ಬ್ರಿಟನ್ ಪ್ರಧಾನಿ ರೇಸ್ ನಲ್ಲಿ ರಿಷಿ ಫಸ್ಟ್

ಬ್ರಿಟನ್ ಪ್ರಧಾನಿ (UK PM) ಹುದ್ದೆ ತೆರವಾಗಿದೆ. ಹುದ್ದೆಗೆ ಒಂಬತ್ತು (Race for UK PM widens with 9 candidates in fray) ಅಭ್ಯರ್ಥಿಗಳ ಹೆಸರು ಕೇಳಿಬಂದಿದ್ದು, ಮಾಜಿ ಸಚಿವ (British Indian former Cabinet minister) ಹಾಗೂ ಭಾರತೀಯ ಮೂಲದ ರಿಷಿ ಸುನಕ್ (Rishi Sunak) ಅವರು ಆಕಾಂಕ್ಷಿಗಳ ಪಟ್ಟಿಯಲ್ಲಿ ಮುನ್ನಡೆ (Rishi Sunak maintains lead) ಕಾಯ್ದುಕೊಂಡಿದ್ದಾರೆ. ಪ್ರಧಾನಿ ಸ್ಥಾನಕ್ಕೆ ಈ ಹಿಂದೆ ಕೇಳಿಬಂದಿದ್ದ ಪ್ರಮುಖ ಅಭ್ಯರ್ಥಿಗಳ ಪಟ್ಟಿಗೆ ವಾಣಿಜ್ಯ ಸಚಿವ ಪೆನ್ನಿ ಮೊರ್ಡಾಂಟ್ (Trade Minister Penny Mordaunt) ಅವರ ಹೆಸರು ಸೇರ್ಪಡೆಗೊಂಡಿದೆ. ರಿಷಿ (Rishi Sunak) ಅವರ ಬಳಿಕ ಪ್ರಧಾನಿ (UK PM) ಸ್ಥಾನಕ್ಕೆ ಪೆನ್ನಿ (Penny Mordaunt)ಅವರು ಎರಡನೇ ಸಂಭಾವ್ಯ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ.
ಲಂಕಾ ಅಧ್ಯಕ್ಷರ ನಿವಾಸದಲ್ಲಿ ಮಸ್ತಿ

ಪಲಾಯನವಾಗಿರುವ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ (President Gotabaya Rajapaksa) ಅವರ ನಿವಾಸದಲ್ಲಿ ಸಾರ್ವಜನಿಕರು ಮತ್ತು ಪ್ರತಿಭಟನಾಕಾರರು ಜಮಾವಣೆಗೊಂಡಿದ್ದಾರೆ. ನಿವಾಸದಲ್ಲಿರುವ ಎಲ್ಲಾ ಸೌಲಭ್ಯಗಳನ್ನು ಅನುಭವಿಸುತ್ತಿದ್ದು, ಅಡುಗೆಮನೆಯಲ್ಲಿ ನೆಚ್ಚಿನ ಭಕ್ಷ್ಯಗಳನ್ನು ಬೇಯಿಸಿ, ತಿನ್ನುತ್ತಿದ್ದಾರೆ. ಹಾಸಿಗೆಯ ಮೇಲೆ ಕುಸ್ತಿಯಾಡಿದ್ದು, ಐಷಾರಾಮಿ ಸ್ನಾನಗೃಹದಲ್ಲಿ ಸ್ನಾನ ಮಾಡಿದ್ದಾರೆ. ಗೋಟಬಯ ನಿವಾಸದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಕರೆನ್ಸಿ ನೋಟುಗಳು ಪತ್ತೆಯಾಗಿದ್ದು, ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
Video – #WWE Wrestling on Prime Minister's bed at Temple Trees 😃#LKA #SriLanka #SriLankaCrisis #SriLankaProtests pic.twitter.com/5f2zE9uqLD
— Sri Lanka Tweet 🇱🇰 💉 (@SriLankaTweet) July 10, 2022
ಏಕ್ ಭಾರತ್, ಶ್ರೇಷ್ಠ ಭಾರತ್

