ಮಂಗಳೂರು : ಕೇಂದ್ರ ಸರ್ಕಾರವು (Central Government) ಇಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಮತ್ತು (SDPI PFI Activists Ban) ಅದರ ಅಂಗಸಂಸ್ಥೆಗಳನ್ನು (PFI Ban by Central government) ನಿಷೇಧಿಸಿದೆ. ಈ ಬಗ್ಗೆ ವಿಧಾನಸ ವಿಪಕ್ಷ ಉಪನಾಯಕ ಯು.ಟಿ ಖಾದರ್ (Congress leader UT Khadar) ಅವರು ಮಂಗಳೂರಿನಲ್ಲಿ (Mangaluru) ಪ್ರತಿಕ್ರಿಯೆ (Ut Khader Statement) ನೀಡಿದ್ದಾರೆ. ‘ಸಂವಿಧಾನಕ್ಕೆ ವಿರುದ್ಧವಾದ ಎಲ್ಲಾ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹ ಮಾಡಿದ್ದಾರೆ.

ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರದ ಆದೇಶ ಹಿನ್ನೆಲೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ‘ಸಂವಿಧಾನಕ್ಕೆ ವಿರುದ್ಧವಾಗಿರುವ ಎಲ್ಲಾ ಸಂಘ ಸಂಸ್ಥೆಗಳ ಮೇಲೆ ಸಮಾನ ಕ್ರಮ ಕೈಗೊಳ್ಳಲಿ. ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಯಾರೆಲ್ಲ ಕೋಮು ದ್ವೇಷ, ದ್ವೇಷ ಸಮಾಜ, ಪರಸ್ಪರ ಅವಿಶ್ವಾಸ ಮೂಡಿಸುವುದು, ಪರಸ್ಪರ ಹಲ್ಲೆ ಕೊಲೆ ಮಾಡುವ ಯಾವುದೇ ಸಂಘ ಸಂಸ್ಥೆಗಳ ಮೇಲೆ ಸಮಾನ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸ ವಿಪಕ್ಷ ಉಪನಾಯಕ ಯು.ಟಿ ಖಾದರ್ ಆಗ್ರಹಿಸಿದ್ದಾರೆ.
ತಾರತಮ್ಯ ಮಾಡದೇ ಕ್ರಮ ಕೈಗೊಳ್ಳಿ..!

ತಾರತಮ್ಯ ಮಾಡದೇ ಎಲ್ಲಾ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಬೇಕು. ಈ ಹಿಂದೆ ಕೋಮು ದ್ವೇಷದಿಂದ ಹತ್ಯೆಗಳಾದ ಒಂದು ಪ್ರಕರಣವನ್ನು ಮಾತ್ರ ಎನ್ಐಎಗೆ ನೀಡಲಾಗಿದೆ. ಒಂದು ಪ್ರಕರಣದಲ್ಲಿ ಮಾತ್ರ ಪರಿಹಾರ ನೀಡಲಾಗಿದೆ. ಈ ವಿಚಾರದಲ್ಲಿ ಕೂಡ ತಾರತಮ್ಯ, ದ್ವೇಷ ಇಲ್ಲದೇ, ಯಾರಿಗೂ ಅನ್ಯಾಯ ಮಾಡದೆ ಯಾರು ಇಂತಹ ಕೃತ್ಯಗಳನ್ನು ಮಾಡುತ್ತಾರೆಯೋ ಅವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಒತ್ತಾಯಿಸಿದ್ದಾರೆ.
ಕರ್ನಾಟಕ ಸೇರಿ 6 ರಾಜ್ಯಕ್ಕೆ ‘ಗುಪ್ತಚರ’ ಅಲರ್ಟ್
ದೇಶದಲ್ಲಿ ಪಿಎಫ್‌ಐ ಸಂಘಟನೆಯನ್ನು 5 ವರ್ಷ ಬ್ಯಾನ್ ಮಾಡಿ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ ಗುಪ್ತಚರ ಇಲಾಖೆ ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ : Central Govt bans PFI : ಪಿಎಫ್ಐ ನಿಷೇಧ : ಪ್ರಮೋದ್ ಮುತಾಲಿಕ್ ಸ್ಫೋಟಕ ಹೇಳಿಕೆ..!
ರಾಜ್ಯದ ಜೊತೆಗೆ ಕೇರಳ, ತಮಿಳುನಾಡು, ಆಂಧ್ರ, ಮಹಾರಾಷ್ಟ್ರ, ತೆಲಂಗಾಣಕ್ಕೆ ರೆಡ್ ಅಲರ್ಟ್ ಸೂಚನೆ ನೀಡಿದ್ದು, ಪ್ರತಿಭಟನೆಗೆ ಅವಕಾಶ ನೀಡಬೇಡಿ, ಯಾವುದೇ ಗಲಭೆ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಕೇಂದ್ರ ಸರ್ಕಾರದ ಅಧಿಸೂಚನೆಯಲ್ಲಿ ಏನಿದೆ..?
- ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಎಲ್ಲಾ ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘ ಎಂದು ಘೋಷಿಸಿದ ಕೇಂದ್ರ ಸರ್ಕಾರ
- ಪಿಎಫ್ಐ ಮತ್ತು ಅದರ ಅಂಗಸಂಸ್ಥೆಗಲು ಸಾಮಾಜಿಕ-ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯ ಸಂಘಟನೆಯಾಗಿ ಬಹಿರಂಗವಾಗಿ ಕಾರ್ಯನಿರ್ವಹಿಸುತ್ತವೆ.
- ಆದರೆ, ಅವರು ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ದುರ್ಬಲಗೊಳಿಸಲು ಮತ್ತು ಸಂಪೂರ್ಣ ಅಗೌರವವನ್ನು ತೋರಿಸಲು ಕೆಲಸ ಮಾಡುವ ಸಮಾಜದ ನಿರ್ದಿಷ್ಟ ವರ್ಗವನ್ನು ಆಮೂಲಾಗ್ರಗೊಳಿಸಲು ರಹಸ್ಯ ಕಾರ್ಯಸೂಚಿಯನ್ನು ಅನುಸರಿಸುತ್ತಿದ್ದಾರೆ ಎಂದು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.