೆ. ಹೌದು ಮಳೆ ಕಾಣದ ಯಾದಗಿರಿ ಜಿಲ್ಲೆಯಲ್ಲಿ ಮಳೆಗಾಗಿ ದೇವರ ಮೊರೆ ಹೋಗಿದ್ದು, ಯಾದಗಿರಿಯ ಸುರಪುರ ಹುಣಸಗಿ ತಾಲೂಕುಗಳು ಹೊರತುಪಡಿಸಿ ಉಳಿದ ನಾಲ್ಕು ತಾಲೂಕಿನಲ್ಲಿ ಮಳೆಯ ಕೊರತೆಯಾಗಿದೆ.ಅವಧಿಗಿಂತ ಮುಂಚೆ ಮಾನ್ಸೂನ್ ಮಳೆ ಪ್ರವೇಶಿಸಿರುವುದರಿಂದ ಭಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವುದು ರೈತರಲ್ಲಿ ಕೊಂಚ ಅಸಮಧಾನ ಮೂಡಿದೆ.