ಬೆಂಗಳೂರು(ಡಿ.9): ಅಪಘಾತ ಪ್ರಕರಣದಲ್ಲಿ ಜಪ್ತಿಯಾದ ವಾಹನಗಳನ್ನು 24 ಗಂಟೆಯೊಳಗೆ ಬಿಡುಗಡೆ ಮಾಡಬೇಕೆಂದು ಬೆಂಗಳೂರು ಸಂಚಾರಿ ವಿಶೇಷ ಕಮಿಷನರ್ ಡಾ.ಸಲೀಂ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಕೇಸ್ನ ತನಿಖೆಯಿಂದಾಗಿ ಜಪ್ತಿಯಾದ ವಾಹನಗಳು ತಿಂಗಳುಗಟ್ಟಲ್ಲೇ ಸ್ಟೇಷನ್ಲ್ಲಿ ಇರುತ್ತಿದ್ದವು. ಆದರೆ, ಇನ್ನು ಮುಂದೆ ಆ್ಯಕ್ಸಿಡೆಂಟ್ ಆದ 24 ಗಂಟೆಗಳಲ್ಲಿ ವಾಹನ ವಾಪಸ್ ನೀಡಬೇಕೆಂದು ಪೊಲೀಸರಿಗೆ ಕಮಿಷನರ್ ಎಂ.ಎ. ಸಲೀಂ ಸೂಚನೆ ನೀಡಿದ್ದಾರೆ.
ಆಕ್ಸಿಡೆಂಟ್ ವಾಹನಗಳನ್ನು ಪೊಲೀಸರು ಇಟ್ಟುಕೊಳ್ಳುವ ಅವಶ್ಯಕತೆ ಇಲ್ಲ. ಆರ್ಟಿಓ ದಿಂದ ಪರಿಶೀಲನೆ ನಡೆದ ಬಳಿಕ, ಮೆಕಾನಿಕಲ್ ಆಗಿ ಏನಾದರೂ ಸಮಸ್ಯೆ ಆಗಿದೆಯಾ ಎಂದು ರಿಪೋರ್ಟ್ ಮಾಡಲಾಗುತ್ತದೆ. ನಂತರ ಸಿಬ್ಬಂದಿ ಮಾಲೀಕರಿಗೆ ಮುಚ್ಚಳಿಕೆ ಬರೆಸಿಕೊಂಡು ವಾಹನ ಕೊಡಲಾಗುತ್ತದೆ ಎಂದರು. ವಾಹನಗಳನ್ನು ಸ್ಟೇಷನ್ ಮುಂದೆ ಇಟ್ಟುಕೊಂಡರೆ ಸಾಕಷ್ಟು ವಾಹನ ಬಂದು ಬೀಳುತ್ತವೆ. ಇದರಿಂದ ಸ್ಟೇಷನ್ ಕೂಡ ಲಕ್ಷಣವಾಗಿ ಕಾಣಿಸುವುದಿಲ್ಲ. ಪೊಲೀಸ್ ಠಾಣೆ ಸುತ್ತ ಮುತ್ತಲಿನ ಆವರಣ ಶುಚಿಯಾಗಿಡಬೇಕು. ಹೀಗಾಗಿ ಆಕ್ಸಿಡೆಂಟ್ ವಾಹನಗಳು ಇಟ್ಟುಕೊಳ್ಳುವ ಅವಶ್ಯಕತೆ ಇಲ್ಲ. ಇನ್ನು ಮುಂದೆ 24 ಗಂಟೆಯಲ್ಲಿ ಪರಿಶೀಲನೆ ನಡೆಸಿ ವಾಪಸ್ ನೀಡಲಾಗುತ್ತದೆ ಎಂದರು.