ಬೆಂಗಳೂರು: (ಜುಲೈ 10) : ರಾಷ್ಟ್ರಪತಿ ಎಲೆಕ್ಷನ್‌ಗೆ (Presidential Election) ಆಡಳಿತ ಪಕ್ಷ ಬಿಜೆಪಿ (BJP) ಹಾಗೂ ವಿಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಈಗಾಗಲೇ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ (NDA Presidential candidate) ದ್ರೌಪದಿ ಮುರ್ಮು (Draupadi Murmu) ಹಲವು ಕಡೆಗಳಲ್ಲಿ ವಿವಿಧ ಪಕ್ಷಗಳ ನಾಯಕರನ್ನು ಭೇಟಿಯಾಗಿ ಬೆಂಬಲ ಯಾಚಿಸಿದ್ದಾರೆ.

ಹೌದು, ಇದರ ಭಾಗವಾಗಿ ದ್ರೌಪದಿ ಮುರ್ಮು (Draupadi Murmu) ಅವರು ಇಂದು ಕರ್ನಾಟಕಕ್ಕೆ (Karnataka) ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಇಂದು ಬೆಂಗಳೂರಿಗೆ ಆಗಮಿಸಿದ ದ್ರೌಪದಿ ಮುರ್ಮು (Draupadi Murmu) ಅವರನ್ನು ರಾಜ್ಯ ಬಿಜೆಪಿ ನಾಯಕರು ಭರ್ಜರಿಯಾಗಿ ಸ್ವಾಗತ ಮಾಡಿದ್ದಾರೆ.
ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಅಭ್ಯರ್ಥಿಯಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಾಧ್ಯಕ್ಷರಾದ ಶ್ರೀ @nalinkateel ಮತ್ತು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರು ಆತ್ಮೀಯವಾಗಿ ಸ್ವಾಗತಿಸಿದರು.#KarnatakaWelcomesDroupadiMurmu pic.twitter.com/L7n0kfY7Rl
— BJP Karnataka (@BJP4Karnataka) July 10, 2022
ವಿಶೇಷ ವಿಮಾನದಲ್ಲಿ ಎಚ್ಎಎಲ್ (HAL) ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುರ್ಮು (Draupadi Murmu) ಅವರನ್ನು ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ವಾಗತಿಸಿದ್ದಾರೆ. ಇನ್ನೂ ದ್ರೌಪದಿ ಮುರ್ಮು (Draupadi Murmu) ಅವರನ್ನು ವಿವಿಧ ಆದಿವಾಸಿ ಕಲಾ ತಂಡಗಳು ಮುರ್ಮು ಅವರನ್ನು ಸ್ವಾಗತಿಸಿವೆ.
ಶಾಸಕರು, ಸಚಿವರೊಂದಿಗೆ ಸಭೆ
ಮಧ್ಯಾಹ್ನ 3.30 ರ ಸುಮಾರಿಗೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ದ್ರೌಪದಿ ಮುರ್ಮು (Draupadi Murmu) ಅವರು ವಸಂತನಗರದಲ್ಲಿರುವ ಖಾಸಗಿ ಹೋಟೆಲ್ ಗೆ ತೆರಳಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ಶಾಸಕರು ಮತ್ತು ಸಚಿವರೊಂದಿಗೆ ದ್ರೌಪದಿ ಮುರ್ಮು (Draupadi Murmu) ಅವರು ಸಭೆ ನಡೆಸಲಿದ್ದು, ತಮಗೆ ಮತ ನೀಡುವಂತೆ ಮನವಿ ಮಾಡಲಿದ್ದಾರೆ.
ಇಂದು ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಸ್ಥಾನದ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.#DraupadiMurmu pic.twitter.com/N81Zl9p1G5
— Basavaraj S Bommai (@BSBommai) July 10, 2022
ಇನ್ನು ಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai), ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವ ನಾರಾಯಣಸ್ವಾಮಿ, ರಾಜ್ಯ ಸಚಿವರಾದ ಶ್ರೀರಾಮುಲು, ಗೋಪಾಲಯ್ಯ, ಅಶ್ವಥ್ ನಾರಾಯಣ್, ಸೋಮಣ್ಣ, ಶಾಸಕರಾದ ಅರವಿಂದ ಲಿಂಬಾವಳಿ ಸೇರಿದಂತೆ ಎಲ್ಲಾ ಸಚಿವರು ಮತ್ತು ಶಾಸಕರು ಪಾಲ್ಗೊಂಡಿದ್ದಾರೆ.
ದೊಡ್ಡಗೌಡ್ರು ಮನೆಗೆ ದ್ರೌಪದಿ!
ಬಿಜೆಪಿ ಶಾಸಕರೊಂದಿಗಿನ ಸಭೆಯ ಬಳಿಕ ದ್ರೌಪದಿ ಮುರ್ಮು (Draupadi Murmu) ಅವರು ಸಂಜೆ 6.30 ಕ್ಕೆ ಮಾಜಿ ಪ್ರಧಾನ ಮಂತ್ರಿ ದೇವೇಗೌಡ (HD Devegowda) ನಿವಾಸಕ್ಕೆ ಭೇಟಿ ನೀಡಲಿದ್ದು, ತಮಗೆ ಬೆಂಬಲ ನೀಡುವಂತೆ ಮನವಿ ಮಾಡಲಿದ್ದಾರೆ.