ನೂರಾರು ವರ್ಷಗಳ ಹಿಂದಿನ ಆದಿ ಶಂಕರಾಚಾರ್ಯರು ಅಥವಾ ಆಧುನಿಕ ಕಾಲದ ಸ್ವಾಮಿ ವಿವೇಕಾನಂದರೇ ಇರಲಿ ಭಾರತದಲ್ಲಿನ ಸಂತ ಸಂಪ್ರದಾಯ ಏಕ್ ಭಾರತ್, ಶ್ರೇಷ್ಠ ಭಾರತ್ ಎಂಬುದನ್ನು ಸಾರಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸ್ವಾಮಿ ಆತ್ಮಸ್ಥಾನಂದ ಅವರ ನೂರನೇ ಜಯಂತ್ಯುತ್ಸವದ ಹಿನ್ನೆಲೆಯಲ್ಲಿ ವಿಡಿಯೋ ಸಂವಾದ ಮೂಲಕ ಮಾತನಾಡಿದ ಮೋದಿ, ಈ ಕಾರ್ಯಕ್ರಮ ಹಲವಾರು ನೆನಪುಗಳು ಮತ್ತು ಭಾವನಾತ್ಮಕ ವಿಷಯಗಳಿಂದ ಕೂಡಿದೆ. ಎಂದು ಹೇಳಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡ ಭೇಟಿಯಾದ ದ್ರೌಪದಿ

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ನಿವಾಸಕ್ಕೆ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಭೇಟಿ ನೀಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ, ರಾಷ್ಟ್ರಪತಿಗಳ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಸುಮಾರು ಒಂದು ಗಂಟೆ ಕಾಲ ದೇವೇಗೌಡರ ಜೊತೆ ಮುರ್ಮು ಚರ್ಚಿಸಿದ್ದಾರೆ. ಮುರ್ಮು ಅವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿ.ಟಿ ರವಿ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ.
ರಾಷ್ಟ್ರಪತಿ ಸ್ಥಾನಕ್ಕೆ ಎನ್ ಡಿಎ ಮತ್ತು ಇತರೆ ಪಕ್ಷಗಳ ಅಭ್ಯರ್ಥಿಯಾಗಿರುವ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ಮತ ಯಾಚಿಸಿದರು.@H_D_Devegowda #DraupadiMurmu
— Basavaraj S Bommai (@BSBommai) July 10, 2022
1/2 pic.twitter.com/eWEiwuEN4i
ಭಾರಿ ಮಳೆ, ನಾಲ್ಕು ದಿನ ರೆಡ್ ಅಲರ್ಟ್

ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 14ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ ನಾಲ್ಕು ದಿನ ‘ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಬರುವ ಸೂಚನೆ ಹಿನ್ನೆಲೆಯಲ್ಲಿ ಜುಲೈ 11ರಂದು ಕಲಬುರಗಿ ಜಿಲ್ಲೆಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆಗಳಿಗೆ ಇಂದು ಸಹ ರಜೆ ಘೋಷಿಸಲಾಗಿದೆ.
ಚುನಾವಣಾ ಪ್ರಚಾರ ಅಖಾಡಕ್ಕೆ ಬಿಎಸ್ ವೈ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೆಂಗಳೂರಿನಲ್ಲಿ ಭಾನುವಾರ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬಿಎಸ್ ವೈ ಅವರೊಂದಿಗೆ ನಿಗಮ ಮಂಡಳಿಗಳಿಗೆ ಹೊಸ ಅಧ್ಯಕ್ಷರ ನೇಮಕಾತಿ ಕುರಿತು ಹಾಗೂ 2ನೇ ಹಂತದಲ್ಲಿ 3 ತಂಡಗಳಲ್ಲಿ ರಾಜ್ಯ ಪ್ರವಾಸ ಕೈಗೊಳ್ಳುವ ವೇಳಾಪಟ್ಟಿ ಸಿದ್ಧಪಡಿಸುವ ಬಗ್ಗೆ ಚರ್ಚಿಸಿದ್ದಾರೆ. ಇನ್ನೂ ಭ್ರಷ್ಟಾಚಾರದ ಹಿನ್ನೆಲೆ ಹಿರಿಯ ಅಧಿಕಾರಿಗಳ ಬಂಧನವಾಗಿರುವುದಕ್ಕೆ, ಕಾಂಗ್ರೆಸ್ ನಾಯಕರ ಆರೋಪಗಳ ಬಗ್ಗೆಯೂ ಚರ್ಚೆ ನಡೆದಿದೆ.
ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರು, ಇತ್ತೀಚೆಗೆ ವಿದೇಶ ಪ್ರವಾಸದಿಂದ ಹಿಂತಿರುಗಿದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರನ್ನು ಭೇಟಿಯಾದರು.
— BJP Karnataka (@BJP4Karnataka) July 10, 2022
ಈ ಸಂದರ್ಭದಲ್ಲಿ ರಾಜ್ಯದ ರಾಜಕೀಯ ಮತ್ತು ಸಂಘಟನಾತ್ಮಕ ಚರ್ಚೆಗಳನ್ನು ನಡೆಸಿದರು pic.twitter.com/l8JYynepLL
ಬೆಳೆ ವಿಮೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

