ಬೆಂಗಳೂರು: (ಜುಲೈ 9) : ಅಮರನಾಥ ಯಾತ್ರೆಗೆ (Amarnath Yatra) ತೆರಳಿದ ಕರ್ನಾಟಕದ (Karnataka) 100ಕ್ಕೂ ಹೆಚ್ಚು ಮಂದಿ ಸುರಕ್ಷಿತವಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಆರ್.ಟಿ.ನಗರದ (RT Nagar) ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಬಂದ ಮಾಹಿತಿ ಪ್ರಕಾರ ರಾಜ್ಯದ ನೂರಕ್ಕೂ ಹೆಚ್ಚು ಜನ ಅಮರನಾಥ ಯಾತ್ರೆಯಲ್ಲಿ (Amarnath Yatra) ಇದ್ದಾರೆ. ಬಹುತೇಕ ಎಲ್ಲರೂ ಸುರಕ್ಷಿತವಾಗಿ ಇದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದ್ದಾರೆ.
ಮೇಘಸ್ಫೋಟದಲ್ಲಿ 15 ಜನ ಸಾವು

‘ನಮಗೆ ಬಂದ ಮಾಹಿತಿ ಪ್ರಕಾರ ರಾಜ್ಯದ ನೂರಕ್ಕೂ ಹೆಚ್ಚು ಜನ ಅಮರನಾಥ ಯಾತ್ರೆಗೆ (Amarnath Yatra) ತೆರಳಿದ್ದಾರೆ. ಅವರೆಲ್ಲರೂ ಸುರಕ್ಷಿತವಾಗಿದ್ದಾರೆ. ನಾವು ಅಲ್ಲಿನ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಜತೆ ಸಂಪರ್ಕದಲ್ಲಿ ಇದ್ದೇವೆ. ಮೇಘಸ್ಫೋಟದಲ್ಲಿ (Amarnath Cloudburst) 15 ಜನ ಯಾತ್ರಿಕರು ಸಾವನ್ನಪ್ಪಿದ್ದಾರೆ. ಬೇರೆ ಯಾವುದೇ ಅಹಿತಕರ ಘಟನೆಗಳ ಸುದ್ದಿ ಇಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಮಾಹಿತಿ ನೀಡಿದ್ದಾರೆ.
ತುರ್ತು ಹೆಲ್ಪ್‌ಲೈನ್ ಕಾರ್ಯಾರಂಭ

ನಾವು ತುರ್ತು ಹೆಲ್ಪ್‌ಲೈನ್ ತೆರೆದಿದ್ದೇವೆ. ಹೆಲ್ಪ್ಲೈನ್ಗೆ 15-20 ಜನ ಈಗಾಗಲೇ ಕರೆ ಮಾಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮಾಡ್ತಿದ್ದೇವೆ. ಬಿಎಸ್ಎಫ್ಸಿಬ್ಬಂದಿ ಸ್ಥಳದಲ್ಲಿದ್ದಾರೆ. ನಮ್ಮ ಮುಖ್ಯ ಕಾರ್ಯದರ್ಶಿ ಕೇಂದ್ರ ಸರ್ಕಾರದ ಸಂಪರ್ಕದಲ್ಲಿದ್ದಾರೆ. ಏನೇ ಮಾಹಿತಿ, ಸುದ್ದಿ ಇದ್ರೂ ನಮ್ಮ ಹೆಲ್ಪ್‌ಲೈನ್ ಗೆ ಕರೆ ಮಾಡಲಿ. ಕೂಡಲೇ ರಕ್ಷಣಾ ಕಾರ್ಯ ಮಾಡ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ತಿಳಿಸಿದ್ದಾರೆ.
ಎರಡ್ಮೂರು ದಿನ ಮಳೆ ಸಾಧ್ಯತೆ
ರಾಜ್ಯದ ಹಲವೆಡೆ ಮಳೆ ಅನಾಹುತ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಳೆ ಹಾನಿ ಬಗ್ಗೆ ನಿನ್ನೆ ಸಭೆ ನಡೆಸಿದ್ದೇನೆ. ಕೆಲವು ಕಡೆ ಸ್ವಲ್ಪ ಮಳೆ ಕಡಿಮೆ ಆಗಿದೆ. ಕೆಲವೆಡೆ ಇನ್ನೂ ಎರಡ್ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಇದಕ್ಕಗುಣವಾಗಿ ಕಾರ್ಯಾಚರಣೆ ಮಾಡ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದ್ದಾರೆ.