ಬೆಂಗಳೂರು : ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda) ಹಾಗೂ ಗೃಹ ಸಚಿವ ಅಮಿತ್ ಶಾ (Amith Shah) ಅವರು ಚುನಾವಣಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂಬ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.

ಈ ಸಂಬಂಧ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆಯೇ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: PM Narendra Modi : ಹವಾಯಿ ಚಪ್ಪಲಿ ಧರಿಸುವವನೂ ವಿಮಾನ ಪ್ರಯಾಣ ಮಾಡಬೇಕು : ನರೇಂದ್ರ ಮೋದಿ
ಕಾಂಗ್ರೆಸ್ ಎಷ್ಟು ಹತಾಶರಾಗಿದ್ದಾರೆ ಎಂದು ಸಿದ್ದರಾಮಯ್ಯ ಅವರ ಈ ಮಾತುಗಳು ತಿಳಿಸುತ್ತದೆ. ಪ್ರಧಾನಿ ಮೋದಿಯವರ ಭೇಟಿ ಸಂದರ್ಭದಲ್ಲಿ ಅವರಿಗೆ ದೊರೆತ ಜನಬೆಂಬಲ ಕಂಡು ಆತಂಕಗೊಂಡು ಈ ಮಾತುಗಳನ್ನಾಡುತ್ತಾರೆ. ಒಬ್ಬ ಅನುಭವಿ ಮಾಜಿ ಮುಖ್ಯಮಂತ್ರಿಗಳು ಈ ರೀತಿ ಮಾತನಾಡುವುದು ಎಷ್ಟು ಸರಿ ಎನ್ನುವುದನ್ನು ಜನರಿಗೆ ಬಿಡುತ್ತೇವೆ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ನಿವೃತ್ತರಾಗುವ ವಯಸ್ಸಲ್ಲ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇದು ತಮ್ಮ ಕೊನೆಯ ಚುನಾವಣೆ ಎಂದಿರುವ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರಸ್ವಾಮಿ ಅವರು ಯಾವ ಸಂದರ್ಭದಲ್ಲಿ ಹೇಳಿದ್ದಾರೆ ಎಂದು ತಿಳಿದಿಲ್ಲ. ಅವರದ್ದು ನಿವೃತ್ತಿ ಯಾಗುವ ವಯಸ್ಸಲ್ಲ ಎಂದು ತಿಳಿಸಿದ್ದಾರೆ.
ಕುಮಾರಸ್ವಾಮಿ ಅವರು ಬಹಳ ಸೇವೆಯನ್ನು ಮಾಡಬೇಕು. ಚುನಾವಣೆ ಸಂದರ್ಭದಲ್ಲಿ ಎಲ್ಲಾ ರೀತಿಯದ್ದೂ ನಡೆಯುತ್ತದೆ. ಪ್ರತಿ ಚುನಾವಣೆಗೂ ಜನರ ಪ್ರಬುದ್ಧತೆ ಹೆಚ್ಚಾಗಿದೆ. ನಾವು ಮಾತನಾಡುವಾಗ ಅದರ ಹಿಂದಿನ ಚಿಂತನೆ, ಕಲ್ಪನೆ ಜನರಿಗೆ ತಿಳಿಯುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ದಾವಣಗೆರೆಯಲ್ಲಿ ಬೃಹತ್ ಸಮಾವೇಶ
ಮಾರ್ಚ್ ಒಂದರಿಂದ ನಾಲ್ಕರವರೆಗೆ ರಥಯಾತ್ರೆ ಪ್ರಾರಂಭವಾಗಲಿದೆ. ಎಲ್ಲಾ ಮತ ಕ್ಷೇತ್ರಗಳಿಗೆ ಭೇಟಿ ನೀಡಿ ದಾವಣಗೆರೆಯಲ್ಲಿ ಬೃಹತ್ ಸಮಾವೇಶವಾಗಲಿದೆ. ಈ ರಥಯಾತ್ರೆ ಸಂದರ್ಭದಲ್ಲಿ ಹಲವಾರು ಜನ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಧಾನಮಂತ್ರಿಗಳು, ಗೃಹ ಸಚಿವರು, ಬಿಜೆಪಿ ಅಧ್ಯಕ್ಷ ನಡ್ಡಾ ಅವರು ಹಾಗೂ ಧರ್ಮೇಂದ್ರ ಪ್ರಧಾನ್ ಅವರೂ ರಾಜ್ಯಕ್ಕೆ ಬಂದು ಹೋಗಿದ್ದು, ದೊಡ್ಡ ಪ್ರಮಾಣದಲ್ಲಿ ಪ್ರಚಾರವಾಗುತ್ತದೆ ಹಾಗೂ ಎಲ್ಲಾ ಪ್ರಮುಖ ನಾಯಕರೂ ಬರುತ್ತಾರೆ ಎಂದು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.