ಬೆಳೆ ವಿಮೆ ಯೋಜನೆಯ ಭ್ರಷ್ಟಾಚಾರಗಳ ಕುರಿತು ತನಿಖೆ ನಡೆಸಬೇಕು. ಇದು ಕಾಂಗ್ರೆಸ್ ಪಕ್ಷದ ಆಗ್ರಹ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ‘ನಿಮ್ಮ ಸಂತೋಷವನ್ನೂ ವಿಮೆಗೆ ಒಳಪಡಿಸಲಾಗಿದೆ’. ಇದು ಕೇಂದ್ರ ಸರ್ಕಾರದ ಪ್ರತಿಷ್ಠಿತ ಬೆಳೆ ವಿಮೆ ಯೋಜನೆಯ ಘೋಷ ವಾಕ್ಯ. ವಾಸ್ತವದಲ್ಲಿ ಇದು ಅನ್ನದಾತರ ಸಂತೋಷವನ್ನೇ ಕಸಿದುಕೊಂಡಿದೆ. ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಬೆಳೆ ವಿಮೆ ಯೋಜನೆ ಸಾಕ್ಷಿ ಹೇಳುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ರೈತರಿಗೆ ನೆಮ್ಮದಿಯ ಬದುಕು ಕಟ್ಟಿಕೊಡಬೇಕಾದ ಯೋಜನೆಯಲ್ಲಿ ಮಧ್ಯವರ್ತಿಗಳ ಉಪಟಳವೇ ಹೆಚ್ಚಾಗಿದೆ. ಮೂಗಿನ ಕೆಳಗೇ ಭ್ರಷ್ಟಾಚಾರ ನಡೆಯುತ್ತಿದ್ದರೂ ಸರ್ಕಾರ ಮೌನವಾಗಿರುವುದೇಕೆ?
— DK Shivakumar (@DKShivakumar) July 10, 2022
ಈ ಕೂಡಲೇ ಬೆಳೆ ವಿಮೆ ಯೋಜನೆಯ ಭ್ರಷ್ಟಾಚಾರಗಳ ಕುರಿತು ತನಿಖೆ ನಡೆಸಬೇಕು. ಇದು ಕಾಂಗ್ರೆಸ್ ಪಕ್ಷದ ಆಗ್ರಹ.
2/2
ತ್ರಿವರ್ಣದಲ್ಲಿ ಕಂಗೊಳಿಸಿದ ಕಾವೇರಿ

ರಾಜ್ಯದಲ್ಲಿ ಒಂದು ವಾರದಿಂದ ಭಾರಿ ಮಳೆ ಸುರಿಯುತ್ತಿರುವುದರಿಂದ ಜಲಾಶಯಗಳೆಲ್ಲ ಮೈದುಂಬಿ ಹರಿಯುತ್ತಿವೆ. ಧಾರಾಕಾರ ಮಳೆಯಿಂದಾಗಿ ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ (ಕೆಆಎಸ್) ಅಣೆಕಟ್ಟಿನಿಂದಲೂ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದೆ. ಕೆಆರ್‌ಎಸ್‌ಗೆ ಕೇಸರಿ, ಬಿಳಿ, ಹಸಿರಿನ ತ್ರಿವರ್ಣ ದೀಪಾಲಂಕಾರ ಮಾಡಲಾಗಿದೆ. ಇದರಿಂದ ಕಾವೇರಿ ವರ್ಣರಂಜಿತವಾಗಿ ಹರಿಯುತ್ತಿರುವ ದೃಶ್ಯ ಎಲ್ಲರನ್ನು ಮನಸೂರೆಗೊಳಿಸುತ್ತಿದೆ.