ಬೆಂಗಳೂರು: ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ವಿವಾದ (Karnataka and Maharashtra border issue) ಕುರಿತಂತೆ ಮುಖ್ಯಮಂತ್ರಿ (Karnataka CM) ಬಸವರಾಜ ಬೊಮ್ಮಾಯಿ (Basavaraj Bommai) ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದ (Karnataka) ಪ್ರಕಾರ ಗಡಿವಿವಾದ ಮುಗಿದುಹೋಗಿರುವ ಅಧ್ಯಾಯ ಎಂದು ಬೊಮ್ಮಾಯಿ (CM Bommai) ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡುವ ಬಗ್ಗೆ ತಿಳಿದ ಸಂದರ್ಭದಲ್ಲಿ ಲಿಖಿತವಾಗಿ ಈಗಿರುವ ವಾತಾವರಣದಲ್ಲಿ ಭೇಟಿ ನೀಡುವುದು ಬೇಡ. ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಲಿದೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಆದರೂ ಅವರು ಬರುವುದಾಗಿ ತಿಳಿಸಿರುವುದು ಸರಿಯಾದ ಕ್ರಮವಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Basavaraj Bommai: ಚಿರತೆ ದಾಳಿಗೆ ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ ಪರಿಹಾರ
ಮಹಾ ಸಿಎಂ ಜೊತೆ ಮತ್ತೊಮ್ಮೆ ಮಾತುಕತೆ
ಮಹಾರಾಷ್ಟ್ರ ಹಾಗೂ ಕರ್ನಾಟಕದ ಜನರ ಮಧ್ಯೆ ಸಾಮರಸ್ಯವಿದೆ. ಅದೇ ಸಂದರ್ಭದಲ್ಲಿ ಗಡಿ ವಿವಾದವೂ ಇದೆ. ಆದರೆ, ಮಹಾರಾಷ್ಟ್ರ ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್‌ಗೆ ಹೋಗಿದೆ. ಈಗಿನ ಸಂದರ್ಭದಲ್ಲಿ ಪ್ರವಾಸ ಮಾಡುವುದು ಪ್ರಚೋದನಕಾರಿ ಕೆಲಸ. ಜನರಲ್ಲಿ ಭಾವನೆಗಳನ್ನು ಕೆರಳಿಸುವ ಕೆಲಸವಾಗುತ್ತದೆ. ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆಗೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಹಿಂದೆ ಮುಂದೆ ನೋಡದೇ ಕ್ರಮ..!
ಮಹಾರಾಷ್ಟ್ರ ಸಚಿವರು ಅಕಸ್ಮಾತ್ ಬರುವ ಸಾಹಸ ಮಾಡಿದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲು ನಮ್ಮ ಸರ್ಕಾರ ಹಿಂದೆ ಮುಂದೆ ನೋಡುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.

ಇದನ್ನೂ ಓದಿ: Cm ibrahim: ಗೋವನ್ನು ಮಾತೆ ಎನ್ನುವ ಬಿಜೆಪಿಗರು ಗೋವಾದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಯಾಕೆ ಜಾರಿ ಮಾಡಿಲ್ಲ
ಈ ಸಂಬಂಧ ಈಗಾಗಲೇ ಸಚಿವರ ಗಮನಕ್ಕೆ ತರಲಾಗಿದೆ. ಹಿಂದೆ ಇಂಥ ಸಂದರ್ಭಗಳಾದ ಸಂದರ್ಭದಲ್ಲಿ ಏನು ಕ್ರಮ ತೆಗೆದುಕೊಂಡಿದ್ದರೋ ಅದೇ ರೀತಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಪ್ರತ್ಯೇಕ ಮುಸ್ಲಿಂ ಶಾಲೆ ಜೊತೆ ಕೇಸರಿ ಶಾಲೆ?
ಪ್ರತ್ಯೇಕ ಮುಸ್ಲಿಂ ಶಾಲೆ ಜೊತೆಗೆ ಪ್ರತ್ಯೇಕ ಕೇಸರಿ ಶಾಲೆಗಳನ್ನು ತೆರೆಯಲು ಒತ್ತಾಯ ಕೇಳಿ ಬಂದಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಸಿಎಂ ಬೊಮ್ಮಾಯಿ ನಯವಾಗಿಯೇ ಉತ್ತರಿಸಿದ್ದಾರೆ. ಮೊದಲು ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ನಮ್ಮ ಗುರಿ ಎಂದು ಸಿಎಂ ಹೇಳಿದ್ದಾರೆ.