ಬೆಂಗಳೂರು : ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ ಮುಖಂಡರ ಮನೆ ಮೇಲೆ ದಾಳಿ (NIA Raid in kalaburgi) ಮಾಡಿದ್ದಾರೆ.

ಹೌದು, ಕಲಬುರಗಿ ನಗರದಲ್ಲಿ ಎನ್‌ಐಎ ದಾಳಿ ಮಾಡಿದ್ದು, ಪಿಎಫ್ಐ ಸಂಘಟನೆ ಜೊತೆ ಗುರುತಿಸಿಕೊಂಡಿದ್ದ ಮುಖಂಡರ ಮನೆಗಳನ್ನು ಜಾಲಾಡಿದ್ದಾರೆ.
ಎನ್ಐಎ ಅಧಿಕಾರಿಗಳು ನಗರದಲ್ಲಿ ದಾಳಿ ನಡೆಸಿರುವ ಬಗ್ಗೆ ಪೊಲೀಸರಿಗೂ ಮಾಹಿತಿ ಇಲ್ಲ ಎಂದು ತಿಳಿದುಬಂದಿದೆ. ದಾಳಿ ವೇಳೆ ಮಹತ್ವದ ದಾಖಲೆ ಕಲೆ ಹಾಕಿದ್ದಾರೆ ಎನ್ನಲಾಗಿದೆ.
ಆದರೆ, ಯಾವೇಲ್ಲ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎನ್ನೊದನ್ನ ಎನ್ಐಎ ಅಧಿಕಾರಿಗಳು ಬಿಟ್ಟುಕೊಟ್ಟಿಲ್ಲ. ತನಿಖೆ ಪ್ರಗತಿಯಲ್ಲಿದೆ ಎಂದು ಮಾತ್ರ ಮಾಹಿತಿ ನೀಡಿದ್ದಾರೆ. ಕಳೆದ ಬಾರಿ ಪಿಎಫ್ ಐ ಜಿಲ್ಲಾಧ್ಯಕ್ಷ ಹಾಗೂ ಖಜಾಂಚಿ ಮನೆಗಳ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸುವ ವೇಳೆ ಪೊಲೀಸರ ನೆರವನ್ನು ಅಧಿಕಾರಿಗಳು ಪಡೆದಿದ್ದರು. ಆದರೆ ಈ ಬಾರಿ ಯಾವುದೇ ಮಾಹಿತಿ ಪೊಲೀಸರಿಗೂ ನೀಡಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇನ್ನು ಕಳೆದ ಸೆಪ್ಟಂಬರ್ 22 ರಂದು ನಗರದಲ್ಲಿ ದಾಳಿ ನಡೆಸಿದ ರಾಷ್ಟ್ರೀಯ ತನಿಕಾ ದಳದ ಅಧಿಕಾರಿಗಳು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಜಿಲ್ಲಾಧ್ಯಕ್ಷ ಏಜಾಜ್ ಅಲಿ, ಖಂಜಾಂಚಿ ಶಾಹಿದ್ ನಾಶೀರ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದರು.
5 ವರ್ಷಗಳ ಕಾಲ ಪಿಎಫ್ಐ ನಿಷೇಧ
ದೇಶಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಮೇಲೆ ದಾಳಿ ಹಾಗೂ ಹಲವಾರು ಮಂದಿ ಮುಖಂಡರು, ಕಾರ್ಯಕರ್ತರ ಬಂಧನದ ನಂತರ ಮಹತ್ವದ ಬೆಳವಣಿಗೆ ನಡೆದಿತ್ತು. ಪಿಎಫ್ಐ ಸಂಘಟನೆಯನ್ನು ಕೇಂದ್ರ ಸರಕಾರ 5 ವರ್ಷಗಳ ಕಾಲ ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿತ್ತು.