ಬೆಂಗಳೂರು : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ (MLA Election) ಬಹುಮತ ಪಡೆಯುವ ಹುಮ್ಮಸ್ಸಿನಲ್ಲಿರುವ ರಾಜ್ಯ ಕಾಂಗ್ರೆಸ್‌ಗೆ (Congress Karnataka) ಮೈಸೂರು (Mysore) ಭಾಗದಿಂದ ಬಿಗ್ ಶಾಕ್ ಎದುರಾಗಿದೆ.

ಹೌದು, ಮೈಸೂರು ಜಿಲ್ಲೆಯ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್ (Tanveer Sait) ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ.
ಇದನ್ನೂ ಓದಿ: Hassan Constituency: ಹಾಸನ ಟಿಕೆಟ್ ಫೈಟ್ : ಟಿಕೆಟ್ ಕಗ್ಗಂಟು ನಿವಾರಣೆಗೆ ಬರಲಿದ್ದಾರೆ ದೇವೇಗೌಡ್ರು
ನನಗೆ ಈ ಬಾರಿ ಟಿಕೆಟ್ ಬೇಡ
ರಾಜಕೀಯ ನಿವೃತ್ತಿ ಯಾಕೆ ಎಂದು ತಿಳಿಸಿರುವ ಶಾಸಕ ತನ್ವೀರ್ ಸೇಠ್, ಅನಾರೋಗ್ಯದ ಕಾರಣ ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ನನಗೆ ಈ ಬಾರಿ ಟಿಕೆಟ್ ಬೇಡ. ನಾನು ಇನ್ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ.

ನನ್ನ ಮೇಲೆ ಹಲ್ಲೆಯಾದ ಬಳಿಕ ಆರೋಗ್ಯ ತುಂಬಾ ಏರುಪೇರಾಗಿದೆ. ಮೊದಲಿನಂತೆ ನಾನು ಮಾನಸಿಕ ಹಾಗೂ ದೈಹಿಕವಾಗಿಯೂ ಶಕ್ತಿಯುತವಾಗಿಲ್ಲ. ಹಾಗಾಗಿ ನನಗೆ ಟಿಕೆಟ್ ಬೇಡ. ಆದ್ರೆ ಕಾಂಗ್ರೆಸ್‌ನಲ್ಲೇ ಇರುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
2019ರ ನವೆಂಬರ್ 17ರ ರಾತ್ರಿ ವಿವಾಹ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೇಳೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಡಿಪಿಐ ಕಾರ್ಯಕರ್ತ ಫರ್ಹಾನ್ ಪಾಷಾ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.